ತಾಜಾ ಸುದ್ದಿಲೇಖನಗಳು

ಕೃಷ್ಣ ಜನ್ಮಾಷ್ಟಮಿಯ ದಿನ ವ್ರತದ ಆಚರಣೆ: ಹೇಗೆ ಮಾಡಬೇಕು – ಏನೆಲ್ಲ ಕೃತಿ ಮಾಡಬೇಕು

Share Below Link

ಭಾರತದಲ್ಲಷ್ಟೇ ಅಲ್ಲ, ಸಂಪೂರ್ಣ ವಿಶ್ವದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅರ್ಥಾತ್ ಶ್ರೀಕೃಷ್ಣ ಜಯಂತಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಇದೆ ಸೆ.೬ರ ಇಂದು ಶ್ರೀ ಕೃಷ್ಣಜನ್ಮಾಷ್ಟಮಿಯಿದ್ದು, ಇದು ಹಿಂದೂ ಧರ್ಮದಲ್ಲಿನ ಒಂದು ಹಬ್ಬ, ವ್ರತ ಮತ್ತು ಉತ್ಸವವಾಗಿದೆ. ಬನ್ನಿ ಇದರ ಆಚರಣೆಯ ಸವಿಸ್ತಾರ ಮಾಹಿತಿ ತಿಳಿಯೋಣ !
ಶ್ರೀ ಕೃಷ್ಣಜನ್ಮಾಷ್ಟಮಿಯ ಉತ್ಸವ :
ಗೋಕುಲ, ಮಥುರಾ, ಬೃಂದಾವನ, ದ್ವಾರಕಾ, ಪುರಿ ಇವು ಶ್ರೀ ಕೃಷ್ಣನ ಉಪಾಸನೆಗೆ ಸಂಬಂಧಿಸಿದ ಪವಿತ್ರಸ್ಥಾನಗಳಾಗಿವೆ. ಇಲ್ಲಿ ಈ ಉತ್ಸವವನ್ನು ವಿಶೇಷ ರೂಪದಲ್ಲಿ ಆಚರಿಸಲಾಗುತ್ತದೆ. ಈ ದಿನ ಬೃಂದಾವನದಲ್ಲಿ ಡೋಲೋತ್ಸವವಾಗುತ್ತದೆ. ಅದು ನೋಡಲು ಆನಂದದಾಯಕವಾಗಿರುತ್ತದೆ. ಇತರ ಕ್ಷೇತ್ರಗಳ ಅನೇಕ ಸ್ಥಳಗಳಲ್ಲಿ ಶ್ರೀ ಕೃಷ್ಣನ ದೇವಾಲಯದಲ್ಲಿ ಈ ಉತ್ಸವವನ್ನು ಆಚರಿಸಲಾಗುತ್ತದೆ.
ಈ ದಿನ ಕೆಲವರು ತಮ್ಮ ಮನೆಯಲ್ಲಿಯೇ ಗೋಕುಲ-ಬೃಂದಾವನದಂತೆ ಪ್ರತಿರೂಪ ಮಾಡಿ ಶ್ರೀಕೃಷ್ಣನ ಜನ್ಮೋತ್ಸವವನ್ನು ಆಚರಿಸುತ್ತಾರೆ. ವೈಷ್ಣವ ಪಂಥೀಯರು ಈ ದಿನವನ್ನು ಅತೀವ ಭಕ್ತಿಭಾವದಿಂದ ಆಚರಿಸುತ್ತಾರೆ. ಅನೇಕ ವೈಷ್ಣವ ದೇವಾಲಯಗಳಲ್ಲಿ ದೀಪಾರಾಧನೆ, ಶೋಭಾಯಾತ್ರೆ, ಕೃಷ್ಣಲೀಲೆ, ಭಾಗವತ ಪಠಣ, ಕೀರ್ತನೆ, ಭಜನೆ, ನೃತ್ಯ-ಗಾಯನ ಇತ್ಯಾದಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಈ ಕಾರ್ಯಕ್ರಮವು ಶ್ರಾವಣ ಕೃಷ್ಣ ಪಾಡ್ಯದಿಂದ ಶ್ರಾವಣ ಕೃಷ್ಣಾಷ್ಟಮಿಯವರೆಗೂ ನಡೆಯುತ್ತದೆ.
ಶ್ರೀ ಕೃಷ್ಣಜನ್ಮಾಷ್ಟಮಿ ವ್ರತ :
ಈ ವ್ರತವನ್ನು ಅಷ್ಟಮಿಯಂದು ಮಾಡಲಾಗುತ್ತದೆ ಮತ್ತು ಎರಡನೆಯ ದಿನ ಅರ್ಥಾತ್ ಶ್ರಾವಣ ಕೃಷ್ಣ ನವಮಿಯಂದು ಪಾರಾಯಣ ಮಾಡಿ ವ್ರತವನ್ನು ಸಂಪನ್ನಗೊಳಿಸುತ್ತಾರೆ. ಈ ವ್ರತವು ಎಲ್ಲರೂ ಮಾಡುವಂತಹzಗಿದೆ. ಈ ವ್ರತವನ್ನು ಮಕ್ಕಳು, ಯುವಕರು, ವೃದ್ಧರು, ಸ್ತ್ರೀ- ಪುರುಷರು ಎಲ್ಲರೂ ಮಾಡಬಹುದು. ಪಾಪನಾಶ, ಸೌಖ್ಯವೃದ್ಧಿ, ಸಂತತಿ-ಸಂಪತ್ತಿ ಮತ್ತು ವೈಕುಂಠ ಪ್ರಾಪ್ತಿಯು ಈ ವ್ರತದ ಫಲವಾಗಿದೆ.
ಶ್ರೀ ಕೃಷ್ಣಜನ್ಮಾಷ್ಟಮಿಯ ವ್ರತಕ್ಕೆ
ಸಂಬಂಧಿಸಿದ ಉಪವಾಸ :
ಈ ದಿನ ದಿನವಿಡೀ ಉಪವಾಸವನ್ನು ಮಾಡಲಾಗುತ್ತದೆ. ನಿರಾಹಾರ ಉಪವಾಸವು ಸಾಧ್ಯವಿಲ್ಲದಿದ್ದರೆ ಫಲಾಹಾರ ಮಾಡಬಹುದು. ಇದಕ್ಕೆ ಒಂದು ದಿನ ಮುಂಚೆ ಅರ್ಥಾತ್ ಶ್ರಾವಣ ಕೃಷ್ಣ ಸಪ್ತಮಿಯಂದು ಅಂಶಾತ್ಮಕ ಭೋಜನವನ್ನು ಮಾಡುತ್ತಾರೆ.
ಶ್ರೀ ಕೃಷ್ಣಜನ್ಮಾಷ್ಟಮಿಯ ಪೂಜಾವಿಧಿ :
ಶ್ರೀ ಕೃಷ್ಣ ಜಯಂತಿಯಂದು ಶ್ರೀ ಕೃಷ್ಣನ ವಿಶೇಷ ಪೂಜೆಯನ್ನು ಮಾಡಲಾಗುತ್ತದೆ. ಭಗವಾನ್ ಶ್ರೀ ಕೃಷ್ಣನು ಮಧ್ಯರಾತ್ರಿಯಲ್ಲಿ ಜನಿಸಿದ್ದನು. ಆದುದರಿಂದ ಶ್ರೀ ಕೃಷ್ಣನ ವಿಶೇಷ ಪೂಜೆಯನ್ನು ಮಧ್ಯರಾತ್ರಿಯಲ್ಲಿ ಮಾಡಲಾಗುತ್ತದೆ. ಮಧ್ಯರಾತ್ರಿ ಸ್ನಾನವನ್ನು ಮಾಡಿ ಪೂಜೆಯನ್ನು ಆರಂಭಿಸಲಾಗುತ್ತದೆ. ಭಗವಾನ್ ಶ್ರೀ ಕೃಷ್ಣನ ಜನ್ಮವಾಗಿದೆ ಎಂಬ ಧಾರಣೆಯಿಂದ ಪೂಜೆಯನ್ನು ಮಾಡಬೇಕು.
ಶ್ರೀಕೃಷ್ಣಜನ್ಮಾಷ್ಟಮಿಯಂದು
ಇವುಗಳನ್ನು ಮಾಡಿ !
೧. ತಮ್ಮ ಬಂಧು ಮಿತ್ರರಿಗೆ ಕಿರುಸಂದೇಶಗಳನ್ನು ಕಳುಹಿಸಿ ಅವರಿಗೆ ಶ್ರೀ ಕೃಷ್ಣನ ನಾಮಜಪವನ್ನು ಮಾಡಲು ಹೇಳಿರಿ.
೨. ಶ್ರೀ ಕೃಷ್ಣನ ದೇವಸ್ಥಾನದಲ್ಲಿ ಸ್ವಚ್ಛತೆಯ ಸೇವೆಯನ್ನು ಮಾಡಿ.
೩. ಶ್ರೀ ಕೃಷ್ಣನ ಅವಮಾನವಾಗುತ್ತಿರುವುದು ಕಂಡು ಬಂದಲ್ಲಿ ಅದನ್ನು ತಡೆಗಟ್ಟಿರಿ.
೪. ಈ ದಿನ ಕೃಷ್ಣತತ್ತ್ವವು ಹೆಚ್ಚು ಪ್ರಮಾಣದಲ್ಲಿರುವುದರಿಂದ ಅದನ್ನು ಗ್ರಹಿಸಲು ಓಂ ನಮೋ ಭಗವತೇ ವಾಸುದೇವಾಯ ನಾಮಜಪವನ್ನು ಮಾಡಿ.
ಶ್ರೀ ಕೃಷ್ಣ ಜಯಂತಿಯಂದು ಶ್ರೀ ಕೃಷ್ಣತತ್ತ್ವವು ಇತರ ದಿನಗಳ ತುಲನೆಯಲ್ಲಿ ಹೆಚ್ಚು ಪ್ರಮಾಣದಲ್ಲಿ ಅಂದರೆ ೧ ಸಾವಿರ ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ. ಆದುದರಿಂದ ಶ್ರೀ ಕೃಷ್ಣನ ಚೈತನ್ಯದಾಯಕ ತತ್ತ್ವಲಹರಿಗಳು ಪೃಥ್ವಿಯ ಮೇಲೆ ಹೆಚ್ಚು ಪ್ರಮಾಣದಲ್ಲಿ ಆಕರ್ಷಿತವಾಗುತ್ತವೆ. ಈ ಲಹರಿಗಳಿಂದ ಜೀವಕ್ಕೆ ವ್ಯಾವಹಾರಿಕ ಮತ್ತು ಆಧ್ಯಾತ್ಮಿಕ ಈ ಎರಡೂ ಸ್ತರಗಳಲ್ಲಿ ಲಾಭವಾಗುತ್ತದೆ. ಈ ಕಾರ್ಯನಿರತ ತತ್ತ್ವಲಹರಿಗಳ ಸಂಪೂರ್ಣ ಲಾಭವನ್ನು ಪಡೆದುಕೊಳ್ಳಲು ಈ ದಿನ ಓಂ ನಮೋ ಭಗವತೇ ವಾಸುದೇವಾಯ| ಈ ನಾಮಜಪವನ್ನು ಹೆಚ್ಚೆಚ್ಚು ಮಾಡಿರಿ.
ಕೃಷ್ಣಗಾಯತ್ರಿ
ದೇವಕೀನಂದನಾಯ ವಿದ್ಮಹೇ |
ವಾಸುದೇವಾಯ ಧೀಮಹಿ |
ತನ್ನೋ ಕೃಷ್ಣಃ ಪ್ರಚೋದಯಾತ್ ||
ಅರ್ಥ : ನಾವು ದೇವಕೀಪುತ್ರ ಕೃಷ್ಣನನ್ನು ಅರಿತಿದ್ದೇವೆ. ವಾಸುದೇವನ ಧ್ಯಾನ ಮಾಡುತ್ತೇವೆ. ಆ ಕೃಷ್ಣನು ನಮ್ಮ ಬುದ್ಧಿಗೆ ಸತ್ ಪ್ರೇರಣೆ ಕೊಡಲಿ.
ಆಧಾರ:ಖZZಠಿZ.ಟ್ಟಜ/hZZbZ
ಸಂಗ್ರಹ : ವಿನೋದ್ ಕಾಮತ್