ಕಾಂಗೆಸ್ಗೆ ಸೆಡ್ಡು ಹೊಡೆಯಲು ಮಾಸ್ಟರ್ ಪ್ಲಾನ್; ಬಿಜೆಪಿ – ಜೆಡಿಎಸ್ ಮೈತ್ರಿಗೆ ಗ್ರೀನ್ ಸಿಗ್ನಲ್…
ಬೆಂಗಳೂರು: ಮುಂಬರುವ ೨೦೨೪ರ ಲೋಕಸಭೆ ಚುನಾವಣೆ ಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡು ಸ್ಪರ್ಧೆಗಿಳಿಯಲಿದ್ದು ಬಹುತೇಕ ಸೀಟು ಹಂಚಿಕೆ ಅಂತಿಮ ಗೊಂಡಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮೈತ್ರಿಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿzರೆ.
ಬಿಜೆಪಿ-ಜೆಡಿಎಸ್ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿ ಕೊಳ್ಳುವುದು ಬಹುತೇಕ ಖಚಿತ. ರಾಷ್ಟ್ರ ಹಾಗೂ ರಾಜ್ಯದ ಜನತೆಯ ದೃಷ್ಟಿಯಿಂದ ಈ ಮೈತ್ರಿ ಅನಿವಾರ್ಯವಾಗಿದೆ. ಸೀಟು ಹಂಚಿಕೆ ಕೂಡ ಅಂತಿಮಗೊಂಡಿದೆ ಎಂದ ಅವರು, ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡರೆ ಮುಂಬರುವ ಲೋಕಸಭೆ ಚುನಾವಣೆಗೆ ಸಹಕಾರಿಯಾಗಲಿದೆ. ಕೋಲಾರ, ಹಾಸನ, ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್ಗೆ ಬಿಟ್ಟು ಕೊಡುತ್ತೀರ ಎಂಬ ಪ್ರಶ್ನೆಗೆ ಸ್ಪಷ್ಟ ಉತ್ತರ ನೀಡದಿರುವ ಬಿಎಸ್ವೈ, ಇದು ಏನಿದ್ದರೂ ಹೈಕಮಾಂಡ್ ಮಟ್ಟದ ನಿರ್ಧಾರಗೊಳ್ಳಬೇಕು. ಆದರೆ ಒಂದಂತೂ ಸತ್ಯ. ಎರಡು ಪಕ್ಷಗಳ ನಡುವೆ ಸಣ್ಣಪುಟ್ಟ ಗೊಂದಲಗಳಿದ್ದರೂ ಹೊಂದಾಣಿಕೆ ಮಾಡಿಕೊಳ್ಳುತ್ತೇವೆ ಎಂದು ಪ್ರಕಟಿಸಿದರು.
ಇತ್ತೀಚೆಗೆ ನವದೆಹಲಿಗೆ ತೆರಳಿದ್ದ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ಮೈತ್ರಿ ಕುರಿತಂತೆ ಮಾತುಕತೆ ನಡೆಸಿzರೆ ಎಂಬ ಮಾತು ಕೇಳಿಬಂದ ಬೆನ್ನ ಯಡಿಯೂರಪ್ಪನವರ ಈ ಮಾತು ರಾಜಕೀಯ ವಲಯದಲ್ಲಿ ಮಹತ್ವ ಪಡೆದುಕೊಂಡಿದೆ.
ಈ ತಿಂಗಳ ಅಂತ್ಯಕ್ಕೆ ಎರಡು ಪಕ್ಷಗಳ ನಡುವೆ ಮೈತ್ರಿ ಕುರಿತು ಅಂತಿಮ ಮಾತುಕತೆ ನಡೆಯುವ ಸಂಭವವಿದ್ದು, ಜೆಡಿಎಸ್ ೫ರಿಂದ ೬ ಕ್ಷೇತ್ರಗಳಲ್ಲಿ ಹಾಗೂ ಬಿಜೆಪಿ ಉಳಿದ ಕಡೆ ಸ್ಪರ್ಧೆ ಮಾಡಲಿದೆ. ಕ್ಷೇತ್ರ ಹೊಂದಾಣಿಕೆ ಕುರಿತಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಗೃಹ ಸಚಿವ ಅಮಿತ್ ಷಾ ಜೊತೆ ದೇವೇಗೌಡರು ಮತ್ತು ಕುಮಾರಸ್ವಾಮಿಯವರು ಮಾತುಕತೆ ನಡೆಸಿದ ಮೇಲೆ ಅಂತಿಮ ಸ್ವರೂಪ ಗೊತ್ತಾಗಲಿದೆ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ವಿರುದ್ಧ ಪ್ರಬಲವಾಗಿ ಹೋರಾಡಲು ವಿಪಕ್ಷಗಳ ಮಧ್ಯೆ ಮೈತ್ರಿ ಬಹಳ ಮುಖ್ಯವಾಗಿದೆ. ನಾವು ಒಗ್ಗಟ್ಟಾಗಿ ಸರ್ಕಾರ ವಿರುದ್ಧ ಹೋರಾಡುತ್ತೇವೆ ಎಂದು ಮಾಧ್ಯಮ ಪ್ರತಿನಿಧಿಗಳ ಮುಂದೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿzರೆ.