ಸ್ಮಾರ್ಟ್ಸಿಟಿ ಸಮಸ್ಯೆಗಳ ಕುರಿತು ಸಾರ್ವಜನಿಕರಿಂದ ದೂರು ಸಲ್ಲಿಕೆ
ಶಿವಮೊಗ್ಗ : ಶಿವಮೊಗ್ಗ ಸ್ಮಾರ್ಟ್ಸಿಟಿ ಲಿಮಿಟೆಡ್ ವತಿ ಯಿಂದ ಅನುಷ್ಟಾನಗೊಳಿಸ ಲಾಗಿರುವ ವಿವಿಧ ಕಾಮಗಾರಿ ಗಳಿಗೆ ಸಂಬಂಧಿಸಿದಂತೆ ಮಂಗ ಳವಾರ ಕುವೆಂಪು ರಂಗ ಮಂ ದಿರದಲ್ಲಿ ಸಾರ್ವಜನಿಕ ಕುಂದು ಕೊರತೆ ಅಹವಾಲು ಸ್ವೀಕಾರ ಮತ್ತು ಪರಿಹಾರಾತ್ಮಕ ಕ್ರಮ ಗಳ ಬಗ್ಗೆ ಸಭೆ ನಡೆಸಲಾ ಯಿತು.
ಶಿವಮೊಗ್ಗ ಸ್ಮಾರ್ಟ್ಸಿಟಿ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ ಕೆ.ಮಾಯಣ್ಣ ಗೌಡ ಮಾತನಾಡಿ, ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆಗೆ ೯೩೦ ಕೋಟಿ ಮಂಜೂರಾ ಗಿದ್ದು, ೭೧ ಕಾಮಗಾರಿಗಳ ಪೈಕಿ ೬೬ ಕಾಮಗಾರಿಗಳು ಭೌತಿ ಕವಾಗಿ ಮತ್ತು ಆರ್ಥಿಕವಾಗಿ ಪೂರ್ಣಗೊಂಡಿದೆ. ೫ ಕಾಮ ಗಾರಿಗಳು ಪ್ರಗತಿಯಲ್ಲಿವೆ. ೬.೦ ಚ.ಕಿ.ಮೀ ನ್ನು ಎಬಿಡಿ ಏರಿಯಾ ಅಭಿವೃದ್ದಿಗೆ ಪರಿಗಣಿಸಲಾಗಿದೆ.
ದಿ: ೩-೯-೨೦೨೦ ರಿಂದ ೧-೬-೨೦೨೨ ರವರೆಗೆ ಒಟ್ಟು ೯೫೨ ಅಹವಾಲು ಸ್ವೀಕರಿಸಿ ವಿಲೇವಾರಿ ಮಾಡಲಾಗಿದೆ. ದಿ: ೧-೬-೨೦೨೨ ರಿಂದ ಪ್ರಸ್ತುತದವರೆಗೆ ೧೪೦೮ ಅಹಲವಾಲು ಸ್ವೀಕರಿಸಿದ್ದು ೧೩೮೫ ವಿಲೇವಾರಿಯಾಗಿದ್ದು ೨೩ ಬಾಕಿ ಉಳಿದಿದೆ ಎಂದು ತಿಳಿಸಿದರು.
ಇಂದಿನ ಸಭೆಯಲ್ಲಿ ಸ್ವೀಕರಿ ಸಲಾಗುವ ಅಹವಾಲುಗಳನ್ನು ವರ್ಗೀಕರಿಸಿ ಕ್ರಿಯಾಯೋಜನೆ ರೂಪಿಸಿ ಸರಿಪಡಿಸಲು ಕ್ರಮ ವಹಿ ಸಲಾಗುವುದು ಎಂದು ತಿಳಿಸಿದರು.
ಗ್ರಾಹಕ ಹಿತರಕ್ಷಣೆ ಒಕ್ಕೂಟದ ಅಧ್ಯಕ್ಷ ಸತೀಶ್ ಕುಮಾರ್ ಶೆಟ್ಟಿ ಮಾತನಾಡಿ, ಸ್ಮಾರ್ಟ್ಸಿಟಿ ಕಾಮ ಗಾರಿಗಳ ಕುರಿತು ನಾಗರೀಕರಲ್ಲಿ ಅನೇಕ ದೂರುಗಳಿವೆ. ಸಮಸ್ಯೆ ಪರಿಹಾರಕ್ಕೆ ಮೊದಲು ಸ್ಥಳವೀಕ್ಷಣೆ ಆಗಬೇಕು. ಹಲವಾರು ವಿಷಯ ಗಳಲ್ಲಿ ಸ್ಪಷ್ಟತೆ ಇಲ್ಲ. ಸ್ಮಾರ್ಟ್ಸಿಟಿ ಕಾಮಗಾರಿಗಳಿಗೆ ಸ್ಮಾರ್ಟ್ಸಿಟಿ ಯಿಂದ ೫ ವರ್ಷಗಳ ನಿರ್ವಹಣೆ ಇದೆ ಎಂದಿದ್ದು, ಕಾಲಾವಧಿಯನ್ನು ತಿಳಿಸಬೇಕು. ಹಾಗೂ ಭಾಗೀ ದಾರರ ಸಭೆಗಳು ನಡೆದಿಲ್ಲ. ಆದ್ದ ರಿಂದ ಅನೇಕ ಸಮಸ್ಯೆಗಳು ತಲೆ ದೋರಿವೆ ಎಂದರು.
ಸ್ಮಾರ್ಟ್ಸಿಟಿ ಕಾರ್ಯಪಾಲಕ ಅಭಿಯಂತರ ಕೃಷ್ಣಪ್ಪ ಉತ್ತರಿಸಿ, ದಿ: ೩-೬-೨೦೨೩ ರಿಂದ ೫ ವರ್ಷ ಗಳ ಕಾಲ ಪಾರ್ಕ್ ಹೊರತುಪಡಿಸಿ ಇನ್ನುಳಿದ ಕಾಮಗಾರಿಗಳಿಗೆ ಸ್ಮಾಟ್ ಸಿಟಿ ವತಿಯಿಂದ ನಿರ್ವಹಣೆ ಇದೆ ಎಂದರು.
ನಾಗರೀಕ ಹಿತ ರಕ್ಷಣಾ ವೇದಿಕೆಯ ಜನಾರ್ಧನ ಪೈ ಮಾತ ನಾಡಿ, ಸ್ಮಾರ್ಟ್ ಸಿಟಿ ವತಿಯಿಂದ ನಗರದಲ್ಲಿ ರೂ.೨.೫ ಕೋಟಿ ವೆಚ್ಚದಲ್ಲಿ ಗ್ರೀನ್ ಅರ್ಬನೈಸೇಷನ್ ಕೈಗೊಳ್ಳಲಾಗಿದೆ. ಎಲ್ಲಿ ಗಿಡಗಳನ್ನು ನೆಡಲಾಗಿದೆ. ಗಿಡಗಳು ಯಾವ ಸ್ಥಿತಿಯಲ್ಲಿವೆ. ಕಾರ್ಯಪಾಲಕ ಇಂಜಿನಿಯರ್ ೮೬೦೦ ಗಿಡಗಳು ಇzವೆ ಎನ್ನುತ್ತಿದ್ದು, ಅದರ ಬಗ್ಗೆ ಭೌತಿಕ ಪರಿಶೀಲನೆ ಆಗಬೇಕು. ಲಕ್ಷ್ಮಿ ಟಾಕೀಸ್ ರಸ್ತೆಯಲ್ಲಿ ಸಾರ್ವಜನಿಕರು ಬೇಡವೆಂದರೂ ಉಪಯೋಗವಿಲ್ಲದ ಸೈಕಲ್ ಪಾಥ್ ನಿರ್ಮಿಸಲಾಗಿದೆ. ಸರ್ವೇ ವರದಿ ಪಡೆಯುವ ವೇಳೆ ಇಲ್ಲಿ ಪಾಥ್ ಬೇಡ ಎಂದಿzವು. ಹಾಗೂ ಸ್ಮಾರ್ಟ್ಸಿಟಿ ಕೇಬಲ್ ಕೆಲಸದಲ್ಲಿ ಕಳಪೆ ವೈರ್ ಬಳಕೆಯಾಗಿದ್ದು, ಜನರು ಭಯದಲ್ಲಿzರೆ. ಅನಾ ಹುತಗಳು ಸಂಭವಿಸಿದರೆ ಅದಕ್ಕೆ ಸಂಬಂಧಿಸಿದ ಅಧಿಕಾರಿಗಳೇ ಹೊಣೆ ಎಂದರು.
ಚನ್ನಪ್ಪ ಲೇಔಟ್ನ ನಾಗರಿ ಕರು ಮಾತನಾಡಿ, ತಮ್ಮ ಭಾಗದಲ್ಲಿ ಒಂದು ಕಾಂಕ್ರಿಟ್ ಭರಿತವಾದ ಕಂಬ ಇದ್ದು ಅತ್ಯಂತ ಅಪಾಯ ಕಾರಿಯಾಗಿದೆ. ಹಾಗೂ ಯುಜಿಡಿ ಕಾಮಗಾರಿಗೆ ಮನೆ ಮುಂದೆ ನೆಲ ಅಗೆಯುತ್ತಾರೆ ಅದನ್ನು ಮುಚ್ಚು ವುದಿಲ್ಲ. ಮತ್ತೆ ೧೫ ದಿನಗಳಾದರೂ ಕಸ ತೆಗೆದಕೊಂಡು ಹೋಗು ವುದಿಲ್ಲವೆಂದು ದೂರಿದರು.
ರವೀಂದ್ರನಗರದ ವಕೀಲ ರಾದ ಸೋಮಣ್ಣ ಮಾತನಾಡಿ, ತಮ್ಮ ವಾರ್ಡ್ನಲ್ಲಿ ಸ್ಮಾರ್ಟ್ಸಿಟಿ ಕೆಲಸ ಪೂರ್ಣಗೊಂಡಿಲ್ಲ. ಯುಜಿ ಡಿ ಕೆಲಸ ಅಪಾಯಕಾರಿಯಾಗಿದೆ. ೨೪ಗಿ೭ ನೀರು ಇರಲಿ ೨ ಗಂಟೆ ಕೂ ಡ ನೀರು ಬರುವುದಿಲ್ಲ ಎಂದರು.
ವಕೀಲರಾದ ಚಂದ್ರಕಾಂತ್ ಮಾತನಾಡಿ, ಗಾರ್ಡನ್ ಏರಿಯಾ ದಲ್ಲಿ ಯಾವ ರಸ್ತೆಯೂ ಸರಿ ಇಲ್ಲ. ನೀರಿನ ಪೈಪ್ಗಳು ಒಡೆದು ಹೋಗಿವೆ. ಇಲ್ಲಿ ಅಸಮರ್ಪಕ ವಾಗಿ ಚರಂಡಿ ಕೆಲಸ ಮಾಡ ಲಾಗಿದೆ. ಗುತ್ತಿಗೆದಾರರು, ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಣೆ ಮಾಡಿಲ್ಲ ಎಂದರು.
೧೨ ನೇ ವಾರ್ಡಿನಲ್ಲಿ ಮೂ ಲಭೂತ ಸೌಕರ್ಯದ ಕೊರತೆ ಹೆಚ್ಚಿದೆ. ಸಣ್ಣಪುಟ್ಟ ಮಳೆ ಬಂದರೂ ಜನರು ಪೇಚಾಡುವ ಸ್ಥಿತಿ ಇದೆ. ಅಂಗಳಯ್ಯನ ಕೇರಿ ಗೆ ಮೂಲಭೂತ ಸೌಕರ್ಯ ಗಳನ್ನು ಒಗದಿಸಬೇಕೆಂದರು.
ಪಾಲಿಕೆ ಸದಸ್ಯೆ ಸುರೇಖಾ ಮುರಳಿಧರ್ ಮಾತನಾಡಿ, ಸದರಿ ವಾರ್ಡ್ ಶೇ.೧೦೦ ಸ್ಮಾರ್ಟ್ಸಿಟಿ ವ್ಯಾಪ್ತಿಗೆ ಬರು ತ್ತದೆ. ಆದರೆ ೩ ಮುಖ್ಯ ರಸ್ತೆಗಳ ಕೆಲಸ ಆಗದೆ ಬಾಕಿ ಇದೆ. ಇವುಗಳನ್ನು ಹೇಗೆ ಅಭಿವೃದ್ದಿ ಪಡಿಸಬೇಕೆಂದರು.
ರವಿಕಿಶನ್ ಮಾತನಾಡಿ, ಸೀನಪ್ಪಶೆಟ್ಟಿ ವೃತ್ತದಿಂದ ರೈಲ್ವೇ ಸ್ಟೇಷನ್ ವರೆಗಿನ ರಸ್ತೆ ತುಂಬ ಚೇಂಬರ್ಗಳಿವೆ. ಹಲವಾರು ಕಡೆ ಬ್ಯಾರಿಕೇಡ್ ಹಾಕಿ ದ್ದು, ದಿನದಿಂದ ದಿನಕ್ಕೆ ಈ ಬ್ಯಾರಿ ಕೇಡ್ ಬದಲಾಯಿಸಲಾಗುತ್ತಿರು ತ್ತದೆ. ದ್ವಿಚಕ್ರ ವಾಹನ ಸವಾರರಿಗೆ ಇದು ಸವಾಲಾಗಿದೆ. ಎಂದರು.
ಸಂಬಂಧಿಸಿದ ಅಧಿಕಾರಿ ಮನೋಜ್ ಮಾತನಾಡಿ, ಸದರಿ ರಸ್ತೆಯಲ್ಲಿ ೫೫ ಚೇಂಬರ್ಗಳಿದ್ದು, ೨೦ ಚೇಂಬರ್ ಸಮಸ್ಯೆ ಇತ್ತು. ೮ ನ್ನು ಸರಿಪಡಿಸಲಾಗಿದೆ. ಉಳಿದವ ನ್ನು ಸರಿಪಡಿಸಲಾಗುತ್ತಿದೆ ಎಂದರು.
ಡಾ.ಶ್ರೀನಿವಾಸನ್ ಮಾತ ನಾಡಿ, ವಿನೋಬನಗರದಲ್ಲಿ ರಸ್ತೆ ಯಲ್ಲಿ ಅಂಗಡಿ ಮುಗ್ಗಟ್ಟಿನವರು ತಮ್ಮ ವಸ್ತು ಪ್ರದರ್ಶನಕ್ಕೆ ಇಟ್ಟಿದ್ದು, ನಡೆಯಲಿಕ್ಕೆ ದಾರಿ ಇಲ್ಲದಂತಾಗಿದೆ ಎಂದರು.
ಬಸವನಗುಡಿಯ ರೇಖಾ ಮಾತನಾಡಿ, ತಮ್ಮ ಪ್ರದೇಶದಲ್ಲಿ ಯುಜಿಡಿ ಕೆಲಸ ಕಳಪೆಯಾಗಿದೆ ಹಾಗೂ ಅವೈeನಿಕವಾಗಿದೆ. ಮಳೆ ಬಂದರೆ ನೀರು ಮನೆ ಒಳಗೆ ನುಗ್ಗು ತ್ತದೆ. ಸ್ಮಾರ್ಟ್ಸಿಟಿ ಕಾಮಗಾರಿಗೂ ಮುನ್ನ ಈ ರೀತಿ ಆಗುತ್ತಿರಲಿಲ್ಲ. ಹಾಗೂ ಕನ್ಸರ್ವೆನ್ಸಿಯೂ ಅವೈe ನಿವಕಾಗಿ ಆಗಿದ್ದು ಹೊಸದಾಗಿ ಮಾ ಡಬೇಕಿದೆ. ಸಮರ್ಪಕ ಯೋಜನೆ ಇಲ್ಲದೆ ಕೆಲಸ ಮಾಡಿzರೆ. ಸಮಸ್ಯೆ ಕುರಿತು ಇಂಜಿನಿಯರ್ಗಳಿಗೆ ಕರೆ ಮಾಡಿದರೆ ಮತ್ತೊಬ್ಬರ ಮೇಲೆ ಹೇಳುತ್ತಾರೆ. ಸರಿಯಾದ ಸ್ಪಂದನೆ ಇಲ್ಲ ಎಂದು ದೂರಿದ ಅವರು ಮುಂದೆ ಮಾಡುವ ಕೆಲಸವನ್ನಾ ದರೂ ಸಮರ್ಪಕವಾಗಿ ಮಾಡು ವಂತೆ ಹಾಗೂ ತಪ್ಪುಗಳನ್ನು ಸರಿಪಡಿಸುವಂತೆ ಆಗ್ರಹಿಸಿದರು.
ಬಾಪೂಜಿನಗರದ ನಾಗರೀ ಕರು ತಮ್ಮ ವಾರ್ಡ್ನಲ್ಲಿ ಮೂಲ ಭೂತ ಸೌಲಭ್ಯಗಳಿಲ್ಲ. ೨೪ಗಿ೭ ನೀರಿನ ಸಂಪರ್ಕ ಹಾಳಾಗಿದೆ. ನೀರಿ ನ ಸಂಪರ್ಕವಿಲ್ಲದೆ ೬ ತಿಂಗಳಾ ಯಿತು. ಅತ್ಯಂತ ಸಮಸ್ಯೆಯಾಗಿದೆ ಎಂದರು.ಮೋಹನ್ ಮಾತನಾ ಡಿ, ಸ್ಮಾರ್ಟ್ ಸಿಟಿ ಅನುಷ್ಟಾನಗೊ ಂಡಿರುವ ಪ್ರತಿ ವಾರ್ಡಿನಲ್ಲಿ ಸ್ಥಳ ಪರಿ ಶೀಲನೆ ಆಗಬೇಕೆಂದರು. ಸ್ಮಾರ್ಟ್ ಸಿಟಿ ಯೋಜನೆ ಅನುಷ್ಟಾ ನಗೊಂಡಿರುವ ವ್ಯಾಪ್ತಿಯ ಜನರು ಅನೇಕ ದೂರುಗಳನ್ನು ಸಲ್ಲಿಸಿದರು.
ಸ್ಮಾರ್ಟ್ಸಿಟಿ ವ್ಯವಸ್ಥಾಪಕ ನಿರ್ದೇಶಕ ಕೆ.ಮಾಯಣ್ಣ ಗೌಡ ಮಾತನಾಡಿ, ಬಾಕಿ ಉಳಿದಿರುವ ಕಾಮಗಾರಿಗಳನ್ನು ಜನರ ಅಭಿ ಪ್ರಾಯ ಸಂಗ್ರಹಿಸಿ ಪೂರ್ಣಗೊ ಳಿಸಲಾಗುವುದು. ತೊಂದರೆ ಇರು ವೆಡೆ ಸಾಧ್ಯವಾದಷ್ಟು ಸ್ಥಳ ಪರಿಶೀ ಲನೆ ನಡೆಸಿ ಸರಿಪಡಿಸಲು ಕ್ರಮ ವಹಿಸಲಾಗುವುದು ಎಂದರು.
ಸಭೆಯಲ್ಲಿ ವಿವಿಧ ಸಂಘ ಸಂಸ್ಥೆ ಪದಾಧಿಕಾರಿಗಳು, ನಾಗರೀಕರು ಸ್ಮಾರ್ಟ್ ಸಿಟಿ ಯೋಜನೆಯ ವಿವಿಧ ವರ್ಗದ ಅಭಿಯಂತರರು, ತಾಂತ್ರಿಕ ಅಧಿಕಾರಿಗಳು, ಪಾಲಿಕೆ, ಮೆಸ್ಕಾಂ ಅಧಿಕಾರಿಗಳು, ನೀರು ಸರಬರಾಜು ಮತ್ತು ಒಳಚರಂಡಿ, ಜಲ ಮಂಡಳಿ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಪಾಲ್ಗೊಂ ಡು ಪರಿಹಾರಾತ್ಮಕ ಕ್ರಮಗಳ ಕುರಿತು ಚರ್ಚಿಸಿದರು.