ಸೆ.೧೭: ಪೂಜ್ಯಶ್ರೀ ಹಾನಗಲ್ ಕುಮಾರ ಶಿವಯೋಗಿಗಳ ೧೫೬ನೇ ಜಯಂತ್ಯೋತ್ಸವ – ಪ್ರತಿಭಾಪುರಸ್ಕಾರ
ಶಿಕಾರಿಪುರ : ಕಾಯಕಯೋಗಿ ವೀರಶೈವ ಲಿಂಗಾಯತ ಮಹಾ ಸಭಾ ಹಾಗೂ ಶಿವಯೋಗ ಮಂದಿರದ ಸಂಸ್ಥಾಪಕ ಪರಮ ಪೂಜ್ಯ ಲಿಂ.ಶ್ರೀ ಹಾನಗಲ್ ಕುಮಾರ ಶಿವಯೋಗಿಗಳ ೧೫೬ನೇ ಜಯಂತಿ ಮಹೋತ್ಸವ ನಿಮಿತ್ತ ಸೆ.೧೭ರ ಭಾನುವಾರ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ತಾಲೂಕಿನ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಬಾಲ ಕಲಾವಿದೆ ದಿಯಾ ಹೆಗಡೆ ಅವರಿಂದ ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕದ ಅಧ್ಯಕ್ಷ ಎನ್.ವಿ ಈರೇಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಂಸ್ಥಾಪಕರು, ನಾಡಿನೆಡೆ ಶಿವಯೋಗ ಮಂದಿರ ವನ್ನು ಆರಂಭಿಸಿ ದೀಕ್ಷೆ ಮೂಲಕ ಸಂಸ್ಕಾರವನ್ನು ನೀಡಿ ಹಲವು ಶ್ರೇಷ್ಟ ಮಠಗಳಿಗೆ ಪೀಠಾಧಿಪತಿಗಳನ್ನು ಕೊಡುಗೆಯಾಗಿ ನೀಡುವ ಶಿವಯೋಗ ಮಂದಿರದ ಸಂಸ್ಥಾಪP ರಾಗಿ ದಾಸೋಹ ಕಾಯಕ ತತ್ವಕ್ಕೆ ಹೆಚ್ಚಿನ ಮಹತ್ವವನ್ನು ತಂದುಕೊಟ್ಟ ಪರಮಪೂಜ್ಯ ಲಿಂ.ಶ್ರೀ ಹಾನಗಲ್ ಕುಮಾರ ಶಿವಯೋಗಿಗಳ ಜಯಂತಿ ಮಹೋತ್ಸವವನ್ನು ಅರ್ಥಪೂರ್ಣ ವಾಗಿ ಸತತವಾಗಿ ಆಚರಿಸಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದ ಅವರು ಈ ದಿಸೆಯಲ್ಲಿ ಇದೇ ೧೭ ರ ಭಾನುವಾರ ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಲಿಂ.ಶ್ರೀಗಳ ೧೫೬ ನೇ ಜಯಂತಿ ಮಹೋತ್ಸವನ್ನು ಹಮ್ಮಿ ಕೊಳ್ಳಲಾಗಿದೆ ಎಂದು ತಿಳಿಸಿದರು.
ಅಂದು ಬೆಳಿಗ್ಗೆ ೧೦ ಗಂಟೆಗೆ ಶಾಸಕ ಬಿ.ವೈ ವಿಜಯೇಂದ್ರ ಕಾರ್ಯಕ್ರಮ ಉದ್ಘಾಟಿಸಲಿದ್ದು ಸಂಸದ ರಾಘವೇಂದ್ರ, ಸಹಕಾರಿ ಧುರೀಣ ಡಾ.ಬಿ.ಡಿ ಭೂಕಾಂತ್, ಧಾರವಾಡದ ಹ್ಯೂಮನ್ ಮೈಂಡ್ಸೆಟ್ ಕೋಚ್ ಮಹೇಶ್ ಬಿ.ಮಾಸಾಳ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾ ಮಹಿಳಾ ಘಟಕದ ರಾಷ್ಟ್ರೀಯ ಕಾರ್ಯದರ್ಶಿ ನಿವೇದಿತಾ ರಾಜು, ಜಿ ಘಟಕದ ಅಧ್ಯಕ್ಷ ರುದ್ರಮುನಿ ಸಜ್ಜನ್,ತಾ.ಮಹಿಳಾ ಘಟಕದ ಅಧ್ಯಕ್ಷೆ ಕಾಂಚನಾ ಕುಮಾರ್ ಸಹಿತ ಹಲವು ಗಣ್ಯರು ಪಾಲ್ಗೊಳ್ಳಲಿದ್ದು, ದಿವ್ಯ ಸಾನಿಧ್ಯವನ್ನು ಕಾಳೇನಹಳ್ಳಿ ಶಿವಯೋಗಮಂದಿರದ ಶ್ರೀ ಮ.ನಿ.ಪ್ರ ಡಾ.ಸಿದ್ದಲಿಂಗ ಸ್ವಾಮಿಗಳ ವಹಿಸಲಿzರೆ. ಹಾವೇರಿ ಹುಕ್ಕೇರಿ ಮಠದ ಶ್ರೀ ಮ.ನಿ.ಪ್ರ ಸದಾಶಿವ ಮಹಾಸ್ವಾಮಿಗಳು ಉಪದೇಶಾಮೃತ ನೀಡಲಿzರೆ ಎಂದು ತಿಳಿಸಿದರು.
ಬೆಳಗಿನಿಂದ ಸಂಜೆವರೆಗೂ ನಡೆಯುವ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ಸಾರ್ವಜನಿಕರು,ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ವಿನಂತಿಸಿದರು.