ಕಾವೇರಿ ನೀರಿನ ಸಮಸ್ಯೆ ಉಲ್ಬಣಕ್ಕೆ ಡಿಕೆಶಿಯೇ ಕಾರಣ: ಈಶ್ವರಪ್ಪ
ಶಿವಮೊಗ್ಗ: ಕಾವೇರಿ ನದಿ ನೀರಿನ ಸಮಸ್ಯೆ ಉಲ್ಬಣಗೊಳ್ಳಲು ಡಿಸಿಎಂ ಡಿ.ಕೆ. ಶಿವಕುಮಾರ್ ಅವರೇ ಕಾರಣ. ಅವರನ್ನು ತಕ್ಷಣ ವೇ ಡಿಸಿಎಂ ಹುದ್ದೆಯಿಂದ ವಜ ಗೊಳಿಸಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಸುದ್ದಿಗೋಷ್ಟಿಯಲ್ಲಿ ಗುಡುಗಿದ್ದಾರೆ.
ರಾಜ್ಯದ ರೈತರು ಸಂಕಷ್ಟದಲ್ಲಿ ದ್ದಾರೆ. ಕುಡಿಯುವ ನೀರಿಗೂ ಹಾಹಾಕಾರವಿದೆ. ಬರಗಾಲ ಕಾಲಿ ಟ್ಟಿದೆ. ಇಂತಹ ಸಂದಿಗ್ಧ ಸಂದರ್ಭ ದಲ್ಲಿ ಡಿ.ಕೆ. ಶಿವಕುಮಾರ್ ಅವರು ಇಂಡಿಯಾ ಮೈತ್ರಿಕೂಟಕ್ಕೆ, ತಮಿ ಳುನಾಡು ಸಿಎಂ ಸ್ಟಾಲಿನ್ ಅವರಿಗೆ ತೃಪ್ತಿ ತರಿಸಲು ಕದ್ದುಮುಚ್ಚಿ ತಮಿ ಳುನಾಡಿಗೆ ನೀರು ಬಿಟ್ಟಿದ್ದಾರೆ ಎಂದು ಆರೋಪಿಸಿದರು.
ನೀರು ಬಿಡುವ ಮುನ್ನ ಯಾರಿಗೂ ಹೇಳಲಿಲ್ಲ. ಸರ್ವ ಪಕ್ಷಗಳ ಸಭೆ ಕರೆಯಲಿಲ್ಲ. ರೈತರ ಸಂಕಷ್ಟ ಅರ್ಥ ಮಾಡಿಕೊಳ್ಳಲಿಲ್ಲ. ತಾವೇ ಏಕಪಕ್ಷೀಯವಾಗಿ ನಿರ್ಧಾ ರ ತೆಗೆದುಕೊಂಡು ಮೂರ್ಖತನ ದಿಂದ ನೀರು ಬಿಟ್ಟಿದ್ದಾರೆ ಎಂದು ಆರೋಪಿಸಿದರು.
ತಜ್ಞರ ಸಭೆ ಕರೆಯಬಹು ದಿತ್ತು. ಸಂಸದರ ಸಭೆ ಕರೆಯಬಹು ದಿತ್ತು. ಆದರೆ, ಯಾರನ್ನೂ ಕೇಳ ಲಿಲ್ಲ. ಸರ್ವಪಕ್ಷಗಳ ಸಭೆ ಕರೆದು ಚರ್ಚೆ ಮಾಡಬಹುದಿತ್ತು. ಆದರೆ, ಚರ್ಚಿಸಲಿಲ್ಲ. ದೆಹಲಿಗೆ ಹೋಗಿ ಸಂಸದರ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ಎಲ್ಲಾ ಸಂಸದರಿಂದ ಛೀಮಾರಿ ಹಾಕಿಸಿಕೊಂಡರು. ಈ ಎಲ್ಲಾ ಹಿನ್ನಲೆಯಲ್ಲಿ ಡಿ.ಕೆ. ಶಿವಕುಮಾರ್, ತಮ್ಮ ಡಿಸಿಎಂ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಬಂಗಾರಪ್ಪನವರು ಮುಖ್ಯ ಮಂತ್ರಿಯಾಗಿದ್ದಾಗ ಇಂತಹುದೇ ಪರಿಸ್ಥಿತಿ ಉಂಟಾಗಿತ್ತು. ಆದರೆ, ಅವರು ಸಮರ್ಥವಾಗಿ ಪರಿಸ್ಥಿತಿ ಎದುರಿಸಿದರು. ಆಗ ಅವರಿಗೆ ಎಲ್ಲಾ ವಿಪಕ್ಷಗಳು ಬೆಂಬಲ ಕೊಟ್ಟಿದ್ದೆವು. ನಾವು ಕೂಡ ಕಾವೇರಿ ನದಿ ನೀರು ವಿಚಾರದಲ್ಲಿ ಸರ್ಕಾರಕ್ಕೆ ಬೆಂಬಲ ಕೊಡುತ್ತೇವೆ. ಈ ವಿಷ ಯಕ್ಕೆ ಸಂಬಂಧಿಸಿದಂತೆ ಮುಖ್ಯ ಮಂತ್ರಿ ಜೈಲಿಗೆ ಹೋದರೆ ನಾವು ಅವರ ಜೊತೆಗಿರುತ್ತೇವೆ ಎಂದರು.
ನೀರು ಕಳ್ಳನನ್ನು ನೀರುಗಳ್ಳ ಎನ್ನದೇ ಏನೆನ್ನಬೇಕು?
ಡಿ.ಕೆ. ಶಿವಕುಮಾರ್ ರಾತ್ರೋ ರಾತ್ರಿ ಕದ್ದು ನೀರು ಬಿಟ್ಟವರು. ಇಂತಹ ನೀರು ಕಳ್ಳನನ್ನು ಕಳ್ಳ ಎನ್ನದೇ ಬೇರೇನು ಹೇಳಬೇಕು. ಡಿಕೆಶಿ ಕಳ್ಳ ನೀರುಗಂಟಿ. ಅದಕ್ಕಾಗಿ ನಾನೇಕೆ ಅವರನ್ನು ಕ್ಷಮೆ ಕೇಳಬೇಕು ಎಂದು ಈಶ್ವರಪ್ಪ ಪ್ರಶ್ನಿಸಿದರು.
ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿ ಸಿದ ಅವರು, ಡಿ.ಕೆ. ಶಿವಕುಮಾರ್ ಸೆಟ್ಲ್ ಮೆಂಟ್ ಮಾಡಿದ್ದೇವೆ ಎಂದು ಹೇಳಿದ್ದಾರೆ. ಅವರು ಯಾರು ಸೆಟ್ಲ್ ಮೆಂಟ್ ಮಾಡ ಲು. ನಾನೇ ಸೆಟ್ಲ್ ಮೆಂಟ್ ಮಾಡ ಬಲ್ಲೆ. ಅವರಿಗಿಂತ ಮೊದಲೇ ನಾನು ಡಿಸಿಎಂ ಆದವನು. ಗೂಂಡಾಗಳು ಬಳಸುವ ಭಾಷೆ ಇದು. ಅವರು ಜೈಲಿನಲ್ಲಿ ಇದ್ದು ಬಂದಿದ್ದನ್ನು ಮರೆತಿದ್ದಾರೆ. ಅಕ್ಷರಶಃ ಕಾಂಗ್ರೆಸ್ ಆಡಳಿತ ರಾಜ್ಯ ದಲ್ಲಿ ಕುಸಿದಿದೆ. ಗುಂಪುಗಾರಿಕೆ ಹೆಚ್ಚಾಗಿದೆ ಎಂದರು.
ಕಾವೇರಿ ಎಂದರೆ ಕಾಂಗ್ರೆಸ್ ಪಕ್ಷದ ಸ್ವತ್ತಲ್ಲ, ಯಾವುದೇ ನಿರ್ಧಾರ ತೆಗೆದುಕೊಳ್ಳಲು ಡಿ.ಕೆ. ಶಿವಕುಮಾರ್ ಒಬ್ಬರೇ ಇಲ್ಲ. ಮುಖ್ಯಮಂತ್ರಿಗಳು ಮಧ್ಯ ಪ್ರವೇಶ ಮಾಡಿ ಡಿ.ಕೆ. ಶಿವಕು ಮಾರ್ ಅವರನ್ನು ವಜ ಮಾಡ ಬೇಕು. ರಾಜ್ಯದ ರೈತರ ಹಿತ ಕಾಪಾ ಡುವ ನಿಟ್ಟಿನಲ್ಲಿ ಮುಂದಾಗಬೇಕು. ವಸ್ತುಸ್ಥಿತಿಯ ಅಧ್ಯಯನ ಮಾಡಿ ನೀರಾವರಿ ತಜ್ಞರ ಸಲಹೆ ಪಡೆದು ಅಗತ್ಯ ಕ್ರಮ ತೆಗೆದುಕೊಂಡು ನೀರು ಬಿಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್ ಮಾತನಾಡಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಜಿಲ್ಲೆಯಲ್ಲಿ ವಿವಿಧ ಯೋಜನೆಗಳ ಅಡಿಯಲ್ಲಿ ಮನೆಗಳಿಗೆ ಅರ್ಜಿ ಹಾಕಿದವರ ಗೋಳು ಹೇಳತೀರದಾಗಿದೆ. ಬಿಜೆಪಿ ಆಡಳಿತದಲ್ಲಿದ್ದಾಗ ಸಚಿವ ಈಶ್ವರಪ್ಪ ಅವರು ಗೋವಿಂದಾ ಪುರ ಮತ್ತು ಗೋಪಿಶೆಟ್ಟಿ ಕೊಪ್ಪದಲ್ಲಿ ಸುಮಾರು ೪೮೦೦ ಮನೆಗಳನ್ನು ನಿರ್ಮಿಸಲು ಪ್ರಯತ್ನಿಸಿದ್ದರು. ಕೆಲಸವೂ ನಡೆಯುತ್ತಿತ್ತು. ಆದರೆ ಈಗ ಸಂಪೂರ್ಣವಾಗಿ ನಿಂತಿದೆ. ರಾಜ್ಯ ಸರ್ಕಾರ ಕೂಡಲೇ ಗಮನ ಹರಿಸಿ ಹಣ ಬಿಡುಗಡೆ ಮಾಡಿ ಬಡವರಿಗೆ ಸೂರು ನೀಡಬೇಕು. ಇಲ್ಲದಿದ್ದರೆ ಅ. ೫ ರ ನಂತರ ಜಿಲ್ಲೆಯಲ್ಲಿ ಬಿಜೆಪಿ ಹೋರಾಟ ನಡೆಸಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ, ಮೇ ಯರ್ ಶಿವಕುಮಾರ್, ಜನೇ ಶ್ವರ್, ಶಿವರಾಜ್, ಜಗದೀಶ್, ವಿಶ್ವಾಸ್, ಅಣ್ಣಪ್ಪ, ಬಾಲು ಇದ್ದರು.