ಪ್ರತಿಯೊಬ್ಬರಿಗೆ ಶಿಕ್ಷಣ ಕಲಿಕೆಯು ಅತ್ಯಂತ ಅವಶ್ಯಕ : ಶಿವರಾಜ್…
ಶಿವಮೊಗ್ಗ: ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ನಮ್ಮೆಲ್ಲರ ಕರ್ತವ್ಯ. ಶಿಕ್ಷಕರು ಉತ್ತಮ ವ್ಯಕ್ತಿತ್ವದ ನಿರ್ಮಾಣದ ಮಹತ್ತರ ಕಾರ್ಯದಲ್ಲಿ ತೊಡಗಿಸಿಕೊಂಡಿ zರೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಶಿವರಾಜ್ ಹೇಳಿದರು.
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಸಾಕ್ಷರತಾ ಮಾಸದ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು ಹಾಗೂ ವಿವಿಧ ಕ್ಷೇತ್ರದವರನ್ನು ಸನ್ಮಾನಿಸಿ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶಿಕ್ಷಕರ ಮಾರ್ಗದರ್ಶನದಿಂದ ವಿದ್ಯಾರ್ಥಿಗಳು ಸಮಾಜದಲ್ಲಿ ಉನ್ನತ ಸ್ಥಾನ ತಲುಪುತ್ತಿzರೆ. ಶಿಕ್ಷಕ ಕಲಿಕೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಜತೆಯಲ್ಲಿ ಸದೃಢ ಸಮಾಜ ನಿರ್ಮಾಣ ಮಾಡುವಲ್ಲಿ ಶಿಕ್ಷಕರ ಸೇವೆ ಅಪಾರ ಎಂದು ತಿಳಿಸಿದರು.
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ನಿರಂತರವಾಗಿ ಸಮಾಜ ಮುಖಿಯಾಗಿ ಸೇವಾ ಕಾರ್ಯ ಗಳನ್ನು ನಡೆಸಿಕೊಂಡು ಬರುತ್ತಿದೆ. ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರ ದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮುನ್ನಡೆಸುತ್ತಿದೆ ಎಂದರು.
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಕಾರ್ಯದರ್ಶಿ ಕಿರಣ್ ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಕ್ಷಣದ ಜತೆಯಲ್ಲಿ ಸಂಸ್ಕಾರ ಹಾಗೂ ಜೀವನ ಮಲ್ಯಗಳನ್ನು ಕಲಿಸಬೇಕು. ಉತ್ತಮ ವ್ಯಕ್ತಿತ್ವ ರೂಪಿಸುವ ಮನೋಭಾವವನ್ನು ಮಕ್ಕಳಲ್ಲಿ ಬೆಳೆಸಬೇಕು ಎಂದರು.
ರೋಟರಿ ಮಾಜಿ ಸಹಾಯಕ ಗವರ್ನರ್ ರವಿ ಕೋಟೋಜಿ, ವಲಯ ಸೇನಾನಿ ಧರ್ಮೇಂದ್ರ ಸಿಂಗ್, ಚಂದ್ರು, ಜಿ ಯೋಜನಾ ಸಂಯೋಜಕ ಎನ್.ರಮೇಶ್ ಹಾಗೂ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಕ್ಲಬ್ ಸದಸ್ಯ ನಟರಾಜ್, ಆನ್ಸ್ ಕ್ಲಬ್ ಅಧ್ಯಕ್ಷೆ ಸೀಮಾ ಶಿವರಾಜ್ ಹಾಗೂ ಕಾರ್ಯದರ್ಶಿ ದೀಪಾ ಶೆಟ್ಟಿ, ಶಿವಮೊಗ್ಗ ಮಹಾ ನಗರ ಪಾಲಿಕೆ ಸದಸ್ಯೆ ಸುರೇಖಾ ಮುರುಳಿಧರ್ ಹಾಗೂ ಅಶ್ವಿನ್, ಚೂಡಾಮಣಿ ಪವರ್ ಹಾಗೂ ಶಿವಮೊಗ್ಗ ಸೆಂಟ್ರ ಲ್ ಕ್ಲಬ್ ಎ ಸದಸ್ಯರು ಇದ್ದರು.