ಜಿಲ್ಲಾ ಸುದ್ದಿತಾಜಾ ಸುದ್ದಿ

ಪ್ರಧಾನಿ ಮೋದಿ ನೇತೃತ್ವದಲ್ಲಿ ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ॒: ಸಂದೇಶ್ ಜವಳಿ

Share Below Link

ತೀರ್ಥಹಳ್ಳಿ: ಕಳೆದ ಒಂಭತ್ತು ವರುಷಗಳಲ್ಲಿ ದೇಶದಲ್ಲಿ ಕೇಂದ್ರ ಸರ್ಕಾರ ಹತ್ತು ಹಲವು ಜನಪರ ಯೋಜನೆಗಳನ್ನು ಜರಿಗೆ ತಂದಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಎಂದು ರಂಗಕರ್ಮಿ, ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಸದಸ್ಯ ಸಂದೇಶ್ ಜವಳಿ ಹೇಳಿzರೆ.


ಅವರು ಶಿವಮೊಗ್ಗದ ಕೇಂದ್ರ ಸಂವಹನ ಇಲಾಖೆ ವತಿಯಿಂದ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಸಹಯೋಗದಲ್ಲಿ ಬೆಟ್ಟಮಕ್ಕಿ ಅಂಬೇಡ್ಕರ್ ಸಭಾ ಭವನದಲ್ಲಿ ಆಯೋಜಿಸಲಾದ ವಿಶೇಷ ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.
ಆಯುಷ್ಮಾನ್ ಭಾರತ ಯೋಜನೆಯಿಂದ ಬಡ ವರ್ಗದ ಜನರಿಗೆ ಉಚಿತವಾಗಿ ವೈದ್ಯಕೀಯ ಚಿಕಿತ್ಸೆ ಲಭಿಸುತ್ತಿದೆ. ಮಾತೃವಂದನ ಯೋಜನೆಯಿಂದ ಗರ್ಭಿಣಿಯರಿಗೆ ಅನುಕೂಲವಾಗಿದೆ. ಇಂದು ಭಾರತ ಡಿಜಿಟಲ್ ಇಂಡಿಯಾ ಆಗಿದೆ. ಕಿಸಾನ್ ಸಮ್ಮಾನ್ ನಿಧಿ ಯೋಜನೆ ರೈತರನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸುವ ಪ್ರಯತ್ನವಾಗಿದೆ ಎಂದರು.
ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಸದಸ್ಯ ರಾಘವೇಂದ್ರ ಮಾತನಾಡಿ, ಗ್ರಾಮೀಣ ಪ್ರದೇಶಗಳ ಜನರಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವಲ್ಲಿ ಇಂತಹ ಛಾಯಾಚಿತ್ರ ಪ್ರದರ್ಶನ ಗಳು ಸಹಾಯಕಾರಿ ಎಂದರು.
ಪಟ್ಟಣ ಪಂಚಾಯಿತಿ ಸದಸ್ಯರು ಗಳಾದ ಯತಿರಾಜ್ ಹಾಗೂ ಶ್ರೀಮತಿ ಜ್ಯೋತಿ, ಮಹಿಳಾ ಸ್ವ ಸಹಾಯ ಸಂಘಗಳ ಅಧ್ಯಕ್ಷೆ ಶ್ರೀಮತಿ ಡಾಕಮ್ಮ, ಆತ್ಮ ಕೃಷಿ ಪುರಸ್ಕಾರ ವಿಜೇತೆ ಶ್ರೀಮತಿ ಕ್ಷಮಾ ಲಿಂಗರಾಜು, ಕ್ಷೇತ್ರ ಪ್ರಚಾರ ಅಧಿಕಾರಿ ಶ್ರೀಮತಿ ಅಕ್ಷತಾ ಸಿ. ಹೆಚ್, ಸಿಡಿಪಿಓ ಶ್ರೀಮತಿ ಶಶಿ ರೇಖಾ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಪ್ರದರ್ಶನವು ಕೇಂದ್ರ ಸರ್ಕಾರದ ೯ವರುಷಗಳ ಸಾಧನೆ, ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆ , ಸ್ವಚ್ಛ ಭಾರತ ಕುರಿತು ಮಾಹಿತಿಯನ್ನು ಒಳಗೊಂಡಿದೆ. ಕೇಂದ್ರ ಸರ್ಕಾರದ ಯೋಜನೆಯ ಅನುಷ್ಠಾನದಲ್ಲಿ ಸಾಧಿಸಿದ ಪ್ರಗತಿಯನ್ನು ಜನಸಾಮಾನ್ಯರಿಗೆ ಛಾಯಾಚಿತ್ರ ಪ್ರದರ್ಶನದ ಮೂಲಕ ನೀಡಲಾಗುತ್ತಿದೆ ಎಂದು ಇಲಾಖೆ ತಿಳಿಸಿದೆ.