ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವು ಖಚಿತ: ವಿಜಯೇಂದ್ರ ವಿಶ್ವಾಸ

Share Below Link

ಶಿಕಾರಿಪುರ : ಮೈತ್ರಿಯೊಂದಿಗೆ ಬಿಜೆಪಿ ಅಭ್ಯರ್ಥಿ ಯಾಗಿ ನೈರುತ್ಯ ಪದವೀಧರ ಕ್ಷೇತ್ರ ದಿಂದ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಎಸ್.ಎಲ್. ಭೋಜೇಗೌಡರು ಸ್ಪರ್ಧಿಸಿದ್ದು, ವಾತಾವರಣ ಮೈತ್ರಿ ಅಭ್ಯರ್ಥಿಗಳ ಪರವಾಗಿದೆ. ಇವರಿಬ್ಬರ ಗೆಲುವು ಖಚಿತ ಎಂದು ಬಿಜೆಪಿ ರಾಜಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.


ಸುದ್ದಿಗೋಷ್ಟಿಯಲ್ಲಿಂದು ಮಾತನಾಡಿದ ಅವರು, ಜೆಡಿಎಸ್ ಮೈತ್ರಿಯೊಂದಿಗೆ ನಾಲ್ಕು ಕ್ಷೇತ್ರ ಗಳಲ್ಲಿ ಬಿಜೆಪಿ ಹಾಗೂ ಇನ್ನೆರಡು ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧೆ ಮಾಡುತ್ತಿದೆ, ಕಳೆದ ಲೋಕಸಭಾ ಚುನಾವಣೆಯಲ್ಲಿ ಹೊಂದಾಣಿಕೆ ಯಂತೆ ಈ ಚುನಾವಣೆಯಲ್ಲಿಯೂ ಮೈತ್ರಿಯೊಂದಿಗೆ ಚುನಾವಣೆ ಮಾಡಲಾಗುತ್ತಿದೆ. ಈ ಚುನಾವಣೆ ಯನ್ನು ಎರಡೂ ಪಕ್ಷಗಳೂ ಬಹಳ ಗಂಭೀರವಾಗಿ ಪರಿಗಣಿಸಿವೆ ಎಂದರು.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ೧೫ ರಿಂದ ೨೦ ಸ್ಥಾನ ಗೆಲ್ಲುತ್ತೇವೆಂಬ ಭ್ರಮೆಯಲ್ಲಿತ್ತು, ಇದೀಗ ಅವರ ನಿರೀಕ್ದೆ, ಉತ್ಸಾಹ ಕಡಿಮೆಯಾಗುತ್ತಿದೆ. ಜೂ.೪ ರಂದು ಹೆಚ್ಚಿನ ಸೀಟು ಗೆಲ್ಲುವ ಮೂಲಕ ಬಿಜೆಪಿ ವಿಜಯೋತ್ಸವ ಆಚರಿಸಲಿದೆ. ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ, ಫಲಿತಾಂಶ ಬಂದ ನಂತರ ಕಾಂಗ್ರೆಸ್‌ಗೆ eನೋದಯ ಆಗಲಿದೆ ಎಂದರು.
ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿದ್ದು, ಸಾಧನೆ ಶೂನ್ಯವಾಗಿದೆ, ಯಾವುದೇ ಗುದ್ದಲಿ, ಪೂಜೆ, ಶಂಕುಸ್ಥಾಪನೆಗಳು ನಡೆದಿಲ್ಲ, ಹೊಸ ಯೋಜನೆ ಜರಿ ಮಾಡಿಲ್ಲ ಎಂದು ಕುಟುಕಿದರು.
ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಮಾತನಾಡಿ, ಈಗಾಗಲೇ ಮಂಗಳೂರು, ಕೊಡಗು, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ದಾವಣಗೆರೆ ಭಾಗದಲ್ಲಿ ಪ್ರವಾಸ ಮಾಡಿzವೆ, ಪೂರಕವಾದ ವಾತಾವರಣ ಇದ್ದು, ಗೆಲುವುದು ಖಚಿತ ಎಂದ ಅವರು, ತಾವು ಪದವೀಧರರ ಧ್ವನಿಯಾಗಿ ಸೇವೆ ಸಲ್ಲಿಸುತ್ತೇನೆ ಎಂದರು.
ಗೋಷ್ಟಿಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ, ಎಂಎಡಿಬಿ ಮಾಜಿ ಅಧ್ಯಕ್ಷ ಗುರುಮೂರ್ತಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ಡಿ.ಭೂಕಾಂತ್, ನಿರ್ದೇಶಕ ಚನ್ನವೀರಪ್ಪ, ಪುರಸಭಾ ಸದಸ್ಯ ಕೆ. ಪಾಲಾಕ್ಷಪ್ಪ, ತಾಲ್ಲೂಕು ಬಿಜೆಪಿ ಅಧ್ಯಕ್ಷ ಸಂಕ್ಲಾಪುರ ಹನುಮಂತಪ್ಪ, ಜಿ ವಾಲ್ಮೀಕಿ ಸಂಘದ ಅಧ್ಯಕ್ಷ ಎಚ್.ಟಿ. ಬಳಿಗಾರ್ ಮತ್ತಿತರ ಮುಖಂಡರು ಹಾಜರಿದ್ದರು.

This image has an empty alt attribute; its file name is Arya-coll.gif