ಕೆಎಸ್ಆರ್ಟಿಸಿ ಬಸ್ ತಡೆದು ಗೋವಿನಕೋವಿ ಗ್ರಾಮಸ್ಥರಿಂದ ದಿಢೀರ್ ಪ್ರತಿಭಟನೆ
ನ್ಯಾಮತಿ : ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಕೆಎಸ್ಆರ್ಟಿಸಿ ಬಸ್ಗಳನ್ನು ತಡೆದು ದಿಢೀರ್ ಪ್ರತಿಭಟನೆ ನಡೆಸಿರುವ ಘಟನೆ ನ್ಯಾಮತಿ ತಾಲೂಕಿನ ಗೋವಿನ ಕೋವಿ ಗ್ರಾಮದಲ್ಲಿ ನಡೆದಿದೆ.
ನ್ಯಾಮತಿ ತಾಲೂಕಿನ ಗೋವಿನಕೋವಿ ಗ್ರಾಮದ ಮೂಲಕ ಹೊನ್ನಾಳಿ ಮತ್ತು ಶಿವಮೊಗ್ಗ ಮಾರ್ಗದಲ್ಲಿ ಸಾಗುವ ಕೆಎಸ್ಆರ್ಟಿಸಿ ಬಸ್ಸುಗಳನ್ನು ನಿಲುಗಡೆ ಮಾಡದಿರುವುದರಿಂದ ದಿನನಿತ್ಯ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಕೂಡಲೇ ಬಸ್ಸುಗಳನ್ನು ನಿಲುಗಡೆಗೆ ಹಾಗೂ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು, ಈ ಮಾರ್ಗದ ಎ ಕೆಎಸ್ಆರ್ಟಿಸಿ ಬಸ್ಗಳನ್ನು ತಡೆದು ಪ್ರತಿಭಟನೆ ನಡೆಸಿದರು.
ಗೋವಿನಕೋವಿ ಗ್ರಾಮದಿಂದ ಹೊನ್ನಾಳಿ ಮತ್ತು ಶಿವಮೊಗ್ಗಕ್ಕೆ ನೂರಾರು ವಿದ್ಯಾರ್ಥಿಗಳು ಶಾಲಾ- ಕಾಲೇಜುಗಳಿಗೆ ತೆರಳುತ್ತಾರೆ ಆದರೆ ಸಮರ್ಪಕ ಬಸ್ ಸೌಲಭ್ಯವಿಲ್ಲದೇ ಹಾಗೂ ಎಲ್ಲ ಬಸ್ಸುಗಳಲ್ಲಿ ಬಸ್ನಲ್ಲಿ ಬರಬೇಕಾದರೆ, ನಿಂತುಕೊಳ್ಳುವು ದಕ್ಕೂ ಜಗ ಇರುವುದಿಲ್ಲ. ಸೇರಿದಂತೆ ಮುಂತಾದ ಹಳ್ಳಿಯ ವಿದ್ಯಾರ್ಥಿಗಳು, ಈ ಬಸ್ಗಳಲ್ಲಿ ತುಂಬಿರುತ್ತಾರೆ. ಬೆಳಗ್ಗೆ ಕಾಲೇಜು ಗಳಿಗೆ ಬಹುತೇಕ ವಿದ್ಯಾರ್ಥಿಗಳು ಆಗಮಿಸುತ್ತಾರೆ. ಕೆಎಸ್ಆರ್ಟಿಸಿ ಬಸ್ಸುಗಳನ್ನು ನಿಲುಗಡೆ ಮಾಡದಿ ರುವುದರಿಂದ ವಿದ್ಯಾರ್ಥಿಗಳಿಗೆ ಅನನುಕೂಲವಾಗಿದೆ.
ತುಂಬಿಬರುವುದರಿಂದ ದಿನನಿತ್ಯವೂ ಬಸ್ಸಿನಲ್ಲಿ ನಿಂತು ಕೊಂಡೇ ಪ್ರಯಾಣಿಸಬೇಕಾಗಿದೆ ಎಂದು ಗ್ರಾಮಸ್ಥರು ಆರೋಪಿಸಿ ದರು. ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಶಾಲಾ-ಕಾಲೇಜುಗಳಿಗೆ ಹೋಗಲು ಸಾಧ್ಯವಾಗದೇ ತೊಂದರೆ ಅನುಭವಿಸುವಂತಾಗಿದೆ. ಬೆಳಿಗ್ಗೆ ಮತ್ತು ಸಂಜೆ ಸರಿಯಾದ ಸಮಯಕ್ಕೆ ಹೆಚ್ಚುವರಿ ಬಸ್ಸಗಳನ್ನು ಸಂಚರಿಸಲು ಕ್ರಮ ಕೈಗೊಳ್ಳ ಬೇಕೆಂದು ಸಂಬಂಧಿಸಿದ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಮಾಡಲಾಗಿದೆ. ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಅನಿವಾರ್ಯವಾಗಿ ಸಾರಿಗೆ ಬಸ್ ಸಂಚಾರ ತಡೆದು ಪ್ರತಿಭಟನೆ ಮಾಡಬೇಕಾಗಿದೆ ಎಂದು ಪ್ರತಿಭಟನಾಕಾರರು ಹೇಳಿದರು.
ಪ್ರತಿಭಟನೆಯಲ್ಲಿ ಗೋವಿನಕೋವಿ ಮತ್ತು ಕುರುವ ಗ್ರಾಮದ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.