ನೀಟ್ ಅಕ್ರಮ: ಸಿಬಿಐ ತನಿಖೆಗೆ ಎಬಿವಿಪಿ ಆಗ್ರಹ…
ಶಿವಮೊಗ್ಗ : ನೀಟ್ ಯುಜಿ ಪರೀಕ್ಷಾ ಪ್ರಕ್ರಿಯೆ ಮತ್ತು ಫಲಿತಾಂಶಗಳ ಕುರಿತು ತಕ್ಷಣವೇ ಸಿಬಿಐ ತನಿಖೆಗೆ ವಹಿಸ ಬೇಕು. ತಪ್ಪಿತಸ್ತರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತ್ತಾಯಿಸಿ ಇಂದು ಎಬಿವಿಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನೀಟ್-ಯುಜಿ ಪರೀಕ್ಷೆ ನಡೆಸುವಲ್ಲಿ ಮತ್ತು ಮಲ್ಯ ಮಾಪನ ಮಾಡುವಲ್ಲಿ ಎನ್.ಟಿ.ಎ.ಯ ಅಸಮರ್ಥತೆ ಮತ್ತು ಭ್ರಷ್ಟಾಚಾರ ಬಹಿರಂಗ ವಾಗಿದ್ದು, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಲೋಕಸಭೆ ಚುನಾವಣೆ ಫಲಿತಾಂಶದ ದಿನವೇ ನೀಟ್ ಯುಜಿ ಫಲಿತಾಂಶವನ್ನು ಪ್ರಕಟಿಸುವ ಮೂಲಕ ಎನ್.ಟಿ.ಎ. ಏನನ್ನು ಮರೆಮಾಡಲು ಉzಶಿಸಿದೆ ಎಂದು ಪ್ರಶ್ನಿಸಿದರು.
ರಾಷ್ಟ್ರೀಯ ಅರ್ಹತಾ ಪರೀಕ್ಷೆ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಪರೀಕ್ಷಾ ಪ್ರಕ್ರಿಯೆ ಮತ್ತು ಫಲಿತಾಂಶಗಳ ಮೇಲೆ ಉದ್ಭವಿಸುವ ಪ್ರಶ್ನೆಗಳನ್ನು ಪರಿಹರಿಸಲು ಎಬಿವಿಪಿ ತನಿಖೆಗೆ ಒತ್ತಾಯಿಸಲಾಗಿದೆ.
ವಿವಿಧೆಡೆ ಅಕ್ರಮಗಳು ವರದಿ ಯಾಗಿವೆ. ಪರೀಕ್ಷೆಯ ದಿನವೇ ದೇಶದ ಕೆಲವು ಭಾಗಗಳಲ್ಲಿ ಅಕ್ರಮ ಗಳು ನಡೆದಿವೆ. ವೈದ್ಯಕೀಯ ಸಂಸ್ಥೆಗಳ ಪ್ರವೇಶಕ್ಕೆ ನಡೆಸುವ ಈ ಪರೀಕ್ಷೆಯ ಪಾರದರ್ಶಕತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ತೀವು ಅಪನಂಬಿಕೆ ಇದೆ ಎಂದರು.
ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ಪರೀಕ್ಷೆಯ ನಿರ್ವ ಹಣೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಲ್ಲ ಎಂಬುದು ಸ್ಪಷ್ಟವಾಗಿದೆ. ಪರೀಕ್ಷೆಯ ಫಲಿತಾಂಶಗಳ ಬಗ್ಗೆ, ನೀಟ್ ಯುಜಿ ಆಕಾಂಕ್ಷಿಗಳಲ್ಲಿ ಅಪನಂಬಿಕೆ ಹೆಚ್ಚುತ್ತಿದೆ. ಇದನ್ನು ಪರಿಹರಿಸಲು ಸಿಬಿಐ ತನಿಖೆ ನಡೆಸಬೇಕಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿದೆ.
ಈ ವಷದ ನೀಟ್ ಯುಜಿ ಪರೀಕ್ಷೆಯ ಅನೇಕ ಟಾಪರ್ ಒಂದೇ ಕೇಂದ್ರದಿಂದ ಬಂದಿದ್ದು ಇದು ಈ ವರ್ಷದ ಪರೀಕ್ಷಾ ಫಲಿತಾಂಶದ ಮೇಲೆ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಈಗಾಗಲೇ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಬಗ್ಗೆ ಸಾಕಷ್ಟು ಪ್ರಶ್ನೆಗಳು ಉದ್ಭವಿಸಿವೆ. ನೀಟ್ ಪರೀಕ್ಷೆಯ ನಿರ್ವಹಣೆ ಯಲ್ಲಿ ಎದ್ದುಕಾಣುವ ಲೋಪ ದೋಷಗಳಿಗೆ ಪರೀಕ್ಷೆಗಳ ನಿರ್ವಹಣೆಗೆ ಸಂಬಂಧಿಸಿದ ಅಧಿಕಾರಶಾಹಿಯೇ ಹೊಣೆ ಎಂದು ಹೇಳಿzರೆ.
ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟವಾದ ನಂತರ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಗಳು ನಡೆಯುತ್ತಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ. ಪರೀಕ್ಷೆ ನಡೆಸುವ ಬಗ್ಗೆ, ವಿದ್ಯಾರ್ಥಿ ಗಳಲ್ಲಿ, ವಿಶ್ವಾಸದ ವಾತಾವರಣ ಮೂಡು ವಂತೆ ಈ ವಿಚಾರದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲ್ಲಿ ಎಬಿವಿಪಿ ನಗರ ಸಹ ಕಾರ್ಯದರ್ಶಿ ಅಭಿಷೇಕ್ ಇನ್ನಿತರರಿದ್ದರು.