೧೧೦ ಕುಟುಂಬಗಳ ೨೦೦ಕ್ಕೂ ಹೆಚ್ಚು ಎಕರೆ ಭೂಮಿ ಸಾಗುವಳಿ ಪತ್ರ ವಜಾ…
ಶಿವಮೊಗ್ಗ : ಶಿವಮೊಗ್ಗ ತಾಲ್ಲೂಕು ಕುಂಚೇನಹಳ್ಳಿ ಹಾಗೂ ಬೀರನಕೆರೆ ಗ್ರಾಮಗಳ ಸರ್ವೆ ನಂ. ೪೫,೪೩,೮೨,೯೯ರ ಸುಮಾರು ೧೧೦ ಕುಟುಂಬಗಳ ೨೦೦ಕ್ಕೂ ಹೆಚ್ಚು ಎಕರೆ ಸಾಗುವಳಿ ಭೂಮಿಗಳಿಗೆ ಹಕ್ಕು ಪತ್ರ ನೀಡಿದ್ದರೂ ಕೂಡ ಅದನ್ನು ವಜ ಮಾಡಲಾಗಿದೆ. ಇದರ ವಿರುದ್ಧ ಹೋರಾಟ ಆರಂಭಿಸಲಾಗುವುದು ಎಂದು ಮಲೆನಾಡು ರೈತ ಹೋರಾಟ ಸಮಿತಿಯ ಸಂಚಾಲಕ ತೀ.ನ. ಶ್ರೀನಿವಾಸ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರಗಳು ರೈತ ವಿರೋಧಿ ನೀತಿ ಗಳನ್ನು ಅನುಸರಿಸುತ್ತ ಬಂದಿವೆ. ಒಂದು ಕಡೆ ಶರಾವತಿ ಸಂತ್ರಸ್ಥರಿಗೆ ಅನ್ಯಾಯವಾದರೆ ಮತ್ತೊಂದು ಕಡೆ ಬಗರ್‌ಹುಕುಂ ಸಾಗುವಳಿದಾರರಿಗೆ ನ್ಯಾಯ ಸಿಕ್ಕಿಲ್ಲ. ಈಗ ಶಿವಮೊಗ್ಗ ಜಿಯ ಸುಮಾರು ೧೧೦ ಕುಟುಂಬಗಳ ಜಮೀನುಗಳಿಗೆ ಹಕ್ಕು ಪತ್ರ ಹಾಗೂ ಪಹಣಿಯನ್ನು ನೀಡಿ ದ್ದರೂ ಕೂಡ ಈಗ ಯಾವುದೋ ಉದ್ದೇಶ ಇಟ್ಟುಕೊಂಡು ಹಕ್ಕು ಪತ್ರ ಮತ್ತು ಪಹಣಿಯನ್ನು ವಜ ಮಾಡಲಾಗಿದೆ ಎಂದು ದೂರಿದರು.
ಈ ಕುಟುಂಬಗಳು ಇದೇ ಜಮೀನನ್ನು ನಂಬಿಕೊಂಡು ಜೀವನ ನಡೆಸುತ್ತಿzರೆ. ಬೇರೆ ಎಲ್ಲಿಯೂ ಕೂಡ ಜಮೀನು ಇಲ್ಲ. ಆದ್ದರಿಂದ ಇವರ ಬದುಕು ಈಗ ಬೀದಿಗೆ ಬಿದ್ದಿದೆ. ತಕ್ಷಣವೇ ರದ್ದುಗೊಳಿಸಿ ರುವ ಪಹಣಿ ಮತ್ತು ಹಕ್ಕುಪತ್ರ ಗಳನ್ನು ಮತ್ತೇ ಮೆದಲಿನಂತೆ ನೀಡಿ ಸಾಗುವಳಿ ಮಾಡಿಕೊಂಡು ಹೋಗಲು ಅವಕಾಶ ಮಾಡಿಕೊಡಬೇಕು ಎಂದರು.
ಇದರ ವಿರುದ್ಧ ಜೂ.೨೬ರಂದು ಜಿಧಿಕಾರಿಗಳ ಕಚೇರಿ ಎದುರು ಪತ್ರಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು. ಅರಣ್ಯ ಇಲಾಖೆಯ ವರು ರೈತರಿಗೆ ಸದಾ ಕಿರುಕುಳ ನೀಡುತ್ತಲೇ ಬಂದಿzರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾಯ್ದೆ ಗಳಂತೆ ಹಾಗೂ ನ್ಯಾಯಾಲಯದ ಆದೇಶ ದಂತೆಯೇ ಸಾಗುವಳಿದಾ ರರಿಗೆ ಭೂಮಿಹಕ್ಕನ್ನು ನೀಡಲು ಅವಕಾಶ ವಿದ್ದರೂ ಕೂಡ ಇದುವರೆಗೂ ಯಾವ ಅಧಿಕಾರಿಗಳೇ ಆಗಲಿ, ರಾಜಕಾರಣಿ ಗಳಾ ಗಲಿ ಈ ಬಗ್ಗೆ ಪ್ರಯತ್ನ ಪಡದೇ ಇಚ್ಛ ಶಕ್ತಿ ಪ್ರದರ್ಶಿಸದೇ ರೈತ ವಿರೋಧಿ ನೀತಿಗಳನ್ನು ಅನುಸರಿಸು ತ್ತಿ zರೆ ಎಂದು ದೂರಿದರು.
ಇದೀಗ ಲೋಕಸಭಾ ಅಧಿವೇಶನ ಆರಂಭವಾಗುತ್ತದೆ. ರಾಜ್ಯದ ಸಂಸದರು ಈ ಅಧಿವೇಶನದದರೂ ಶರಾವತಿ ಸಂತ್ರಸ್ಥರ ಹಾಗೂ ಭೂ ಸಾಗುವಳಿ ದಾರರ ಪರವಾಗಿ ಧ್ವನಿ ಎತ್ತಬೇಕು. ಗಂಭೀರವಾಗಿ ಚರ್ಚಿಸಿ ಮಲೆನಾಡು ಭಾಗದ ರೈತರ ಸಮಸ್ಯೆಗಳನ್ನು ಬಗೆಹರಿಸಬೇಕು. ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕೂಡಲೇ ಶಿವಮೊಗ್ಗ ಜಿಯ ಸಾಗುವಳಿ ದಾರರ ರೈತರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಭೆ ಕರೆಯಬೇಕು ಎಂದು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ವಿನಾಯಕ, ತೀರ್ಥನಾಯ್ಕ, ಠಾಕ್ಯನಾಯ್ಕ, ವೆಂಕಟೇಶ ನಾಯ್ಕ, ದಶರಥ ನಾಯ್ಕ, ಶಂಕರ ನಾಯ್ಕ, ಬೂದ್ಯನಾಯ್ಕ, ಜಯರಾಮ್ ನಾಯ್ಕ ಮುಂತಾದವರು ಇದ್ದರು.