ಅಂಬೆಗಾಲು ಕಿರುಚಿತ್ರ ಸ್ಪರ್ಧೆ – ಲಾಂಛನ ಬಿಡುಗಡೆ…
ಶಿವಮೊಗ್ಗ: ನಗರದ ಸಿನಿಮೊಗೆ-ಶಿವಮೊಗ್ಗ ಚಿತ್ರ ಸಮಾಜದ ವತಿಯಿಂದ ಅಂಬೆಗಾಲು-೬ ಕಿರುಚಿತ್ರ ಸ್ಪರ್ಧೆ ಆಯೋಜಿಸಿದೆ ಎಂದು ಬೆಳ್ಳಿಮಂಡಲ ಕಾರ್ಯಾಧ್ಯಕ್ಷ ಹಾಗೂ ಅಂಬೆಗಾಲು ಕಿರುಚಿತ್ರ ಸ್ಪರ್ಧೆಯ ಸಂಚಾಲಕ ಡಿ.ಎಸ್. ಅರುಣ್ ಹೇಳಿದರು.
ಇಂದು ಪತ್ರಿಕಾಗೋಷ್ಠಿಯಲ್ಲಿ ಅಂಬೆಗಾಲು-೬ ಕಿರುಚಿತ್ರ ಸ್ಪರ್ಧೆಯ ಲಾಂಛನವನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕಳೆದ ನಾಲ್ಕು ವರ್ಷಗಳಲ್ಲಿ ನಡೆದ ಅಂಬೆಗಾಲು ಕಿರುಚಿತ್ರ ಸ್ಪರ್ಧೆಗಳಲ್ಲಿ ಶಿವಮೆಗ್ಗ ಹಾಗೂ ಸುತ್ತಮುತ್ತಲಿನ ಕ್ರಿಯಾಶೀಲ ನಿರ್ದೇಶಕರು, ತಂತ್ರಜ್ಞರು ಪಾಲ್ಗೊಂಡು ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿರುವುದು ಹೆಮ್ಮೆಯ ಸಂಗತಿ ಎಂದರು.
ಇದುವರೆಗೂ ನಡೆದ ಅಂಬೆಗಾಲು ಕಿರುಚಿತ್ರದಲ್ಲಿ ಪ್ರಶಸ್ತಿ ಪಡೆದ ಚಿತ್ರಗಳು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿವೆ. ಈಗ ಆರನೇ ವರ್ಷದಲ್ಲಿ ಈ ಅಂಬೆಗಾಲು-೬ ಕಿರು ಚಿತ್ರ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದ್ದು, ರಾಜ್ಯದೆಡೆಯಿಂದ ಶ್ರೇಷ್ಟ ಗುಣಮಟ್ಟದ ಕಿರು ಚಿತ್ರಗಳನ್ನು ನಿರೀಕ್ಷಿಸಲಾಗಿದೆ ಎಂದರು.
ಯುವಜನತೆಯಲ್ಲಿ ಚಲನಚಿತ್ರ ಕುರಿತಾಗಿ ಅರಿವು ಮೂಡಿಸುವ ಹಾಗೂ ಅವರಲ್ಲಿನ ಸಜನಶೀಲತೆಯನ್ನು ಪ್ರೊತ್ಸಾಹಿಸುವ ದಷ್ಟಿಯಿಂದ ಈ ಕಿರುಚಿತ್ರ ಸ್ಪರ್ಧೆಯನ್ನು ಅಯೋಜಿಸಲಾಗಿದ್ದು, ಶೀರ್ಷಿಕೆ ಹಾಗೂ ಟೈಟಲ್ ಕಾರ್ಡ್ ಸೇರಿ ೫ ರಿಂದ ೭ ನಿಮಿಷಗಳ ಕಿರುಚಿತ್ರಗಳನ್ನು ಸ್ಪರ್ಧೆಗೆ ಕಳುಹಿಸಬಹುದು ಎಂದರು.
ಮೊಬೈಲ್ ಸೇರಿದಂತೆ ಯಾವುದೇ ಕ್ಯಾಮರಾವನ್ನು ಬಳಸಿ ಚಿತ್ರೀಕರಿ ಸಬಹುದಾಗಿದ್ದು, ಸಾಮಾಜಿಕ ಜಲತಾಣಗಳೂ ಸೇರಿದಂತೆ ಯಾವುದೇ ಮಾಧ್ಯಮಗಳಿಗಿಂದ ದಶ್ಯಗಳನ್ನು ಕಟ್ ಅಂಡ್ ಪೇಸ್ಟ್ ಆಗಲೀ, ಸಾಕ್ಷ್ಯ ಚಿತ್ರವನ್ನಾಗಲೀ ಅಥವಾ ಸಂಪೂರ್ಣ ಎನಿಮೇಷನ್ ಚಿತ್ರಗಳನ್ನಾಗಲೀ ಸ್ಪರ್ಧೆಗೆ ಕಳಿಸುವಂತಿಲ್ಲ. ಸಂಪೂರ್ಣವಾಗಿ ಸ್ವಂತಿಕೆಯ ನಿರ್ದೇಶನದ ಯಾವುದೇ ವಿಷಯವನ್ನು ಕುರಿತು ಕಿರು ಚಿತ್ರ ನಿರ್ಮಿಸಬಹುದು. ಹಾಸ್ಯ ಕಥಾನಕವುಳ್ಳ ಕಿರುಚಿತ್ರಗಳಿಗೆ ವಿಶೇಷ ಆದ್ಯತೆಯಿದೆ ಎಂದರು.
ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕರು, ಕಲಾವಿದರು ತೀರ್ಪುಗಾರರಾಗಿ ಪಾಲ್ಗೊಳ್ಳಲಿದ್ದು, ಈ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ರೂ. ೫೦,೦೦೦ ರೂಗಳ ಪ್ರಥಮ ಬಹುಮಾನ, ರೂ. ೩೦,೦೦೦.೦೦ ರೂ.ಗಳ ದ್ವಿತೀಯ ಬಹುಮಾನ ಜೊತೆಗೆ ಶ್ರೇಷ್ಟ ನಟ, ಶ್ರೇಷ್ಟ ನಟಿ, ಶ್ರೇಷ್ಟ ನಿರ್ದೇಶಕ, ಶ್ರೇಷ್ಟ ಕಥೆ-ಚಿತ್ರಕಥೆ, ಶ್ರೇಷ್ಟ ಛಾಯಾಗ್ರಹಣ, ಶ್ರೇಷ್ಟ ಸಂಗೀತ, ಶ್ರೇಷ್ಟ ಸಂಗೀತ ವಿಭಾಗಗಳಲ್ಲಿ ಹತ್ತು ಮಂದಿಗೆ ತಲಾ ೫,೦೦೦ ನಗದು ಆಕರ್ಷಣೀಯ ಸ್ಮರಣಿಕೆಗಳಿವೆ ಎಂದರು.
ಪ್ರಶಸ್ತಿ ಪುರಸ್ಕತರಿಗೆ ಅಕ್ಟೋಬರ್ ಮಾಸಾಂತ್ಯದಲ್ಲಿ, ನಡೆಯುವ ವರ್ಣರಂಜಿತ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು. ಕಿರು ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ೧,೦೦೦.೦೦ ರೂ.ಗಳ ಪ್ರವೇಶ ಶುಲ್ಕವಿದ್ದು, ಅರ್ಜಿಗಳನ್ನು ಬಿ.ಹೆಚ್. ರಸ್ತೆಯ ದೀಪಕ್ ಪೆಟ್ರೋಲ್ ಬಂಕ್‌ನಲ್ಲಿ ಪಡೆದು, ಭರ್ತಿ ಮಾಡಿ ಜುಲೈ ೩೧ರ ಒಳಗಾಗಿ, ಕಿರು ಚಿತ್ರಗಳನ್ನು ನಾಲ್ಕು ಹೆಚ್‌ಡಿ ಶ್ರೇಣಿಯ ಡಿವಿಡಿ ಸಹಿತ ಆಗಸ್ಟ್ ೩೦, ೨೦೨೪ ಒಳಗಾಗಿ ಸಲ್ಲಿಸಬಹುದು. ಸ್ಪರ್ಧೆಯ ವಿವರಗಳಿಗೆ ವೈದ್ಯ (೯೮೪೪೪ ೫೬೫೦೫), . (೯೪೪೯೨ ೮೪೪೯೫) ೨ (೯೬೮೬೫ ೫೯೯೫೦) ಸಂಪರ್ಕಿಸಬಹುದು ಎಂದರು.
ಬೆಳ್ಳಿ ಮಂಡಲದ ವೈದ್ಯ ಮಾತನಾಡಿ, ಶಿವಮೊಗ್ಗದಲ್ಲಿ ಚಲನಚಿತ್ರಕ್ಕೆ ಸಂಬಂಧಿಸಿದಂತೆ ರಸಗ್ರಹಣ ಕಾರ್ಯಾಗಾರ ಹಾಗೂ ಅಂತರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಏರ್ಪಡಿಸಲು ಚಿಂತನೆ ನಡೆಸಲಾಗಿದೆ. ಅಕ್ಟೋಬರ್ ಅಥವಾ ನವಂಬರ್‌ನಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಹಮ್ಮಿಕೊಳ್ಳಲಾಗುವುದು. ಹಾಗೆಯೇ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸುವ ಹಿನ್ನಲೆಯಲ್ಲಿ ಮತ್ತು ಶಿವಮೊಗ್ಗವನ್ನು ಒಂದು ಚಲನಚಿತ್ರ ಚಟುವಟಿಕೆಗಳ ಕೇಂದ್ರವನ್ನಾಗಿಸುವ ದಷ್ಟಿಯಿಂದ ಕಾರ್ಯಗಾರವನ್ನು ಆಯೋಜಿಸಲಾಗುವುದು ಎಂದರು.
ಪತ್ರಿಕಾಗೋಷ್ಟಿಯಲ್ಲಿ ಪ್ರಮುಖರಾದ ಡಾ. ನಾಗಭೂಷಣ, ಜಿ.ವಿಜಯಕುಮಾರ್, ಚೇತನ್, ಆನಂದ, ಚಂದ್ರಶೇಖರ್, ಶಿವಾನಂದ್, ಸುಕುಮಾರ್, ಸಂತೋಷ್, ಮಂಜುನಾಥ್, ಶ್ರೀನಿಧಿ ಚೇತನ್, ರಘುನಂದನ್, ಶಿವು, ಎನ್.ಬಿ.ರವೀಶ, ಮೆದಲಾದವರು ಉಪಸ್ಥಿತರಿದ್ದರು.