ತುಂಗಾ ಡ್ಯಾಂ: ತಜ್ಞರು ೨೨ ಗೇಟ್ಗಳನ್ನು ಪರಿಶೀಲಿಸಲಿ: ಕೆಬಿಪಿ
ಶಿವಮೊಗ್ಗ್ಗ : ತುಂಗಾ ಜಲಾಶಯದ ೨೨ ಗೇಟ್ ಗಳಲ್ಲಿ ಒಂದು ಗೇಟ್ನ ರೂಪ್ ಹಾಳಾಗಿದ್ದು, ಬೇರೆ ಗೇಟುಗಳು ಸರಿಯಾಗಿದೆಯೇ ಎಂಬುದನ್ನು ತಜ್ಞರು ಪರಿಶೀಲಿಸಿ ಮುಂದೆ ದೊಡ್ಡ ಮಟ್ಟದ ಅವಘಡ ಸಂಭವಿಸದಂತೆ ನೋಡಿ ಕೊಳ್ಳಬೇಕು ಎಂದು ಜೆಡಿ ಎಸ್ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಸುದ್ದಿಗೋಷ್ಟಿಯಲ್ಲಿ ಒತ್ತಾಯಿಸಿದರು.
೧೯೫೨ರಲ್ಲಿ ಆರಂಭವಾದ ಜಲಾಶಯ ೨೦೦೯ರಲ್ಲಿ ಜಲಾಶಯ ವನ್ನು ಎತ್ತರಿಸಿ ಹೆಚ್ಚಿನ ನೀರು ಸಂಗ್ರಹ ಮಾಡಲಾಯಿತು. ೩.೨೪ ಟಿಎಂಸಿ ನೀರು ಸಂಗ್ರಹಿಸುತ್ತಿದ್ದು, ಅದೇ ರೀತಿ ಭದ್ರಾ ಜಲಾಶಯದಲ್ಲಿ ೭೧.೨೫ ಟಿಎಂಸಿ ನೀರು ಸಂಗ್ರಹ ವಾಗುತ್ತಿದೆ ಎಂದರು.
೧೯೫೨ರಲ್ಲಿ ಆರಂಭವಾದ ತುಂಗಾ ಜಲಾಶಯದಲ್ಲಿ ಹೂಳು ಮತ್ತು ಮರಳನ್ನು ತೆಗೆದು ೨೦೦೯ರಲ್ಲಿ ಅದನ್ನು ತೆಗೆಯದೇ ಪಕ್ಕದಲ್ಲಿಯೇ ಮತ್ತೊಂದು ಎತ್ತರದ ಹಾಗೂ ೨೨ಗೇಟ್ವುಳ್ಳ ಜಲಾಶಯ ನಿರ್ಮಿಸಲಾಗಿತ್ತು. ಈಗ ಜಲಾಶ ಯದ ಕೆಳಗೆ ಸಾಕಷ್ಟು ಹೂಳು ಮತ್ತು ಮರಳು ಸಂಗ್ರಹವಾಗಿರು ವುದರಿಂ ದ ನೀರಿನ ಸಂಗ್ರಹ ಕಡಿಮೆ ಯಾ ಗಿದೆ. ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವರು ನೀರಾವರಿ ತಜ್ಞರು ಹಾ ಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಹೂಳು ಮತ್ತು ಮರಳು ತೆಗೆಸಿ ಹೆಚ್ಚು ನೀರು ಸಂಗ್ರಹವಾಗಲು ಗಮನಹರಿಸಬೇಕು ಎಂದು ಆಗ್ರಹಿಸಿದರು.
ಹೊಸಪೇಟೆಯ ಟಿಬಿ ಡ್ಯಾಂನ ಒಂದು ಗೇಟ್ ಕಳಚಿ ಬಿದ್ದು, ಅಪಾರ ಪ್ರಮಾಣದ ನೀರು ಪೋಲಾ ಗುತ್ತಿದೆ. ಇದನ್ನು ತಪ್ಪಿಸಲು ಕೊಚ್ಚಿ ಹೋಗಿರುವ ೧೯ನೇ ಗೇಟ್ ಸ್ಥಳ ದಲ್ಲಿ ತಾತ್ಕಾಲಿಕ ಗೇಟ್ ಅಳವಡಿಕೆ ಕಾರ್ಯ ನಡೆಯ ತ್ತಿದೆ. ಅದೇ ರೀತಿ ಭದ್ರಾ ಜಲಾಶಯ ದಲ್ಲೂ ನೀರು ಸೋರಿಕೆಯಾಗುತ್ತಿದೆ. ಈ ಬಗ್ಗೆ ಸಹ ಸರ್ಕಾರ ಕೂಡಲೇ ಗಮನಹರಿ ಸಬೇಕು ಎಂದರು.
ಮಹಾನಗರ ಪಾಲಿಕೆಗೆ ಚುನಾ ವಣೆಯಾಗದೇ ೮ತಿಂಗಳಾಗಿದೆ. ಚುನಾಯಿತ ಪ್ರತಿನಿಧಿಗಳಿಲ್ಲದೆ, ಸಾರ್ವಜನಿಕರ ಸಮಸ್ಯೆಗಳು ಬಗೆಹರಿಯುತ್ತಿಲ್ಲ. ೨೪೭ ಕುಡಿ ಯುವ ನೀರು ಸಂಪರ್ಕ ವ್ಯವಸ್ಥೆ ನಗರದ ಹಲವರು ಬಡಾವಣೆಗಳಲ್ಲಿ ಇದ್ದರೂ ಸಹ ಸರಿಯಾಗಿ ನೀರು ಸರಬರಾಜು ಆಗುತ್ತಿಲ್ಲ. ಅನೇಕ ಕಡೆ ಹಳೇ ವ್ಯವಸ್ಥೆಯೇ ಮುಂದುವ ರೆದಿದೆ. ಹೊಸ ವ್ಯವಸ್ಥೆಯಲ್ಲಿ ಎಲ್ಲವೂ ಸರಿಯಾಗಿದ್ದರೆ ಮಾತ್ರ ನೀರು ಸರಬರಾಜು ಮಾಡಿ, ಇಲ್ಲದಿದ್ದರೆ ಹಳೆಯ ವ್ಯವಸ್ಥೆಯನ್ನೇ ಮುಂದುವರೆಸಿ ಮತ್ತು ಕುಡಿಯುವ ನೀರಿನ ಪೈಪ್ಗೆ ಕೊಳಚೆ ನೀರು ಸೇರದಂತೆ ನೋಡಿಕೊಳ್ಳಬೇಕಾ ದದ್ದು ಅಧಿಕಾರಿಗಳ ಜವಾಬ್ದಾರಿ. ಇದರಿಂದ ನಗರದಲ್ಲಿ ಜಂಡೀಸ್ ನಂತಹ ಕಾಯಿಲೆಗಳು ಕೂಡ ಹೆಚ್ಚಾಗುತ್ತಿವೆ ಎಂದರು.
ಸರ್ಕಾರ ಮಹಾನಗರ ಪಾಲಿಕೆಗೆ ಚುನಾವಣೆ ನಡೆಸಲು ಹಿಂದೇಟು ಹಾಕುತ್ತಿದೆ. ಸರ್ಕಾರ ಜಿಲ್ಲಾಧಿಕಾರಿಗಳಿಗೆ ೪ಬಾರಿ ಪತ್ರ ಬರೆದಿದ್ದು ಅದೇ ರೀತಿ ಜಿಲ್ಲಾಧಿಕಾರಿಗಳು ಸಹ ಪಾಲಿಕೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಆದರೆ ಪಾಲಿಕೆ ಆಯುಕ್ತರಿಂದ ಯಾವುದೇ ಉತ್ತರ ಬಂದಿಲ್ಲ. ಚುನಾವಣಾ ಆಯೋ ಗವು ಸಹ ಪಾಲಿಕೆ ಚುನಾವಣೆ ನಡೆಸಲು ಮುಂದಾಗಿರುವುದಕ್ಕೆ ಸ್ವಾಗತಿಸಿದ ಅವರು, ಶೀಘ್ರವೇ ಚುನಾವಣೆ ದಿನಾಂಕ ಘೋಷಣೆ ಆಗಬೇಕು.
ಜನರ ತೊಂದರೆ ತಪ್ಪಿಸ ಬೇಕು ಎಂದ ಅವರು, ಪಾಲಿಕೆಯ ವಾರ್ಡ್ಗಳ ಸಂಖ್ಯೆಯನ್ನು ನಗರದ ಸುತ್ತಮುತ್ತಲ ಗ್ರಾಮಗಳನ್ನು ಸೇರಿಸಿ ಹೆಚ್ಚಿಸಬೇಕಾಗುತ್ತದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜೆಡಿ ಎಸ್ ನಗರಾಧ್ಯಕ್ಷ ದೀಪಕ್ಸಿಂಗ್, ಪ್ರಚಾರ ಸಮಿತಿ ಅಧ್ಯಕ್ಷ ಸಿದ್ದಪ್ಪ, ಪ್ರಮುಖರಾದ ನರಸಿಂಹ ಗಂಧದಮನೆ, ಗೋಪಿ, ಜಯಣ್ಣ, ದಯಾನಂದ್, ಸಂಜಯ್ ಕಸ್ಯಪ್, ನಿಹಾಲ್, ಸಂಗಯ್ಯ, ವೆಂಕಟೇಶ್, ರಘು, ನಾಗೇಶ್ ಇನ್ನಿತರರಿದ್ದರು.