ಜಿಲ್ಲಾ ಸುದ್ದಿತಾಜಾ ಸುದ್ದಿಲೇಖನಗಳು

ಆ.೧೫ : ಸ್ವಾತಂತ್ರ್ಯ ದಿನಾಚರಣೆ…

Share Below Link

ಹೆಚ್.ಸಿ. ಮುರುಳೀಧರ್
ಭಾರತದ ತ್ರಿವರ್ಣ ಧ್ವಜ : ಭಾರತದ ರಾಷ್ಟ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜು.೨೨, ೧೯೪೭ ರ ಸಾಂವಿಧಾನಿಕ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆ.೧೫, ೧೯೪೭ ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬, ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯ ಭಾರತದ (bಟಞಜ್ಞಿಜಿಟ್ಞ) ಬಾವುಟವಾಗಿಯೂ, ೨೬, ಜನವರಿ, ೧೯೫೦ ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ. ಹಿಂದಿ ಭಾಷೆಯಲ್ಲಿ ತಿರಂಗಾ, ಕನ್ನಡದಲ್ಲಿ ತ್ರಿವರ್ಣ – ಮೂರು ವರ್ಣಗಳ ಧ್ವಜವೆಂದು ಸೂಚಿಸುವ ಪದಗಳು ಭಾರತದ ಬಾವುಟವನ್ನು ಸೂಚಿಸುವಾಗ ಬಳಕೆಯಲ್ಲಿದೆ.
ತ್ರಿವರ್ಣ ಧ್ವಜದ ವೈಶಿಷ್ಟ್ಯ : ತ್ರಿವರ್ಣ ಧ್ವಜ ಅಗಲದು ದ್ದಕ್ಕೂ ಮೇಲೆ ಕೇಸರಿ ಬಣ್ಣ, ಮಧ್ಯದಲ್ಲಿ ಬಿಳಿ ಬಣ್ಣ, ಕೊನೆಯಲ್ಲಿ ಹಸಿರು ಬಣ್ಣದ ಪಟ್ಟಿಗಳಿಂದ ಕೂಡಿದೆ. ಬಾವುಟದ ಮಧ್ಯದಲ್ಲಿ ಇಪ್ಪತ್ತು ನಾಲ್ಕು ರೇಖೆಗಳುಳ್ಳ ನೀಲಿಯ ಅಶೋಕ ಚಕ್ರವಿದೆ. ದೇಶದ ವಿಭಿನ್ನ ಜತಿ, ಮತ, ಪಂಗಡ ಮತ್ತು ಸಂಸ್ಕೃತಿಯ ಜನರನ್ನು ಒಂದೇ ಧ್ವಜದಡಿ ನಿಲ್ಲಿಸಿ ದೇಶದ ಏಕತೆಯನ್ನು ಸಾರುವ ದಿವ್ಯ ಸಾಧನವೇ ನಮ್ಮ ರಾಷ್ಟ್ರಧ್ವಜ.
ಈ ನಮ್ಮ ಸ್ವಾತಂತ್ರ್ಯ ದೇಶದ ಸಂಕೇತವಾಗಿರುವ ರಾಷ್ಟ್ರಧ್ವಜದ ಅವಹೇಳನ ರಾಷ್ಟ್ರದ್ರೋಹ ಆಗಿರುತ್ತದೆ. ಅದರ ಉಳಿವಿಗಾಗಿ ಬಲಿದಾನವಾಗಲು ಸದಾ ಸಿದ್ಧವಾಗಿರುವ ನಾವುಗಳು ಅದರ ಮೇಲಿರುವ ಭಕ್ತಿಯನ್ನೇ ದೇಶಭಕ್ತಿ ಎನ್ನುತ್ತೇವೆ.
ಅಂದಿನ ಪ್ರಧಾನಿ ೧೯೪೭ ಜು.೨೨ ರಂದು ಸಭೆಯಲ್ಲಿ ನಮ್ಮ ರಾಷ್ಟ್ರ ಧ್ವಜವನ್ನು ದೇಶಕ್ಕೆ ಅರ್ಪಿಸಿದರು. ನಮ್ಮ ಸರ್ಕಾರವು ಧ್ವಜ ಕೇವಲ ಕೈ ನೇಯ್ಗೆಯಿಂ ದಲೇ ಸಿದ್ಧವಾದ ಶುದ್ಧ ಖಾದಿ ಯಿಂದಲೇ ಮಾಡಲ್ಪಟ್ಟಿರಬೇಕು. ಅದು ಉಣ್ಣೆಯ ಅಥವಾ ರೇಷ್ಮೆಯ ಇಲ್ಲವೇ ಹತ್ತಿಯ ದಾದರೂ ಅಡ್ಡಿಯಿಲ್ಲ.
ಆದರೆ ಅದು ಕೈ ನೂಲು ಮತ್ತು ಕೈ ನೇಯ್ಗೆಯಿಂದಲೇ ಆಗಿರಬೇಕು. ಕೇಸರಿ- ಬಿಳಿ -ಹಸಿರು ಬಣ್ಣಗಳ ಅಳತೆ ಸಮ ಪ್ರಮಾಣದಲ್ಲಿ ಇದ್ದು, ನೀಲಿ ಚಕ್ರವು ಹೆಚ್ಚು ಕಡಿಮೆ ಬಿಳಿ ಬಣ್ಣದ ಅಡ್ಡ ಗೆರೆಗಳಷ್ಟಿದ್ದು, ಅದರಲ್ಲಿ ಇಪ್ಪತ್ನಾಲ್ಕು ರೇಖೆಗಳಿವೆ. ಧ್ವಜದ ಉದ್ದ ಮತ್ತು ಅಗಲ ೩:೨ ಪ್ರಮಾಣದಲ್ಲಿರತಕ್ಕದ್ದು ಎಂದು ತಿಳಿಸಿದೆ.
ರಾಷ್ಟ್ರಧ್ವಜ ತಯಾರಿಸುವ ಹಕ್ಕು : ರಾಷ್ಟ್ರಧ್ವಜವನ್ನು ಕರ್ನಾಟಕದ ಧಾರವಾಡ ಜಿಯ ಗರಗ ಗ್ರಾಮದಲ್ಲಿ ತಯಾರಿಸಲಾಗುತ್ತದೆ. ಉತ್ತರ ಕರ್ನಾಟಕದಾದ್ಯಂತ ಒಟ್ಟು ೫೨ ಇಂತಹ ಘಟಕಗಳು ರಾಷ್ಟ್ರಧ್ವಜ ನಿರ್ಮಾಣದಲ್ಲಿ ತೊಡಗಿವೆ. ಭಾರತದ ಸಂವಿಧಾನದಲ್ಲಿ ಉಖದಂತೆ ಮತ್ತು ಭಾರತೀಯ ಸ್ಟಾಂಡರ್ಡ್ಸ್ ಬ್ಯೂರೋದ ನಿಯಮ ಗಳಿಗೆ ತಕ್ಕಂತೆ ರಾಷ್ಟ್ರಧ್ವಜವನ್ನು ಉತ್ಪಾದಿಸಬೇಕು. ಬ್ಯೂರೋದ ಮಾನದಂಡಕ್ಕೆ ತಕ್ಕಂತೆ ಇಲ್ಲದಿದ್ದರೆ ಉತ್ಪನ್ನವೇ ತಿರಸ್ಕತವಾಗುತ್ತದೆ.
ನಮ್ಮ ಪವಿತ್ರ ಭಾರತಾಂಬೆಯ ಕೀರ್ತಿಯು ಮುಗಿಲೆತ್ತರಕ್ಕೆ ಏರಲಿ, ಎಲ್ಲಕ್ಕಿಂತ ಶ್ರೇಷ್ಠವಾದ ನಮ್ಮ ರಾಷ್ಟ್ರದ ಧ್ಯೇಯೋದ್ದೇಶಗಳು ಎಲ್ಲಕ್ಕಿಂತ ಎತ್ತರದಲ್ಲಿ ರಾರಾಜಿಸಲಿ ಎಂಬ ಸಂಕೇತವನ್ನು ನಾಲ್ಕು ದಿಕ್ಕುಗಳಿಗೂ ತಿಳಿಯಪಡಿಸು ವುದೇ ನಮ್ಮ ರಾಷ್ಟ್ರ ಧ್ವಜವನ್ನು ಮೇಲಕ್ಕೆ ಹಾರಿಸುವ ಉದ್ದೇಶ.
ನಮ್ಮ ರಾಷ್ಟ್ರಧ್ವಜದ ಬಣ್ಣಗಳ ವಿಶೇಷತೆ : ಕೇಸರಿ :- ಧೈರ್ಯ, ಪರಿತ್ಯಾಗ ಮತ್ತು ದೇಶದ ಒಳಿತಿಗಾಗಿ ನಡೆವ ಬಲಿದಾನಗಳ ಸಂಕೇತವಾಗಿದೆ.
ಬಿಳಿ ಬಣ್ಣ :- ಪವಿತ್ರ ಮನಸ್ಸಿನವರೊಂದಿಗೆ ನಿತ್ಯವೂ ಸತ್ಯ, ಶಾಂತಿಗಳೊಂದಿಗೆ ನಮ್ಮನ್ನು ಬೆಳಕಿನೆಡೆಗೆ ಕೊಂಡೊಯ್ಯುವ ಸತ್ಯ ಮಾರ್ಗದ ಸಂಕೇತವಾಗಿದೆ.
ಹಸಿರು ಬಣ್ಣ :- ಪ್ರಕತಿಯೊಡನೆ ಮನುಷ್ಯನಿಗಿರ ಬೇಕಾದ ಅವಿನಾಭಾವ ಸಂಬಂಧವನ್ನು ತಿಳಿಸುತ್ತಾ, ಹಸಿರು ಜೀವರಾಶಿಗಳನ್ನು ಅವಲಂಬಿಸಿ ರುವ ಮನುಷ್ಯ ಮತ್ತು ಭೂಮಿಯ ಅನೂಹ್ಯ ಬಾಂಧವ್ಯಗಳ ಸಂಕೇತವಾಗಿದೆ.
ರಾಷ್ಟ್ರಧ್ವಜವನ್ನು ಹಾರಿಸಿದ ನಂತರ ರಾಷ್ಟ್ರಗೀತೆ ಜನಗಣಮನ ವನ್ನು ಹಾಡಲೇ ಬೇಕು.
ರಾಷ್ಟ್ರಧ್ವಜವನ್ನು ಸರಿಯಾಗಿ ಪ್ರದರ್ಶನ ಮಾಡುವ ಕೆಲವು ವಿಧಾನಗಳು :
ಧ್ವಜವನ್ನು ಶೀಘ್ರಗತಿಯಲ್ಲಿ ಏರಿಸಬೇಕು ಮತ್ತು ಇಳಿಸುವಾಗ ನಿಧಾನಗತಿಯಲ್ಲಿ ಇಳಿಸಬೇಕು.
ಸೂರ್ಯೋದಯದಿಂದ ಹಿಡಿದು ಸೂರ್ಯಾಸ್ತದ ತನಕ ಮಾತ್ರ ಹಾರಿಸಬೇಕು.
ರಾಷ್ಟ್ರಧ್ವಜವನ್ನು ಕೆಲವು ಕಡೆ ಎಲ್ಲ ದಿನಗಳಲ್ಲೂ, ಇನ್ನು ಕೆಲವು ಕಡೆ ಕೇವಲ ವಿಶೇಷ ದಿನಗಳಲ್ಲಿ ಮಾತ್ರ ಹಾರಿಸಲಾಗುತ್ತದೆ.
ಸ್ವಾತಂತ್ರೋತ್ಸವ, ಗಣರಾ ಜ್ಯೋತ್ಸವ ಮತ್ತು ಗಾಂಧಿ ಜಯಂತಿ ಹಾಗೂ ರಾಷ್ಟ್ರೀಯ ವಿಶೇಷ ದಿನಗಳ ಜೊತೆಗೆ ಸರ್ಕಾರದ ನಿರ್ದೇಶನದ ಮೇರೆಗೆ ರಾಷ್ಟ್ರಮಟ್ಟದ ಆಚರಣೆಯ ಸಂದರ್ಭಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಬಹುದು.
ಧ್ವಜ ಏರಿಸುವಾಗ ಧ್ವಜದ ಹಸಿರು ಬಣ್ಣ ಕೆಳಗೆ ಇರುವಂತೆ ಹಾಗೂ ಕೇಸರಿ ಬಣ್ಣ ಮೇಲೆ ಇರುವಂತೆ ಹಾರಿಸತಕ್ಕದ್ದು.
ರಾಷ್ಟ್ರಧ್ವಜವನ್ನು ಉರಿಸು ವುದಾಗಲಿ, ಕೆಡಿಸುವುದಾಗಲಿ, ಕಾಲಡಿಯಲ್ಲಿ ಹಾಕುವುದಾಗಲಿ, ಹಾಳುಗೆಡುವುದಾಗಲಿ ಅಥವಾ ಅದಕ್ಕೆ ಯಾವುದೇ ತರಹದ ಅಗೌರವ ತೋರುವ ರೀತಿಯಲ್ಲಿ ನಡೆದು ಕೊಂಡರೆ, ಮಾತು, ಬರಹ ಅಥವಾ ಕತ್ಯದ ಮೂಲಕ ಅಗೌರವ ತೋರಿದರೆ ರಾಷ್ಟ್ರೀಯ ಗೌರವದ ಅವಮಾನ ವಿರೋಧಿ ಕಾಯ್ದೆಯಡಿಯಲ್ಲಿ ಶಿಕ್ಷೆಗೆ ಗುರಿ ಪಡಿಸಲಾಗುವುದು.
ಹವಾಮಾನದ ವೈಪರೀತ್ಯ ದಿಂದ ಧ್ವಜವು ಹಾಳಾಗದಂತೆ ಹಾರುತ್ತಿರುವ ಧ್ವಜವನ್ನು ಕಾಪಾಡಬೇಕು.
ವೇದಿಕೆಯ ಮೇಲೆ ಬಳಸುವಂತಿದ್ದಲ್ಲಿ ಸಭಿಕರ ಎದುರಿಗೆ ನಿಂತು ಭಾಷಣ ಮಾಡುವವರ ಬಲಕ್ಕೆ ಧ್ವಜ ಕೋಲಿನಿಂದ ಅದನ್ನು ಹಾರಿಸತಕ್ಕದ್ದು. ಸಮ್ಮೇಳನಗಳು ಇತರ ಕಾರ್ಯಕ್ರಮಗಳು ನಡೆಯುವಾಗ ವೇದಿಕೆಯ ಮೇಲಿರುವ ಅಧ್ಯಕ್ಷ ಸ್ಥಾನಕ್ಕಿಂತ ಎತ್ತರದಲ್ಲಿ ನಮ್ಮ ರಾಷ್ಟ್ರಧ್ವಜ ಹಾರಾಡತಕ್ಕದ್ದು.
ಶಾಲೆ-ಕಾಲೇಜುಗಳು, ಕ್ರೀಡಾ ಶಿಬಿರಗಳು, ಸ್ಕೌಟ್ಸ್ ಶಿಬಿರಗಳು ಹಾಗೂ ವಿಶೇಷ ಸಂದರ್ಭಗಳಲ್ಲಿ ಮಕ್ಕಳ ಮನಸ್ಸಿನಲ್ಲಿ ವಿಶೇಷ ಗೌರವ ಮೂಡಿಸಲು ರಾಷ್ಟ್ರಧ್ವಜ ಹಾರಿಸಬಹುದು.
ನಾಡಿನ ಸಮಸ್ತ ಜನತೆಗೆ ೭೮ ನೇ ವರ್ಷದ ಸ್ವಾತಂತ್ರ್ಯೋತ್ಸವದ ಹಾರ್ದಿಕ ಶುಭಾಶಯಗಳು..