ಗ್ರಾಮಾಂತರ ಕ್ಷೇತ್ರಕ್ಕೆ ಬಿಎಸ್ವೈ, ಬಿವೈಆರ್ ಹೆಚ್ಚಿನ ಅನುದಾನ : ಎಸ್.ರುದ್ರೇಗೌಡ..
ಶಿವಮೊಗ್ಗ: ಗ್ರಾಮಾಂತರ ಕ್ಷೇತ್ರದಲ್ಲಿ ಶಾಸಕ ಕೆ.ಬಿ. ಅಶೋಕ ನಾಯ್ಕ ಅವರು ಕೋಟ್ಯಾಂತರ ರೂ. ಅನುದಾನ ತಂದಿದ್ದು, ಬಿ. ಎಸ್.ಯಡಿಯೂರಪ್ಪ ಸಿಎಂ ಆಗಿದ್ದ ಅವಧಿಯಲ್ಲಿ ಹಾಗೂ ಲೋಕಸಭೆ ಸದಸ್ಯ ಬಿ.ವೈ. ರಾಘವೇಂದ್ರ ಅವರಿಂದಲೂ ಅನುದಾನ ತರುವ ಮೂಲಕ ಅಭಿವೃದ್ಧಿ ಮಾಡಿzರೆ ಎಂದು ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ ಹೇಳಿದರು.
ಶಿವಮೊಗ್ಗ ಗ್ರಾಮಾಂತರ ವಿಧಾನ ಸಭಾ ಕ್ಷೇತ್ರದ ಹರಮಘಟ್ಟ ವ್ಯಾಪ್ತಿಯಲ್ಲಿ ಗ್ರಾಮದ ಪ್ರಮುಖರ ಮನೆ ಭೇಟಿ ಹಾಗೂ ಸಾರ್ವಜನಿಕರ ಭೇಟಿ ಮಾಡಿ ಸಮಾಲೋಚನೆ ನಡೆಸಿ ಮಾತ ನಾಡಿ, ಪ್ರತಿಯೊಂದು ಗ್ರಾಮಗಳ ಲ್ಲಿಯು ಅಗತ್ಯ ಮೂಲಸೌಕರ್ಯ ಒದಗಿಸುವ ಕೆಲಸಗಳನ್ನು ಮಾಡಿ zರೆ. ಮುಂದಿನ ಬಾರಿಯು ಅತಿ ಹೆಚ್ಚು ಅಭಿವೃದ್ಧಿ ಕೆಲಸಗಳನ್ನು ಮಾಡಲು ಅವಕಾಶ ಮಾಡಿಕೊಡ ಬೇಕು. ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಉತ್ತರಖಂಡ ಮಾಜಿ ಎಂಎಲ್ಎ, ಶಿವಮೊಗ್ಗ ಗ್ರಾಮಾ ಂತರ ಚುನಾವಣಾ ಪ್ರಮುಖರಾದ ಮುಖೇಶ್ ಸಿಂಗ್ ಕೋಲಿ ಮಾತ ನಾಡಿ, ಅಭಿವೃದ್ಧಿ ವೇಗವು ದ್ವಿಗುಣಗೊಳ್ಳಬೇಕಾದರೆ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಪಕ್ಷದಲ್ಲಿ ಆಡಳಿತದಲ್ಲಿ ಇರುವುದು ಅತ್ಯಂತ ಮುಖ್ಯ. ದೇಶ, ರಾಜ್ಯದ ಸಮಗ್ರ ಅಭಿವೃದ್ಧಿ ದೃಷ್ಠಿಯಿಂದ ಬಿಜೆಪಿ ಯನ್ನು ಬೆಂಬಲಿಸಬೇಕು. ಗ್ರಾಮಾ ಂತರ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಿಸುವ ಜತೆಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿ ಅಧಿಕಾರಕ್ಕೆ ತರಬೇಕು ಎಂದು ಹೇಳಿದರು.
ನರೇಂದ್ರ ಮೋದಿ ಪ್ರಧಾನಿ ಅವಧಿಯಲ್ಲಿ ಭಾರತ ಅತಿ ಸದೃಢ ದೇಶವಾಗಿ ಬೆಳೆಯುತ್ತಿದ್ದು, ವಿಶ್ವದ ಬಹುತೇಕ ದೇಶಗಳು ಭಾರತದ ನಾಯಕತ್ವ ಒಪ್ಪಿವೆ. ರಾಜ್ಯದ ಲ್ಲಿಯೂ ಬಿಜೆಪಿ ಸರ್ಕಾರವು ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಮುನ್ನಡೆದಿದೆ. ಈ ಬಾರಿ ಯೂ ಬಿಜೆಪಿ ಅಧಿಕಾರಕ್ಕೆ ಬರು ವುದು ನಿಶ್ಚಿತ ಎಂದು ತಿಳಿಸಿದರು.
ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ.ಬಿ. ಅಶೋಕ ನಾಯ್ಕ ಮಾತನಾಡಿ, ಐದು ವರ್ಷಗಳ ಅವಧಿಯಲ್ಲಿ ಎಲ್ಲ ಗ್ರಾಮಗಳಿಗೆ ಅವಶ್ಯಕವಿರುವ ಪ್ರಥಮ ಆದ್ಯತಾ ಕೆಲಸಗಳನ್ನು ಮಾಡಿದ್ದು, ಸಂಪೂರ್ಣ ಅನು ದಾನದ ಸದ್ಭಳಕೆ ಮಾಡಲಾಗಿದೆ. ಬಿಜೆಪಿ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬಂದ ನಂತರ ಹೆಚ್ಚಿನ ಕೆಲಸಗಳನ್ನು ಮಾಡಲಾಗುತ್ತದೆ. ಗ್ರಾಮಾಂತರ ಕ್ಷೇತ್ರದಲ್ಲಿ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಲಾಗಿದೆ. ಇದರಿಂದ ರೈತರಿಗೆ ಅನುಕೂಲವಾಗಿದೆ ಎಂದು ಹೇಳಿದರು.
ಗ್ರಾಮಾಂತರ ವಿಧಾನ ಸಭಾ ಅಭ್ಯರ್ಥಿ ಕೆ.ಬಿ.ಅಶೋಕನಾಯ್ಕ ಅವರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದರು. ಪಕ್ಷದ ಕಾರ್ಯ ಕರ್ತರು ಹಾಗೂ ಮುಖಂಡರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಅನಾರೋಗ್ಯದಿಂದ ಇರುವ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ಮಹಾಶಕ್ತಿ ಕೇಂದ್ರಗಳ ಗ್ರಾಮ ಪಂಚಾಯಿತಿ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು. ವಿವಿಧ ಪಕ್ಷಗಳ ಮುಖಂಡರು ಬಿಜೆಪಿಗೆ ಸೇರ್ಪಡೆಯಾದರು.
ಕುಂಸಿ ಜಿ ಪಂಚಾಯಿತಿ ವ್ಯಾಪ್ತಿಯ ಮಲೇಶಂಕರ ಗ್ರಾಮದ ಶ್ರೀ ಮಲೇಶಂಕರ ಸ್ವಾಮಿಯ ರಥೋತ್ಸವ ಕಾರ್ಯಕ್ರಮದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಬಿ. ಅಶೋ ಕನಾಯ್ಕ ಪಾಲ್ಗೊಂಡು ದೇವರ ದರ್ಶನ ಪಡೆದರು. ಆನವೇರಿ ಗ್ರಾಮದಲ್ಲಿ ಪಕ್ಷದ ಮುಖಂಡರ ಮನೆಗಳಿಗೆ ಭೇಟಿ ನೀಡಿದರು.
ಭಾನುವಾರ ಬೆಳಗ್ಗೆಯಿಂದಲೇ ಗ್ರಾಮಾಂತರ ಪ್ರದೇಶದ ವಿವಿಧ ಭಾಗಗಳಲ್ಲಿ ಇರುವ ದೇವಸ್ಥಾನ ಗಳಿಗೆ ಗ್ರಾಮಾಂತರ ಅಭ್ಯರ್ಥಿ ಕೆ.ಬಿ.ಅಶೋಕನಾಯ್ಕ ಭೇಟಿ ನೀಡಿದರು. ರವೀಂದ್ರನಗರದ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಊರಗ ಡೂರು ಶಿವದುರ್ಗ ಶ್ರೀ ವಿನಾ ಯಕ ಸ್ವಾಮಿ, ನಿದಿಗೆ ಶ್ರೀ ಶನೈಶ್ಚರ ದೇವಸ್ಥಾನ ಸೇರಿದಂತೆ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ದರು.
ಮಂಡಲ ಅಧ್ಯಕ್ಷ ಮಂಜುನಾಥ್ ಕಲ್ಲಜ್ಜನಾಳ್, ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ಗೋಪಾಲ್, ಗಿರೀಶ್, ಹೊಳೆಹೊನ್ನೂರು ಮಂಡಲ ಪ್ರಧಾನ ಕಾರ್ಯದರ್ಶಿ ಉಜ್ಜಿನಪ್ಪ, ಮಶ್, ಷಡಾಕ್ಷರಪ್ಪ ಗೌಡ, ಜಗದೀಶ್ ಗೌಡ, ಮಂಜಣ್ಣ, ವಿರೇಶ್, ಶಿವಣ್ಣ, ದಾನಶೇಖರಪ್ಪ, ಹಾಲೇಶ್, ಚನ್ನಬಸಪ್ಪ, ರಂಗೋಜಿ ರಾವ್, ಸುರೇಶ್, ರುದ್ರೋಜಿರಾವ್, ರಮೇಶ್ ಭೈರನಕೊಪ್ಪ ಮತ್ತಿತರರು ಉಪಸ್ಥಿತರಿದ್ದರು.