ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಶಾಲಾ ಜಮೀನು ಗೇಣಿ ರೈತರ ಸಮಸ್ಯೆ , ಕನ್ನಡಪರ ಹೋರಾಟದ ನೆನಪಿನ ಸಮಾರಂಭ

Share Below Link

ಶಿವಮೊಗ್ಗ: ರಾಜ್ಯ ಭೂ- ವಿದ್ಯಾದಾನದ ಶಾಲಾ ಜಮೀನುಗಳ ಗೇಣಿ ರೈತ ಹೋರಾಟ ಸಮಿತಿ, ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ಆಶ್ರಯದಲ್ಲಿ ೧೯೭೯ರ ನ.೨೦ರ ೪೫ ವರ್ಷಗಳ ಹಿಂದಿನ ಕನ್ನಡ ಪರ ಹೋರಾಟದ ಯಶಸ್ವಿ ಮತ್ತು ರಾಜ್ಯದಲ್ಲಿ ಭೂ-ವಿದ್ಯಾದಾನದ ಶಾಲಾ ಜಮೀನು ಗೇಣಿ ರೈತರ ಸಮಸ್ಯೆ ಬಗ್ಗೆ ಸಮಾರಂಭವನ್ನು ನ.೨೦ರ ಬೆಳಿಗ್ಗೆ ೧೦.೩೦ಕ್ಕೆ ಬೆಂಗಳೂರಿನ ಗಾಂಧಿ ಭವನ ಸಮೀಪದ ಕರ್ನಾಟಕ ಚಿತ್ರಕಲಾ ಪರಿಷತ್‌ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟಿ ಕಲ್ಲೂರು ಮೇಘರಾಜ್ ಸುದ್ದಿಗೋಷ್ಟಿಯಲ್ಲಿ ವಿವರಿಸಿದರು.
ಕರ್ನಾಟಕ ಲೋಕಸೇವಾ ಆಯೋಗದ ಎದುರು ಖ್ಯಾತ ಸಾಹಿತಿಗಳೊಂದಿಗೆ ಆಯೋಗದ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡ ಮಾಧ್ಯಮದಲ್ಲಿ ಬರೆಯಲು ಅವಕಾಶ ನೀಡಬೇಕು ಎಂದು ಬೇಡಿಕೆಯೊಂದಿಗೆ ಆರಂಭಿಸಿದ್ದ ೨೪ ಗಂಟೆಗಳ ಉಪವಾಸ ಸತ್ಯಾಗ್ರಹ ನಡೆದು, ಬರುವ ನ.೨೦ಕ್ಕೆ ೪೫ ವರ್ಷಗಳು ತುಂಬಲಿರುವ ಹಿನ್ನಲೆಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.
೧೯೭೯ರ ನ.೨೦ರಂದೇ ಅಂದಿನ ಮುಖ್ಯಮಂತ್ರಿ ಡಿ. ದೇವರಾಜ ಅರಸ್ ಅವರು ಉಪವಾಸ ಸತ್ಯಾಗ್ರಹದ ಸುದ್ದಿ ತಿಳಿದು ರಾಜ್ಯದ ಎ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡ ಮಾಧ್ಯಮದಲ್ಲಿ ಬರೆಯಲು ಅವಕಾಶ ಕಲ್ಪಿಸಿಕೊಟ್ಟಿದ್ದನ್ನು ಸ್ಮರಿಸಿದ ಅವರು, ೧೯೫೪-೫೫ರಲ್ಲಿ ಅಂದಿನ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರು ಆರಂಭಿಸಿದ್ದ ಭೂ ವಿದ್ಯಾದಾನದ ಚಳುವಳಿಯಲ್ಲಿ ರಾಜ್ಯದ ವಿವಿಧ ಸರ್ಕಾರಿ ಶಾಲೆಗಳಿಗೆ ಭೂದಾನಿಗಳಿಂದ ಬಂದಿದ್ದ ಶಾಲಾ ಜಮೀನುಗಳನ್ನು ಕಳೆದ ೬೦-೭೦ ವರ್ಷಗಳಿಂದ ಗೇಣಿ ಆಧಾರದಲ್ಲಿ ರೈತರು ಗೇಣಿ ಸಾಗುವಳಿ ಮಾಡಿ ಕೊಂಡು ಬರುತ್ತಿzರೆ. ಈ ಶಾಲಾ ಜಮೀನು ಗೇಣಿ ಸಮಸ್ಯೆ ಮತ್ತು ನಿವಾರಣೆ ಬಗ್ಗೆ ಹಲವು ಮುಖಂಡರು ಅಭಿಪ್ರಾಯಗಳನ್ನು ಕಾರ್ಯಕ್ರಮ ದಲ್ಲಿ ಹಂಚಿಕೊಳ್ಳಲಿzರೆ ಎಂದರು.
ರಾಜ್ಯಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ.ರೇವಣ್ಣ ಸಮಾರಂಭ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಮಾಜಿ ಶಾಸಕ ಬಿ. ಸ್ವಾಮಿರಾವ್ ವಹಿಸಲಿzರೆ ಎಂದರು.
ಪ್ರೊ.ಕಲ್ಲನ, ಶಂಕ್ರನಾಯ್ಕ ಇದ್ದರು.