ಜಿಲ್ಲಾ ಸುದ್ದಿತಾಜಾ ಸುದ್ದಿದೇಶರಾಜಕೀಯ

ನಮ್ಮ ಬಗ್ಗೆ ಮಾತನಾಡಲು ಅವರೇನು ನೈತಿಕತೆ ಇದೆ..

Share Below Link

ಶಿವಮೊಗ್ಗ: ಅವರು ಯಾರು?, ಅವರೇನು ನಮ್ಮನ್ನೇನು ಕೊಂಡುಕೊಂಡಿದ್ದಾರಾ? ಎಂದು ಜೆಡಿಎಸ್ ಶಾಸಕರನ್ನು ಕಾಂಗ್ರೆಸ್‌ಗೆ ಕರೆದು ತರುತ್ತೇನೆ ಎಂದಿರುವ ಶಾಸಕ ಸಿ. ಪಿ ಯೋಗೇಶ್ವರ್ ಹೇಳಿಕೆಗೆ ಶಾಸಕಿ ಶಾರದಾ ಪೂರ್ಯನಾಯ್ಕ್ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು, ನಾವೇನು ಅವರನ್ನು ನಂಬಿಕೊಂಡು ನಮ್ಮ ನಮ್ಮ ಕ್ಷೇತ್ರದಲ್ಲಿ ನಿಂತು ಗೆದ್ದು ಬಂದಿದ್ದೇವಾ? ಎಂದು ಪ್ರಶ್ನಿಸಿದ್ದಾರೆ. ಅವರು ಯಾರು? ಎಲ್ಲರನ್ನು ಕೊಂಡುಕೊಳ್ಳುತ್ತೇವೆ ಎನ್ನುವ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಅವರು ಮೊದಲು ಶಾಸಕರಾಗಿ ಗೌರವ ಯುತವಾಗಿ ನಡೆದುಕೊಳ್ಳುವುದನ್ನು ಕಲಿತುಕೊಳ್ಳಬೇಕು ಎಂದರು.
ನಮಗೆ ಟಾಸ್ಕ್ ಕೊಟ್ಟರೆ ಅವರನ್ನು ಸೆಳೆಯುತ್ತೇವೆ, ಇವರನ್ನು ಕರೆದುಕೊಂಡು ಬರುತ್ತೇವೆ ಎನ್ನುವುದನ್ನು ಬಿಡಬೇಕು. ಅವರಿಗೆ ಇದನ್ನೇ ಮಾಡಿ ಅಭ್ಯಾಸ. ಹಾಗಾಗಿ ಅವರು ಇದನ್ನೇ ಹೇಳುತ್ತಿದ್ದಾರೆ. ಎಲ್ಲಿ ಹೋದ ಕಡೆಯಲ್ಲಿ ಅದನ್ನೇ ನೆನಪಿಸಿಕೊಳ್ಳುತ್ತಾರೆ ಎಂದರು.
ಉಪಚುನಾವಣೆಯಲ್ಲಿ ಗೆದ್ದ ತಕ್ಷಣ ಈ ರೀತಿ ಹೇಳಿದ್ದಾರೆ ಎಂಬ ಪ್ರಶ್ನೆಗೆ, ಅಹಂ ಮನುಷ್ಯನಿಗೆ, ಏನು ಮಾಡೋಕೆ ಆಗುತ್ತೆ. ಅಹಂ ಇರುತ್ತಲ್ಲ? ಎಂದಿದ್ದಾರೆ.
ಜೆಡಿಎಸ್ ನಡೆಸಲು ನಾಯಕತ್ವವೇ ಇಲ್ಲ, ಮುಂದೊಂದು ದಿನ ಜೆಡಿಎಸ್ ಇರಲ್ಲ ಎಂಬ ಸಿಪಿ ಯೋಗೇಶ್ವರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಯೋಗೇಶ್ವರ್ ಯಾರು ಎಂದರು. ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ನಮ್ಮ ಜೊತೆಗೆ ಇದ್ದಾರೆ. ಯೋಗೇಶ್ವರ್ ಅವರು ಅವರ ಪಾರ್ಟಿಯನ್ನು ಬಿಟ್ಟು ಬೇರೆ ಪಕ್ಷಕ್ಕೆ ಹೋಗಿ ನಿಂತು ಗೆದ್ದಿರುವವರು. ಅವರು ನಮ್ಮ ಬಗ್ಗೆ ಏನು ಹೇಳ್ತಾರೆ. ಎಲ್ಲರನ್ನೂ ಅವರದ್ದೇ ಲೆಕ್ಕದಲ್ಲಿ ತೆಗೆದುಕೊಂಡು ಹೋದರೆ ರಾಜಕಾರಣದಲ್ಲಿ ಯಾರೂ ಇರುವುದಿಲ್ಲ ಎಂದರು.

Leave a Reply

Your email address will not be published. Required fields are marked *