ಒತ್ತಡದಿಂದ ಹೊರಬರಲು ಕ್ರೀಡಾಕೂಟಗಳು ಸಹಕಾರಿ…
ಶಿವಮೊಗ್ಗ: ಒತ್ತಡದಿಂದ ಹೊರ ಬರಲು ಕ್ರೀಡಾಕೂಟ ಸಹಕಾರಿ ಎಂದು ಜಿಪಂ ಸಿಇಓ ಹೇಮಂತ್ ತಿಳಿಸಿದರು.
ಜಿಲ್ಲಾ ಪೋಲಿಸ್ ಇಲಾಖೆಯಿಂದ ಜಿಲ್ಲಾ ಸಶಸ್ತ್ರ್ರ ಮೀಸಲು ಪಡೆ ಕವಾಯತ್ ಮೈದಾನದಲ್ಲಿ ವಾರ್ಷಿಕ ಪೋಲಿಸ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದ ಅವರು, ಪೋಲಿಸ್ ಇಲಾಖೆ ಒಂದು ಶಿಸ್ತಿನ ಇಲಾಖೆಯಾಗಿದ್ದು, ವಿರಾಮವಿಲ್ಲದೆ ಸದಾಕಾಲವೂ ಒತ್ತಡದ ನಡುವೆ ಕರ್ತವ್ಯವನ್ನು ನಿರ್ವಹಿಸುವ ಪೋಲಿಸ್ ಸಿಬ್ಬಂದಿಗಳಿಗೆ ಈ ರೀತಿ ಕ್ರೀಡಾಕೂಟ ಒತ್ತಡದಿಂದ ಹೊರಬರಲು ಸಹಕಾರಿಯಾಗಲಿದೆ ಎಂದರು.
ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪರಸ್ಪರ ಹೊಂದಾಣಿಕೆಯಿಂದ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಮುಂದಿನ ದಿನಗಳಲ್ಲಿ ತಮ್ಮ ಕರ್ತವ್ಯದಲ್ಲಿ ಸಮನ್ವಯತೆ ಸಾಧಿಸಲು ಸಾಧ್ಯ ವಾಗುತ್ತದೆ ಎಂದರು.
ಕ್ರೀಡಾಕೂಟ ಸ್ಪರ್ಧೆಯಲ್ಲ, ಮನೋರಂಜನೆ. ಇದರಲ್ಲಿ ಪ್ರತಿಯೊಬ್ಬರು ಸಂಭ್ರಮ ಮತ್ತು ಉತ್ಸಾಹದಿಂದ ಭಾಗವಹಿಸಿ ಪ್ರತಿಭೆ ಯನ್ನು ಗುರುತಿಸಿಕೊಳ್ಳಲು ಒಂದು ವೇದಿಕೆಯಾಗಿದೆ. ಎಲ್ಲರೂ ಒತ್ತಡ ರಹಿತವಾಗಿ ಕ್ರೀಡೆಯಲ್ಲಿ ಭಾಗವಹಿಸು ವಂತೆ ಸಲಹೆ ನೀಡಿದರು.
ಕ್ರೀಡಾ ಜ್ಯೋತಿಯನ್ನು ನೀಡಿ ಪುರುಷರ ೮೦೦ ಮೀಟರ್ ಓಟಕ್ಕೆ ಚಾಲನೆ ನೀಡುವ ಮೂಲಕ ಕ್ರೀಡಾಕೂಟ ಆರಂಭಿಸಲಾಯಿತು.
ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್ ಕುಮಾರ್, ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ, ಕಾರಿಯಪ್ಪ ಹಾಗೂ ಪೋಲಿಸ್ ಇಲಾಖೆಯ ಸಿಬ್ಬಂದಿಗಳು, ಮಹಿಳಾ ಪೋಲಿಸರು ಉಪಸ್ಥಿತರಿದ್ದರು.