ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ವೈಚಾರಿಕ ದೀವಿಗೆ ಬೆಳಗುವ ಕುವೆಂಪು ಸಾಹಿತ್ಯ…

Share Below Link

ಶಿವಮೊಗ್ಗ : ವೈಚಾರಿಕ ದೀವಿಗೆಯನ್ನು ಜನ ಸಾಮಾನ್ಯರ ಮನದಲ್ಲಿ ಬೆಳಗಲು ಕುವೆಂಪು ಅವರ ಸಾಹಿತ್ಯದ ಕೊಡುಗೆ ಅಪಾರ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್. ರಾಮಚಂದ್ರ ಹೇಳಿದರು.
ಜಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಸಹಯೋಗ ದಲ್ಲಿ ಇಂದು ದೇವಂಗಿ ಆರ್. ರತ್ನಾಕರ್ ಅವರ ಸ್ಮಾರಕ ದತ್ತಿ ಅಂಗವಾಗಿ, ದತ್ತಿ ದಾನಿಗಳಾದ ಅಮರೇಂದ್ರ ಕಿರೀಟಿ ಅವರ ಆಶಯದಂತೆ ರಾಷ್ಟ್ರಕವಿ ಕುವೆಂಪು ಅವರ ವಿಚಾರ ಕ್ರಾಂತಿಗೆ ಆಹ್ವಾನ ವಿಶೇಷ ಉಪನ್ಯಾಸ ಹಾಗೂ ಆಯೇಶಭಿಯಾನೆ ಖಾಸಿಂಬಿ ಕೋಂ ಸಯದ್ ರಸೂಲ್ ಸಾಬ್ ಅಬ್ಬಲಗೆರೆ ಸ್ಮಾರಕ ದತ್ತಿ ಅಂಗವಾಗಿ, ದತ್ತಿ ದಾನಿಗಳಾದ ಅಬ್ಬಾಸ್ ಅಬ್ಬಲಗೆರೆ ಅವರ ಆಶಯದಂತೆ ಶಿಶುನಾಳ ಶರೀಫರ ಗೀತೆಗಳ ಗಾಯನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರಾಚೀನ ಕಾಲದಿಂದಲೂ ವಿಚಾರಗಳನ್ನು ಅಭಿವ್ಯಕ್ತಪಡಿಸುವ ಹಲವು ವಿಧಾನಗಳಲ್ಲಿ ದತ್ತಿ ಉಪನ್ಯಾಸಗಳು ಒಂದು. ವೈಚಾರಿಕ ನೆಲೆಯನ್ನು ಪಸರಿಸಲು ದತ್ತಿ ಕಾರ್ಯಕ್ರಮಗಳು ಪೂರಕ ವಾಗಿದೆ. ಹಿಂಜರಿಕೆಯಿಂದ ಯುವ ಸಮೂಹ ಹೊರಬರ ಬೇಕಿದೆ. ಇಂದಿನ ಜಗತಿಕ ಪರಿಸ್ಥಿತಿಯಲ್ಲಿ, ಯುದ್ಧಪೀಡಿತ ಪ್ರದೇಶದ ಯುವ ಸಮೂಹದ ತಲ್ಲಣಗಳು ಏನಾಗಿರಬಹುದು ಎಂಬುದು ವಿಮರ್ಶಿಸಬೇಕಿದೆ. ವೈಚಾರಿಕ ಪ್ರe ಅಂತಹ ವಿಮರ್ಶಾತ್ಮಕ eನವನ್ನು ನೀಡಲಿದೆ ಎಂದು ಹೇಳಿದರು.
ಜಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ. ಮಂಜುನಾಥ ಮಾತನಾಡಿ, ಕನ್ನಡ ಭಾಷೆಯ ಜನರನ್ನು ಒಟ್ಟುಗೂಡಿಸುವ ಹಂಬಲವನ್ನು ಸಾರ್ಥಕಗೊಳಿಸುವ ಉದ್ದೇಶ ದಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕಸಾಪವನ್ನು ಸ್ಥಾಪಿಸಿದರು. ಹೊಸತಲೆಮಾರಿಗೆ ಸಾಹಿತ್ಯದ ಚಿಂತನೆಗಳ ಮೂಲಕ ಕ್ರೀಯಾಶೀಲತೆಯ ಬಿತ್ತುವ ಕಾರ್ಯವನ್ನು ದತ್ತಿಯ ಮೂಲಕ ಮಾಡುತ್ತಿದ್ದೇವೆ. ಭಾಷೆಯ ಬಗ್ಗೆ ಉದಾಸೀನ ಬೇಡ ಎಂದರು.
ಕುವೆಂಪು ಅವರ ವಿಚಾರ ಕ್ರಾಂತಿಗೆ ಆಹ್ವಾನ ಕುರಿತು ಸಹ್ಯಾದ್ರಿ ವಾಣಿಜ್ಯ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಪ್ರಕಾಶ್ ಮರ್ಗನಳ್ಳಿ ಮಾತನಾಡಿ, ಇಂದಿನ ತಲೆಮಾರು ಜನ ಸಮೂಹದ ಜೊತೆಗೆ ಸಂವಹನ ನಡೆಸಲು ನಿರಾಸಕ್ತರಾಗಿzರೆ. ಪರಂಪರೆಯ eನವಿಲ್ಲದೆ, ಕೇವಲ ವರ್ತಮಾನದಲ್ಲಿ ಬದುಕಲು ಸಾಧ್ಯವಿಲ್ಲ. ಕುವೆಂಪು ಅವರನ್ನು ಹೊಗಳುವ ಬದಲು, ಅವರು ಪ್ರತಿಪಾದಿಸಿದ ಸಂಗತಿಗಳನ್ನು ಅರ್ಥೈಸಿಕೊಳ್ಳ ಬೇಕು. ವಾಟ್ಸ್‌ಅಪ್ ವಿವಿಯ ಸಂಗತಿಗಳು ಸತ್ಯವಾಗಿ ಬದಲಾಗುತ್ತಿರುವ ಈ ಹೊತ್ತಿ ನಲ್ಲಿ, ಕುವೆಂಪು ಅವರ ವಿಚಾರಕ್ರಾಂತಿಗೆ ಆಹ್ವಾನ ಸದಾ ವಾಸ್ತವತೆಗೆ ಬಂದು ನಿಲ್ಲುತ್ತದೆ.
ಪರಕೀಯರಿಂದ ಮುಕ್ತಿ ಪಡೆಯುವುದು ಒಂದೇ ಭಾರತದ ಸ್ವಾತಂತ್ರ್ಯ ಚಳುವಳಿಯ ಆಶಯವಾಗಿರಲಿಲ್ಲ. ಬದಲಿಗೆ ಅತ್ಯುತ್ತಮ ಸಧೃಡ ಸಮಾಜ ನಿರ್ಮಾಣ ಮಾಡುವ ಕನಸು ಹೋರಾಟಗಾರರದಾಗಿತ್ತು. ಹಣ ಎಂದಿಗೂ ರಾಜಕೀಯ ವ್ಯವಸ್ಥೆಯನ್ನು ಆಳಬಾರದು ಎಂದು ಹೇಳುತ್ತಾ, ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ ಎಂದು ಯುವ ಸಮೂಹಕ್ಕೆ ಕರೆ ನೀಡಿದವರು ಕುವೆಂಪು ಎಂದು ಹೇಳಿದರು.
ಉಪನ್ಯಾಸಕಿ ಶ್ರೀಲಲಿತ ಅಧ್ಯಕ್ಷತೆ ವಹಿಸಿದ್ದರು. ಸಂತ ಶಿಶುನಾಳ ಶರೀಫರ ಗೀತೆಗಳನ್ನು ಗಾಯಕಿ ನಳಿನಾಕ್ಷಿ ಹಾಡಿದರು.