ರಾಷ್ಟ್ರೀಯ ಮೋಟಾರ್ ಸೈಕಲ್ ರ್ಯಾಲಿಗೆ ಅದ್ದೂರಿ ಸ್ವಾಗತ
ಶಿವಮೊಗ್ಗ : ಮಾದಕ ದ್ರವ್ಯಗಳ ದುರುಪಯೋಗವು ವ್ಯಕ್ತಿಯ ಆರೋಗ್ಯ, ಕುಟುಂಬ ಹಾಗೂ ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಯುವಜನತೆ ದೃಢ ಸಂಕಲ್ಪ ಮಾಡಬೇಕು. ಅಲ್ಲದೆ, ಮಾದಕ ವಸ್ತುಗಳ ಬಳಕೆ ಮತ್ತು ಮಾರಾಟ ತಡೆಗಟ್ಟುವಲ್ಲಿ ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಜಿ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಕರೆ ನೀಡಿದರು.

ರಾಷ್ಟ್ರೀಯ ಏಕತಾ ದಿನಾಚರಣೆ ಹಾಗೂ ಮಾದಕ ದ್ರವ್ಯಗಳ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ಕೆಎಸ್ಆರ್ಪಿ) ಪಡೆಯ ವತಿಯಿಂದ ಹಮ್ಮಿಕೊಂಡಿರುವ ಬೈಕ್ ರ್ಯಾಲಿ ಶುಕ್ರವಾರ ಶಿವಮೊಗ್ಗಕ್ಕೆ ಆಗಮಿಸಿತು. ಚಿತ್ರದುರ್ಗದಿಂದ ಹೊಳೆಹೊನ್ನೂರು ಮಾರ್ಗವಾಗಿ ನಗರಕ್ಕೆ ಆಗಮಿಸಿದ ರ್ಯಾಲಿ ತಂಡವನ್ನು ಗೋಪಿ ವೃತ್ತದಲ್ಲಿ ಸಾರ್ವಜನಿಕರು ಹಾಗೂ ಸಂಘಟಕರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಎಸ್ಪಿ, ಮಾದಕ ದ್ರವ್ಯಗಳ ವಿರುದ್ಧದ ಹೋರಾಟದಲ್ಲಿ ಯುವಜನರ ಪಾತ್ರ ಮಹತ್ವzಗಿದೆ ಎಂದರು.
ಜಿಯಲ್ಲಿ ಮಾದಕ ವಸ್ತುಗಳ ಸೇವನೆ ಮತ್ತು ಮಾರಾಟದ ವಿರುದ್ಧ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಈ ವರ್ಷ ಶಿವಮೊಗ್ಗ ಜಿಯಲ್ಲಿ ಸುಮಾರು ೫೫೦ ಪ್ರಕರಣಗಳನ್ನು ದಾಖಲಿಸ ಲಾಗಿದ್ದು, ಸುಮಾರು ೪೦ ಕೆ.ಜಿ. ಗಾಂಜಾ ಹಾಗೂ ಎಂಡಿಎಂಎ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಾದಕ ವಸ್ತುಗಳ ಮಾರಾಟದಲ್ಲಿ ತೊಡಗಿ ರುವವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಆರೋಪಿಗಳನ್ನು ಜೈಲಿಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.

ಕರ್ನಾಟಕವನ್ನು ನಶಾಮುಕ್ತ ರಾಜ್ಯವನ್ನಾಗಿಸುವ ಉದ್ದೇಶದಿಂದ ಸರ್ಕಾರ ಹಾಗೂ ಪೊಲೀಸ್ ಇಲಾಖೆ ವತಿಯಿಂದ ಬೇಡ ಬ್ರೋ, ನಶಾಮುಕ್ತ ಕರ್ನಾಟಕ ಮತ್ತು ಆಪರೇಷನ್ ರೈಸ್ ಸೇರಿದಂತೆ ವಿವಿಧ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗಿದೆ. ಮಾದಕ ವಸ್ತುಗಳ ಸೇವನೆ ಹಾಗೂ ಮಾರಾಟವನ್ನು ತಡೆಗಟ್ಟಲು ಸಾರ್ವಜನಿಕರ ಸಹಕಾರ ಅಗತ್ಯ ಎಂದು ಹೇಳಿದರು.ಱಱಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಆಚರಿಸಲಾ ಗುವ ರಾಷ್ಟ್ರೀಯ ಏಕತಾ ದಿನದ ಹಿನ್ನೆಲೆಯಲ್ಲಿ ಕೆಎಸ್ಆರ್ಪಿ ಪಡೆ ಈ ಬೈಕ್ ರ್ಯಾಲಿ ಆಯೋಜಿಸಿದೆ. ಬೆಂಗಳೂರಿನಿಂದ ಆರಂಭವಾದ ರ್ಯಾಲಿ ಚಿತ್ರದುರ್ಗ, ಶಿವಮೊಗ್ಗ, ಸಾಗರ, ಗೋಕರ್ಣ, ಗೋವಾ, ಮುಂಬೈ ಮೂಲಕ ಗುಜರಾತ್ನ ಕೇವಡಿಯಾವರೆಗೆ ಸಾಗಲಿದ್ದು, ಅಲ್ಲಿ ಅಭಿಯಾನ ಮುಕ್ತಾಯ ಗೊಳ್ಳಲಿದೆ.
ಗೋಪಿ ವೃತ್ತದ ಸಮೀಪದ ಏಕತಾ ಗೋಡೆಯ ಬಳಿ ಎಸ್ಪಿ ನಿಖಿಲ್ ಅವರು ಬೈಕ್ ಸವಾರರು, ವಿದ್ಯಾರ್ಥಿಗಳು ಹಾಗೂ ಗಣ್ಯರಿಗೆ ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣದ ಪ್ರತಿeವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ಯುವಕರು ಹಾಗೂ ಅಧಿಕಾರಿ ಗಳು ಏಕತಾ ಗೋಡೆಯ ಮೇಲೆ ಜಾಗೃತಿ ಸಂದೇಶಗಳನ್ನು ಬರೆದರು.

ನಂತರ ಸ್ಥಳೀಯ ಬೈಕ್ ಸವಾರರೊಂದಿಗೆ ಆರಂಭವಾದ ರ್ಯಾಲಿ ನಗರದ ಪ್ರಮುಖ ವೃತ್ತಗಳು ಮತ್ತು ರಸ್ತೆಗಳಲ್ಲಿ ಸಂಚರಿಸಿ ಅಶೋಕ ಸರ್ಕಲ್ನ ಆಡಿಟೋರಿಯಂನಲ್ಲಿ ಮುಕ್ತಾಯ ಗೊಂಡಿತು. ರ್ಯಾಲಿಯಲ್ಲಿ ಪಾಲ್ಗೊಂಡ ಸವಾರರು ಹೆಲ್ಮೆಟ್ ಧರಿಸಿ, ಸಂಚಾರ ನಿಯಮಗಳನ್ನು ಪಾಲಿಸುವ ಮೂಲಕ ರಸ್ತೆ ಸುರಕ್ಷತೆಯ ಸಂದೇಶವನ್ನೂ ಸಾರಿದರು.
ಕೆಎಸ್ಆರ್ಪಿ ಕಮಾಂಡೆಂಟ್ ಯುವಕುಮಾರ್ ಸೇರಿದಂತೆ ಹಿರಿಯ-ಕಿರಿಯ ಪೊಲೀಸ್ ಅಧಿಕಾರಿಗಳು, ಯುವಕರು ಹಾಗೂ ಸಾರ್ವಜನಿಕರು ಅಭಿಯಾನದಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದರು.

