ಆರೋಗ್ಯಕರ ಜೀವನಶೈಲಿ ಸಮಾಜದ ಭವಿಷ್ಯಕ್ಕೆ ಅಡಿಪಾಯ: ವಿನುತ
ತೀರ್ಥಹಳ್ಳಿ: ಬಾಲ್ಯದಲ್ಲಿಯೇ ಆರೋಗ್ಯಕರ ಅಭ್ಯಾಸಗಳನ್ನು ರೂಢಿಸಿಕೊಳ್ಳುವುದು ಅತ್ಯಂತ ಅಗತ್ಯ ಎಂದು ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿ ತೀರ್ಥಹಳ್ಳಿಯ ಆಪ್ತ ಸಮಾಲೋಚಕರಾದ ಶ್ರೀಮತಿ ವಿನುತ ಮುರಳೀಧರ ತಿಳಿಸಿದರು.
ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್ ಹಾಗೂ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿ ತೀರ್ಥಹಳ್ಳಿ ಇವರ ಆಶ್ರಯದಲ್ಲಿ ಅರಳಸುರಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ವಿಶೇಷ ಆರೋಗ್ಯ ಜಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ವೈಯಕ್ತಿಕ ಸ್ವಚ್ಛತೆ, ಸರಿಯಾದ ರೀತಿಯಲ್ಲಿ ಹಲ್ಲು ತೊಳೆಯುವುದು, ಪ್ರತಿದಿನ ಸರಳ ವ್ಯಾಯಾಮ ಮಾಡುವುದು, ಪೌಷ್ಟಿಕ ಆಹಾರ ಸೇವಿ ಸುವುದು ಹಾಗೂ ಜೀವನದಲ್ಲಿ ಉಪಯುಕ್ತವಾಗುವ ಕೌಶಲ್ಯಗಳನ್ನು ಅಳವಡಿಸಿಕೊಳ್ಳುವುದರಿಂದ ಮಕ್ಕಳು ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಬಾಲ್ಯದಿಂದಲೇ ಉತ್ತಮ ಆರೋಗ್ಯ ಅಭ್ಯಾಸಗಳನ್ನು ಬೆಳೆಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಿಸುವುದೇ ಈ ಕಾರ್ಯಕ್ರಮದ ಪ್ರಮುಖ ಉzಶವಾಗಿದೆ ಎಂದು ತಿಳಿಸಿದರಲ್ಲದೇ, ಮಕ್ಕಳಿಗೆ ಆರೋಗ್ಯದ ಮಹತ್ವವನ್ನು ಆಟ, ಹಾಡು ಹಾಗೂ ವಿವಿಧ ಮನರಂಜನಾ ಚಟುವಟಿಕೆಗಳ ಮೂಲಕ ಸುಲಭವಾಗಿ ಅರ್ಥವಾಗುವ ರೀತಿಯಲ್ಲಿ ವಿವರಿಸಿದರು.
ಆಸ್ಪತ್ರೆಯ ಸಿಬ್ಬಂದಿಗಳು ಸಣ್ಣ ಪ್ರಹಸನದ ಮೂಲಕ ಮಕ್ಕಳಲ್ಲಿ ಆರೋಗ್ಯದ ಅರಿವು ಮೂಡಿಸುವಲ್ಲಿ ಸಹಕರಿಸಿದರು. ಇದೇ ಸಂದರ್ಭದಲ್ಲಿ ಆರೋಗ್ಯಕರ ಜೀವನಶೈಲಿಯನ್ನು ಪ್ರೋತ್ಸಾಹಿಸುವ ಉzಶದಿಂದ ವಿದ್ಯಾರ್ಥಿಗಳಿಗೆ ಹಣ್ಣನ್ನು ವಿತರಿಸಲಾಯಿತು. ಆರೋಗ್ಯದ ಬಗ್ಗೆ ಜಗೃತಿ ಮೂಡಿಸಿರುವವರನ್ನು ಗುರುತಿಸಿ ಮಕ್ಕಳಿಗೆ ಆರೋಗ್ಯ ನಾಯಕ ಪ್ರಮಾಣಪತ್ರ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಅರುಣ್, ಎಸ್ಡಿಎಂಸಿ ಅಧ್ಯಕ್ಷ ಶ್ರೀಕಾಂತ್, ಶಾಲೆಯ ಎ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಎಂಐಓ ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

