ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ನೂತನ ಜಿಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರಿಗೆ ಜೆಡಿಎಸ್‌ನಿಂದ ಆತ್ಮೀಯ ಸ್ವಾಗತ…

Share Below Link

ಶಿವಮೊಗ್ಗ : ಶಿವಮೊಗ್ಗ ಜಿಯ ನೂತನ ಜಿಧಿಕಾರಿಗಳಾಗಿ ಅಧಿಕಾರ ಸ್ವೀಕರಿಸಿದ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ಇಂದು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕರಾದ ಶ್ರೀಮತಿ ಶಾರದಾ ಪೂರ್ಯನಾಯ್ಕ ಅವರ ನೇತೃತ್ವದಲ್ಲಿ ಜೆಡಿಎಸ್ ಪ್ರಮುಖರು ಆತ್ಮೀಯವಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕಿ ಶ್ರೀಮತಿ ಶಾರದಾ ಪೂರ್ಯನಾಯ್ಕ ಅವರು, ಶಿವಮೊಗ್ಗ ಜಿ ವೈವಿಧ್ಯಮಯ ಸವಾಲುಗಳು ಮತ್ತು ಅಪಾರ ಅಭಿವೃದ್ಧಿ ಸಾಧ್ಯತೆಗಳನ್ನು ಹೊಂದಿರುವ ಜಿಯಾಗಿದ್ದು, ನೂತನ ಜಿಧಿಕಾರಿಗಳ ಆಡಳಿತ ಅನುಭವ ಹಾಗೂ ಕಾರ್ಯಕ್ಷಮತೆಯಿಂದ ಜಿಯ ಸಮಗ್ರ ಅಭಿವೃದ್ಧಿಗೆ ಹೊಸ ಚೈತನ್ಯ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಜನಪರ, ಪಾರದರ್ಶಕ ಹಾಗೂ ಸ್ಪಂದನಶೀಲ ಆಡಳಿತವನ್ನು ಜಿಗೆ ನೀಡುವಲ್ಲಿ ಜಿಧಿಕಾರಿಗಳು ಯಶಸ್ವಿಯಾಗಲಿ ಎಂದು ಹಾರೈಸಿದ ಶಾಸಕರು ಮುಂದಿನ ದಿನಗಳಲ್ಲಿ ಜಿಲ್ಲೆಯ ಜನಸಾಮಾನ್ಯರ ಸಮಸ್ಯೆಗಳನ್ನು ಹೊತ್ತು ತರುವ ಜೆಡಿಎಸ್ ಮುಖಂಡರನ್ನು ಸ್ಪಂದಿಸುವ ಮೂಲಕ ನೊಂದವರಿಗೆ ಸೂಕ್ತ ಪರಿಹಾರ ದೊರಕಿಸಿಕೊಂಡುವಂತೆ ಸೂಚಿಸಿದರು.
ಜಿ ಜೆಡಿಎಸ್ ಕಾರ್ಯಾಧ್ಯಕ್ಷ ದಾದಾಪೀರ್ ಅವರು ಮಾತನಾಡಿ, ಜಿಯ ರೈತರು, ಕಾರ್ಮಿಕರು, ಯುವಜನರು ಹಾಗೂ ಮಹಿಳೆಯರ ಸಮಸ್ಯೆಗಳಿಗೆ ಆದ್ಯತೆ ನೀಡಿ, ಸರ್ಕಾರದ ಯೋಜನೆಗಳು ತಳಮಟ್ಟದ ಜನರಿಗೆ ತಲುಪುವಂತೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸ ಬೇಕೆಂದು ಆಶಯ ವ್ಯಕ್ತಪಡಿಸಿದರಲ್ಲದೇ, ಆಡಳಿತ ಹಾಗೂ ಜನಪ್ರತಿನಿಧಿಗಳ ನಡುವೆ ಉತ್ತಮ ಸಮನ್ವಯದಿಂದ ಶಿವಮೊಗ್ಗ ಜಿ ಮತ್ತಷ್ಟು ಪ್ರಗತಿಪಥದಲ್ಲಿ ಸಾಗಲಿದೆ ಎಂದು ಹಾರೈಸಿದರು.
ಈ ವೇಳೆ ಮಾತನಾಡಿದ ನೂತನ ಜಿಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು , ಜಿಯ ಸಮಗ್ರ ಅಭಿವೃದ್ಧಿ, ಸಾರ್ವಜನಿಕ ಸೇವೆಗಳ ಸುಧಾರಣೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಎಲ್ಲರ ಸಹಕಾರದೊಂದಿಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದಾಗಿ ಭರವಸೆ ನೀಡಿದರು.
ಈ ಸ್ವಾಗತ ಸಮಾರಂಭದಲ್ಲಿ ಜೆಡಿಎಸ್ ರಾಜ್ಯ ಕಾರ್ಯದರ್ಶಿ ರಾಕೇಶ್ ಡಿಸೋಜಾ, ಖ್ಯಾತ ಉದ್ಯಮಿಗಳೂ ಆದ ಜೆಡಿಎಸ್‌ನ ಹಿರಿಯ ಮುಖಂಡ ಎಸ್.ಎಂ. ತಿಪ್ಪೇಸ್ವಾಮಿ, ಜೆಡಿಎಸ್ ಜಿ ಕಾರ್ಯಾಧ್ಯಕ್ಷ ರಾಮಕೃಷ್ಣ, ಜೆಡಿಎಸ್ ಯುವ ಘಟಕದ ಜಿ ಕಾರ್ಯಾಧ್ಯಕ್ಷ ನಿಖಿಲ್, ತಾಲೂಕು ಅಧ್ಯಕ್ಷ ಕಸಟಿ ಸತೀಶ್, ನಾಗೇಶ್, ಸತೀಶ್, ಕುಮಾರನಾಯ್ಕ ಸೇರಿದಂತೆ ಶಿವಮೊಗ್ಗ ನಗರ ಹಾಗೂ ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಪ್ರಮುಖ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.