ಡಾ.ಅಂಬೇಡ್ಕರ್ ಕುರಿತು ಇವರು ನನ್ನ ಮಂತ್ರಿಮಂಡಲದ ವಜ್ರ ಎಂದಿದ್ದ ಪ್ರಧಾನಿ ಜವಹರಲಾಲ್ ನೆಹರು…
ಇಂದು ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನ. ಇವರು ಸಾಮಾಜಿಕ ಸಮಾನತೆ, ಅಸ್ಪಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಬ್ಬರು. ಭಾರತದ ಸಂವಿಧಾನವನ್ನು ರಚಿಸಿದ ಇವರನ್ನು ಸಂವಿಧಾನ ಶಿಲ್ಪಿ ಎಂದು ಕರೆಯುತ್ತಾರೆ. ಡಾ. ಬಿ. ಆರ್. ಅಂಬೇಡ್ಕರ್ ಅವರು ೧೪ನೇ ಏಪ್ರಿಲ್ ೧೮೯೧ರಂದು ಮಧ್ಯಪ್ರದೇಶದ ಮಾಹೋ ಎಂಬ ಮಿಲಿಟರಿ ಕ್ಯಾಂಪ್‌ನಲ್ಲಿ ಜನಿಸಿದರು.
ಅಂಬೇಡ್ಕರ್ ಅವರು ಮೂಲತಃ ಮಹಾರಾಷ್ಟ್ರದ ರತ್ನಗಿರಿ ಜಿಯ ಖೇಡಾ ತಾಲ್ಲೂಕಿನ ಅಂಬೆವಾಡ ಗ್ರಾಮದವರು. ಇವರು ಮಹಾರ ಜಾತಿಯಲ್ಲಿ ಹುಟ್ಟಿದರು. ಈ ಜಾತಿಯವರು ಹೆಚ್ಚಿನ ಜನ ಬ್ರಿಟಿಷ್ ಸರ್ಕಾರದ ಮಿಲಿಟರಿ ಸೇವೆಯಲ್ಲಿ ಉದ್ಯೋಗಕ್ಕಾಗಿ ಸೇರುತ್ತಿದ್ದರು. ಇವರ ಅಜ್ಜ ಮಾಲೋಜಿ ಸಕ್ಪಾಲ್ ಅವರು ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ಬಾಂಬೆ ಸೇನೆಯಲ್ಲಿ ಸೇರಿ, ಹವಾಲ್ದಾರರಾಗಿ ನಿವೃತ್ತಿ ಹೊಂದಿದ್ದರು. ಇವರು ಆ ಕಾಲಕ್ಕೆ ೧೯ ಮೆಡಲ್‌ಗಳನ್ನು ಗಳಿಸಿದ್ದರು. ಇವರಿಗೆ ಇಬ್ಬರು ಮಕ್ಕಳು ರಾಮಜಿ ಸಕ್ಪಾಲ್, ಮೀರಾ ಸಕ್ಪಾಲ್. ರಾಮಜಿ ಸಕ್ಪಾಲ್ ಅವರ ಹೆಂಡತಿ ಭೀಮಬಾಯಿ. ರಾಮಜಿ ಮತ್ತು ಭೀಮಬಾಯಿ ರವರು ಇಬ್ಬರು ಕಷ್ಟ ಸಹಿಷ್ಣುಗಳಾದ ಸತಿಪತಿಗಳಾಗಿದ್ದರು. ಇವರಿಗೆ ೧೪ ಮಕ್ಕಳು ಹುಟ್ಟಿದರು. ಈ ೧೪ನೇ ಮಗುವೇ ಅಂಬೇಡ್ಕರ್.
ಅಂಬೇಡ್ಕರ್ ಅವರ ಮೊದಲ ಹೆಸರು ಭೀಮರಾವ್ ಆಗಿತ್ತು. ಡಾ.ಅಂಬೇಡ್ಕರರು ನಾನು ನನ್ನ ತಂದೆ ತಾಯಿಯರಿಗೆ ೧೪ನೇ ರತ್ನನಾಗಿದ್ದೇನೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದರು. ಶಾಲೆಗೆ ಸೇರುವ ಸಂಧರ್ಭದಲ್ಲಿಯೇ ಇವರಿಗೆ ಅಸ್ಪಶ್ಯತೆಯ ಅನುಭವವಾಗುತ್ತದೆ. ಆದರೂ ಎಲ್ಲವನ್ನು ಮೆಟ್ಟಿನಿಂತು, ಅವಮಾನಗಳನ್ನು ಎದುರಿಸುತ್ತಾ ಶಿಕ್ಷಣವನ್ನು ಪಡೆಯುವದನ್ನು ಮುಂದುವರೆಸುತ್ತಾರೆ. ಹೀಗೆ ಅತೀ ಹೆಚ್ಚು ಓದಿದ ವಿಶ್ವದ ಮಹಾನಾಯಕ ಎಂಬ ಕೀರ್ತಿಯನ್ನೂ ಸಹ ಇವರು ಪಡೆದುಕೊಳ್ಳುತ್ತಾರೆ.
ಸ್ವತಂತ್ರ ನಂತರ:
೧೯೪೭ರಲ್ಲಿ ಕಾನೂನು ಮಂತ್ರಿಯಾಗಿ ಪಂಡಿತ ಜವಹಾರಲಾಲ್ ನೆಹರೂ ಅವರ ಮಂತ್ರಿ ಮಂಡಲದಲ್ಲಿ ಇವರು ಪ್ರಧಾನಮಂತ್ರಿಗೆ ಆತ್ಮೀಯರಾಗುತ್ತಾರೆ. ನೆಹರೂ ಕಲ್ಪಿಸಿದ ಸಮಾಜವಾದಿ ಪ್ರಜಸತ್ತಾತ್ಮಕ ರಾಜ್ಯವ್ಯವಸ್ಥೆ ಡಾ.ಅಂಬೇಡ್ಕರ್ ಅವರಿಂದಲೇ ಪ್ರಭಾವಿತರಾಗಿದ್ದರು. ನೆಹರೂರವರು ಹಾಕಿಕೊಂಡ ಪಂಚ ವಾರ್ಷಿಕ ಯೋಜನೆಗೆ ಅಂಬೇಡ್ಕರರವರು ಮಾರ್ಗದರ್ಶಿಗಳಾಗಿದ್ದರು. ಮತ್ತು ಭಾಕ್ರಾನಂಗಲ್ ಅಣೆಕಟ್ಟು ಕಟ್ಟಲು ಸಲಹೆ ನೀಡಿದವರೆ ಅಂಬೇಡ್ಕರರವರು. ಇವರು ಭಾರತದ ನೀರಾವರಿ ಯೋಜನೆಯ ಜನಕನಾಗಿದ್ದು, ಉತ್ತರ ಭಾರತ ಮತ್ತು ದಕ್ಷಿಣ ಭಾರತ ನದಿಗಳ ಜೋಡಣೆಗೆ ೧೯೫೨ರಲ್ಲಿಯೇ ಸಲಹೆ ನೀಡಿದರು.
ನೆಹರೂರವರು ವಿದೇಶಿ ಗಣ್ಯರಿಗೆ ಇವರನ್ನು ಪರಿಚಯಿಸುವಾಗ ಇವರು ಡಾ.ಅಂಬೇಡ್ಕರ್, ನನ್ನ ಮಂತ್ರಿ ಮಂಡಲದ ವಜ್ರವಾಗಿzರೆ ಎಂದು ಪರಿಚಯಿಸುತ್ತಿದ್ದರು.
ಮಹಿಳಾ ಹಿಂದೂ ಕೋಡ್-ಬಿಲ್:
ಪಾರ್ಲಿಮೆಂಟನ ಸಭೆಯಲ್ಲಿ ಮಹಿಳೆಗೆ ಹಿಂದೂ ಕೋಡ್- ಬಿಲ್‌ನಲ್ಲಿ ಕೇಳಲಾದ ಹಕ್ಕುಗಳನ್ನು ನಿರಾಕರಿಸಿತು. ಹಿಂದೂ ಕೋಡ್ -ಬಿಲ್‌ನಲ್ಲಿ ಪ್ರಮುಖ ನಾಲ್ಕು ಅಂಶಗಳು ಇದ್ದವು.
ಅವುಗಳೆಂದರೆ;
೧) ಮಹಿಳೆಯು ಕೂಡ ತನ್ನ ಪತಿಯನ್ನು ಆಯ್ಕೆ ಮಾಡುವ ಹಕ್ಕು.
೨) ಪುರುಷರ ಹಾಗೆ ವಿಚ್ಚೇಧಿಸುವ ಹಕ್ಕು.
೩) ತಂದೆಯ ಆಸ್ತಿಯಲ್ಲಿ ಗಂಡು ಮಕ್ಕಳ ಸಮನಾಗಿ ಹೆಣ್ಣುಮಗಳಿಗೂ ಆಸ್ತಿ ಹಕ್ಕು.
೪)ಪಿತ್ರಾರ್ಜಿತ ಆಸ್ತಿಯಲ್ಲಿ ಗಂಡು ಮಕ್ಕಳ ಜೊತೆಯಲ್ಲಿ ಹೆಣ್ಣುಮಕ್ಕಳಿಗೂ ಮತ್ತು ವಿಧವೆ ಸೊಸೆಗೂ ಸಮ ಪಾಲು ಹಕ್ಕು.
ಕೊನೆಗೆ ಹಿಂದೂ ಕೋಡ್ ಬಿಲ್ ಪಾಸಾಗದ ಕಾರಣ ಅಂಬೇಡ್ಕರರವರು ಕಾನೂನು ಮ್ಯಾಟ್ರಿ ಪದವಿಗೆ ರಾಜೀನಾಮೆ ನೀಡಿದರು.
ಬೌದ್ಧ ಧರ್ಮ ಸ್ವೀಕಾರ:
೧೯೫೧ರಲ್ಲಿ ಜಗತಿಕ ಬೌದ್ಧ ಸಮ್ಮೇಳನ ರಂಗುನದಲ್ಲಿ ನಡೆಯಿತು. ಅದರಲ್ಲಿ ಭಾಗವಹಿಸಿದರು.
೧೯೫೪ರಲ್ಲಿ ಕಟ್ಮೊಂಡಾದಲ್ಲಿ ನಡೆದ ಜಗತಿಕ ಬೌದ್ಧ ಸಮ್ಮೇಳನದಲ್ಲಿ ಭಾಗವಹಿಸಿದರು.
೧೯೫೧ರಲ್ಲಿ ಭಾರತೀಯ ಬೌದ್ಧ ಸಂಘಟನೆಯಲ್ಲಿ ಬುದ್ಧ ಮತ್ತು ಮಾರ್ಕ್ಸ್ ಕುರಿತು ಪ್ರಬಂಧ ಮಂಡಿಸಿದರು.
೧೯೫೫ರಲ್ಲಿ ಭಾರತೀಯ ಬೌದ್ಧ ಮಹಾಸಭೆ ಸ್ಥಾಪಿಸಿದರು. ಬದುಕಿನ ಕೊನೆಯ ದಿನಗಳಲ್ಲಿ ಡಾ.ಅಂಬೇಡ್ಕರರು ಬೌದ್ಧ ಧರ್ಮ ಸ್ವೀಕಾರದ ನಿರ್ಧಾರ ಮಾಡಿ ಅಕ್ಟೊಬರ್ ೧೪, ೧೯೫೬ರಲ್ಲಿ ತನ್ನ ೫ ಲಕ್ಷ ಅನುಯಾಯಿಗಳೊಂದಿಗೆ ಪತ್ನಿ ಸವಿತಾ ಅಂಬೇಡ್ಕರ್ ಜೊತೆಗೆ ನಾಗ ಜನತೆಯ ಮೂಲ ನಾಡಾದ ನಾಗಪುರದಲ್ಲಿ ಬೌದ್ಧ ಧರ್ಮ ಸ್ವೀಕಾರಮಾಡಿದರು. ಇವರಿಗೆ ಬರ್ಮಾದ ಬೌದ್ಧ ಬಂತೆ, ವೀರ ಚಂದ್ರಮಣಿ ಬೌದ್ಧಧೀಕ್ಷೆ ನೀಡಿದರು.
ಮುಂದೆ ಡಿಸೆಂಬರ್ ೬, ೧೯೫೬ ರಲ್ಲಿ ದೆಹಲಿಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ಡಿಸೆಂಬರ್ ೭ಕ್ಕೆ ಮುಂಬಯಿಯ ದಾದರಿನಲ್ಲಿ ಬೌದ್ಧ ಧರ್ಮದ ನಿಯಮದ ಪ್ರಕಾರ ಮಹಾಪರಿನಿರ್ವಾಣದ ವಿಧಿಯನ್ನು ಅಂತ್ಯಕ್ರಿಯೆಯಲ್ಲಿ ಮಾಡಲಾಯಿತು.
ಗೌರವಗಳು:
೧೯೫೦ರಲ್ಲಿ ಅಮೆರಿಕಾದ ಕೊಲಂಬಿಯಾ ವಿಶ್ವವಿದ್ಯಾಲಯ ಭಾರತ ಸಂವಿಧಾನ ರಚಿಸಿದ್ದಕ್ಕಾಗಿ ಇವರನ್ನು ಸಂವಿಧಾನ ಶಿಲ್ಪಿ , ಆಧುನಿಕ ಭಾರತದ ನಿರ್ಮಾಪಕ, ಸಮಾಜದ ಪ್ರವರ್ತಕ ಎಂದು ಪರಿಗಣಿಸಿ ಡಾಕ್ಟರ್ ಆಫ್ ಲಾ ಪದವಿ ನೀಡಿತು, ೧೯೫೩ರಲ್ಲಿ ಆಂಧ್ರಪ್ರದೇಹದ ಉಸ್ಮಾನಿಯ ವಿಶ್ವವಿದ್ಯಾಲಯ ಸಂವಿಧಾನದ ಸೇವೆಯನ್ನು ಪರಿಗಣಿಸಿ ಡಾಕ್ಟರ್ ಆಫ್ ಲಿಟರೇಚರ ಎಂಬ ಗೌರವ ಪದವಿಯನ್ನು ನೀಡಿತು. ೧೯೫೧ರಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದರು ಸಕ್ರಿಯ ರಾಜಕೀಯದಿಂದ ದೂರ ಉಳಿದರು.
ಡಾ.ಬಿ.ಆರ್ ಅಂಬೇಡ್ಕರವರ ನುಡಿಮುತ್ತುಗಳು:
೧) ಮನುಷ್ಯರು ಸಾವಿಗೆ ಈಡಾಗುವವರು. ಚಿಂತನೆಗಳೂ ಹಾಗೆಯೇ. ಸಸಿಗಳಿಗೆ ನೀರು ಎರೆಯುವಂತೆ ಚಿಂತನೆಗಳಿಗೂ ಬೆಳೆಯಲು ಪೋಷಣೆ ಬೇಕು.
೨) ಸಂಪೂರ್ಣ ಸಮಾನತೆ ಎಂಬುದು ಕಲ್ಪನೆಯೇ ಇರಬಹುದು. ಆದರೆ ಅದನ್ನು ಆಡಳಿತ ತತ್ವವಾಗಿ ನಾವು ಅಂಗೀಕರಿಸಲೇಬೇಕು.
೩) ಎಲ್ಲರೂ ಮೊತ್ತಮೊದಲಿಗೆ ಭಾರತೀಯ ರಾಗಿರಬೇಕು, ಕೊನೆಗೂ ಭಾರತೀಯರಾಗಿರಬೇಕು, ಭಾರತೀಯರಲ್ಲದೆ ಇನ್ನೇನೂ ಆಗಿರಬೇಕಿಲ್ಲ.
೪) ವಿeನದ ಕ್ಷೇತ್ರದಲ್ಲಿ ಭಾವನೆಗಳನ್ನು ದೂರವಿಡಬೇಕು. ಅಲ್ಲಿ ವಸ್ತುನಿಷ್ಠ ನೆಲೆಯಿಂದ ಸಂಗತಿಗಳನ್ನು ಪರಾಮರ್ಶಿಸಬೇಕು.
೫) ಸಾಮಾಜಿಕ ಸ್ವಾತಂತ್ರ್ಯವನ್ನು ಪಡೆಯದೇ ಹೋದರೆ, ನಾವು ಕಾನೂನಾತ್ಮಕವಾಗಿ ಎಂಥ ಸ್ವಾತಂತ್ರ್ಯವನ್ನು ಪಡೆದರೂ ಉಪಯೋಗವಿಲ್ಲ.
ಪ್ರಜಪ್ರಭುತ್ವದ ಕಲ್ಪನೆ:
ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರಜಪ್ರಭುತ್ವದ ಕಲ್ಪನೆ ಹೇಗಿತ್ತು ಮತ್ತು ಅದರಿಂದ ಅವರು ಏನನ್ನು ನಿರೀಕ್ಷಿಸಿದ್ದರು ಅನ್ನುವುದರ ಬಗ್ಗೆ ಈ ಉಖವು ಬಹಳಷ್ಟು ತಿಳಿಸುತ್ತದೆ. ಕ್ರಾಂತಿಕಾರಕ ಬದಲಾವಣೆಗಳನ್ನು ಕೇವಲ ಕ್ರಾಂತಿಯ ಮೂಲಕವೇ ತರಬವು ಮತ್ತು ಕ್ರಾಂತಿ ಎಂದರೆ ರಕ್ತಪಾತ ಅನ್ನುವುದು ಸಾಮಾನ್ಯ ತಿಳಿವಳಿಕೆ. ಅಲ್ಲದೆ ಕ್ರಾಂತಿಗಳು ಮತ್ತು ಪ್ರಜಪ್ರಭುತ್ವಗಳು ಪರಸ್ಪರ ಹೊಂದಣಿಕೆಯಾಗಲಾರವು ಎಂಬ ಗುಪ್ತ ಗುಮಾನಿಯೊ ಇದೆ. ಕ್ರಾಂತಿಯ ಬಗ್ಗೆಯ ಈ ಸಾಮಾನ್ಯ ಭಾವನೆಗಳು ತಾತ್ವಿಕವಾಗಿ ತಪ್ಪು ಎಂದು ಎತ್ತಿ ತೋರಿಸಬಹುದು. ಆ ವಿಷಯ ಬೇರೆ ಹಾಗೆಯೇ, ಪ್ರಜಪ್ರಭುತ್ವದ ಬಗ್ಗೆಯೂ ಕೆಲವು ಸಾಮಾನ್ಯ ಭಾವನೆಗಳಿವೆ. ಕ್ರಮಬದ್ದ ಚುನಾವಣೆಗಳು, ಅನೇಕ ರಾಜಕೀಯ ಪಕ್ಷಗಳು ಮತ್ತು ಪ್ರತಿ ವ್ಯಕ್ತಿಗೂ ಸಮಾನ ರಾಜಕೀಯ ಮಲ್ಯವನ್ನು ನೀಡುವ ಒಂದು ಪ್ರಾತಿನಿಧಿಕ ಸರ್ಕಾರದ ರೂಪ ಅದು ಎಂದು ಪರಿಗಣಿಸಲ್ಪಟ್ಟಿದೆ. ಪ್ರಜಪ್ರಭುತ್ವದ ಎದ್ದು ಕಾಣುವ ಸ್ಥೂಲ ಸಂರಚನೆಯ ಮುಖ್ಯ ಶಿಲ್ಪಿ ಎಂದು ಡಾ.ಬಿ.ಆರ್. ಅಂಬೇಡ್ಕರ್ ಅವರು ಪರಿಗಣಿಸಲ್ಪಟ್ಟಿದ್ದರು.
ಅಂಬೇಡ್ಕರ ಅವರ ಪ್ರಜಪ್ರಭುತ್ವದ ಕಲ್ಪನೆ ತೀರ ವಿಭಿನ್ನ ಸಮಾಜವನ್ನು ಆದರ್ಶ ಸಮಾಜವನ್ನಾಗಿ ತಮ್ಮ ಕಲ್ಪನೆಯ ಸುಖಿರಾಜ್ಯವನ್ನಾಗಿ ಬದಲಾಯಿಸಿ, ಸ್ವಾತಂತ್ರ್ಯ, ಸಮಾನತೆ ಮತ್ತು ಭಾತೃತ್ವಗಳನ್ನು ಒಟ್ಟಿಗೆ ಸಾಧಿಸಬಲ್ಲದೆಂಬಂತೆ ಪ್ರಜಪ್ರಭುತ್ವವನ್ನು ಅವರು ಕಲ್ಪಿಸಿಕೊಂಡ್ಡಿದರು.
ಪ್ರಜಪ್ರಭುತ್ವವೆಂದರೆ ಸರ್ಕಾರದ ಒಂದು ರೂಪವೆಂದು ಅದು ಹುಟ್ಟಿದ ಪ್ರಾಚೀನತೆಯಿಂದ ಇಂದಿನ ಆಧುನಿಕತೆಯವರೆಗೂ ಕಲ್ಪಿಸಿಕೊಳ್ಳಲಾಗಿದೆ. ಆದರೆ ಪ್ರಜಪ್ರಭುತ್ವವು ಕೇವಲ ಸರ್ಕಾರದ ಒಂದು ರೂಪವಲ್ಲ. ಅದು ಪ್ರಮುಖವಾಗಿ ಸಹಬಾಳ್ವೆಯ ಸೊಗಸು ಮತ್ತು ಅನುಭವವನ್ನು ಪರಸ್ಪರ ದಟೈಸುವ ಒಂದು ಜೋಡಣಿ. ಮೂಲಭೂತವಾಗಿ ಅದು ಸಹವರ್ತಿಗಳೆಡೆಗೆ ತೋರುವ ಗೌರವಾದರ ಭಾವನೆ ಎಂದು ಹೇಳಿzರೆ. ಅವರ ದೃಷ್ಟಿಯಲ್ಲಿ ಪ್ರಜಪ್ರಭುತ್ವ ಪ್ರಜಸತ್ತಾತ್ಮಕ ಸಮಾಜವನ್ನು ನಿರೀಕ್ಷಿಸುತ್ತದೆ. ರಾಜಕಾರಣಿಗಳು ಪ್ರಜಪ್ರಭುತ್ವವು ಮೂಲಭೂತವಾಗಿ ಸಮಾಜದ ಒಂದು ಸ್ವರೂಪ ಕೇವಲ ಸರ್ಕಾರದ ಮಾದರಿ ಅಲ್ಲ ಅನ್ನುವುದನ್ನು ಗ್ರಹಿಸಲಿಲ್ಲ. ಇದು ಎರಡು ಅಂಶಗಳನ್ನು ಒಳಗೊಂಡಿದೆ. ಮೊದಲನೆಯದು ಒಂದು ಮನೋಭಾವ, ಸಹವರ್ತಿಗಳಿಗೆ ಗೌರವ ಮತ್ತು ಸಮಾನತೆ. ಎರಡನೆಯದು ಪೆಡಸಾದ ಸಾಮಾಜಿಕ ಅಡೆ- ತಡೆಗಳಿಂದ ಮುಕ್ತ ಸಮಾಜ. ಸಾಮಾಜಿಕ ಪ್ರಜಪ್ರಭುತ್ವ ಅನ್ನುವ ಪದ ಸಾಮಾನ್ಯವಾಗಿ ಆರ್ಥಿಕ ಸಂಸ್ಧೆಗಳು ಹಾಗೂ ಬಂಡವಾಳ ಕ್ರಮೇಣ ಸಮಾಜವಾದಕ್ಕೆ ಹೊರಳುತ್ತದೆಂಬ ಫೇಬಿಯನ್ ನಂಬಿಕೆಗಳನ್ನು ಒಳಗೊಂಡಿರುತ್ತದೆ. ಆದರೆ ಅಂಬೇಡ್ಕರ ಅವರ ಪ್ರಕಾರ ಅದು ಶ್ರೇಣೀಕೃತವಲ್ಲದ, ವಿಂಗಡಣೆ ಮತ್ತು ಪ್ರತ್ಯೇಕಗಳಿಲ್ಲದ ಸಮಾಜ. ಅದು ಭಾರತಿಯ ಸಮಾಜ ಮತ್ತು ಅದರ ಜತಿಗಳ ವ್ಯವಸ್ಥೆಗೆ ತೀಕ್ಷ್ಣವಾಗಿ ಅನ್ವಯಿಸುತ್ತದೆ. ಹೀಗೆ ಜಗತ್ತಿನ ಅತೀ ದೊಡ್ಡ ಸಂವಿಧಾನ ರಚಿಸಿ ಭಾರತವನ್ನು ಪ್ರಜ್ವಲಿಸುವಂತೆ ಮಾಡಿದ ಇವರಿಗೆ ಕೋಟಿ ಕೋಟಿ ನಮನ.