ರಸಪ್ರಶ್ನೆ ಸ್ಪರ್ಧೆಯಲ್ಲಿ ಆಚಾರ್ಯ ಕಾಲೇಜು ಪ್ರಥಮ
ಶಿವಮೊಗ್ಗ: ಶಿವಮೊಗ್ಗ ನಗರದ ರಾಷ್ಟ್ರೀಯ ಮಾದರಿ ಸಮೀಕ್ಷಾ ಕಛೇರಿ ಕನಾಟಕ (ದಕ್ಷಿಣ) ಇವರು ಎಜುರೈಟ್ ಕಾಲೇಜ್ ಆಫ್ ಮ್ಯಾನೇಜೆಮೆಂಟ್ ಶಿವಮೊಗ್ಗ ಇವರ ಸಹಭಾಗಿತ್ವದಲ್ಲಿ ಪಿ.ಯು.ಕಾಲೇಜು ವಿದ್ಯಾರ್ಥಿಗಳಿಗಾಗಿ ಮಾ. ೧೮ ರಂದು ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಿದ್ದರು. ರಾಷ್ಟ್ರೀಯ ಮಾದರಿ ಸಮೀಕ್ಷಾ ಕಛೇರಿಯ ಕರ್ನಾಟಕ (ದಕ್ಷಿಣ).ಬೆಂಗಳೂರು ಕಛೇರಿಯ ಮುಖ್ಯಸ್ಥರಾದ ಮನೋಹರ್ ಆರ್, ಕಾರ್ಯಕ್ರಮವನ್ನು ಉದ್ಘಾಟಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಭಿವೃದ್ಧಿ ಯೋಜನೆ ರೂಪಿಸುವಲ್ಲಿ ರಾಷ್ಟ್ರೀಯ ಮಾದರಿ ಸಮೀಕ್ಷಾ ಇಲಾಖೆಯ ಪಾತ್ರ ಅತ್ಯಂತ ಮಹತ್ತರವಾದುದು ಎಂದರು. ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿನ ಉದ್ಯೋಗವಕಾಶಗಳನ್ನು ಪಡೆದುಕೊಳ್ಳಬೇಕೆಂದರು.
ಸ್ಪರ್ಧೆಯಲ್ಲಿ ೮೨ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಆಚಾರ್ಯ ಪಿಯು ಕಾಲೇಜು ಪ್ರಥಮ, ವಿಕಾಸ ಕಾಲೇಜು ದ್ವಿತೀಯ ಮತ್ತು ತೃತೀಯ ಬಹುಮಾನ ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮಾದರಿ ಸಮೀಕ್ಷಾ ಕಚೇರಿ ಸಹಾಯಕ ನಿರ್ದೇಶಕ ಮಹಾದೇವಪ್ಪ ಉಪಸ್ಥಿತರಿದ್ದರು.