ಜಿಲ್ಲಾ ಸುದ್ದಿತಾಜಾ ಸುದ್ದಿ

ಶೀಘ್ರವೇ ಕೃಷಿ ಕಾರ್‍ಯಕ್ರಮಗಳ ಮಾರ್ಗಸೂಚಿ ಬಿಡುಗಡೆಗೆ ಕ್ರಮ:ಚೆಲುವರಾಯಸ್ವಾಮಿ

Share Below Link

ಶಿವಮೊಗ್ಗ :ಮುಂದಿನ ೧೫ ದಿನಗಳೊಳಗಾಗಿ ಕೃಷಿ ಇಲಾಖೆ ಯಿಂದ ಅನುಷ್ಠಾನಗೊಳ್ಳುವ ವಿವಿಧ ಯೋಜನೆಗಳ ಮಾರ್ಗ ಸೂಚಿಯನ್ನು ಬಿಡುಗಡೆಗೊಳಿಸ ಲಾಗುವುದು ಎಂದು ರಾಜ್ಯ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಅವರು ಹೇಳಿದರು.
ಅವರು ಇಂದು ಜಿಪಂ ಅಬ್ದುಲ್ ನಜೀರ್‌ಸಾಬ್ ಸಭಾಂ ಗಣದಲ್ಲಿ ಏರ್ಪಡಿಸಲಾಗಿದ್ದ ಶಿವ ಮೊಗ್ಗ, ಚಿಕ್ಕಮಗಳೂರು, ಚಿತ್ರ ದುರ್ಗ, ದಾವಣಗೆರೆ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಗಳಲ್ಲಿ ಅನುಷ್ಠಾನದಲ್ಲಿರುವ ಕೃಷಿ ಇಲಾ ಖೆ ಕಾರ್‍ಯಕ್ರಮಗಳ ಪ್ರಗತಿ ಪರಿಶೀ ಲನೆ ನಡೆಸಿ ಮಾತನಾಡುತ್ತಿದ್ದರು.
ಆಡಳಿತಾರೂಢ ಸರ್ಕಾರವು ರೈತರಿಗೆ ಪೂರಕವಾಗಿದ್ದು, ಈವರೆಗೆ ರಾಜ್ಯದ ಕೃಷಿಕರಿಗೆ ಶೇ.೦ ಬಡ್ಡಿದರದಲ್ಲಿ ನೀಡಲಾಗುತ್ತಿದ್ದ ಕೃಷಿ ಸಾಲವನ್ನು ೩ಲಕ್ಷಗಳ ಮಿತಿಯಿಂದ ೫ಲಕ್ಷಕ್ಕೆ ಏರಿಸುವ ಬಗ್ಗೆ ಚಿಂತನೆ ನಡೆಸಿದ್ದು, ಶೀಘ್ರದಲ್ಲಿ ಯೋಜನೆಯ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು. ಅರ್ಹರು ತಮ್ಮ ಬೆಳೆಗಳಿಗೆ ವಿಮೆ ಮಾಡಿಸಲು ಸೂಕ್ತ ಸಲಹೆ-ಸಹಕಾರ ನೀಡು ವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಸಾರ್ವಜನಿಕರಿಂದ ಯಾ ವುದೇ ದೂರುಗಳು ಬಾರದಂತೆ ಅಧಿಕಾರಿಗಳು ತಮ್ಮ ಜವಾಬ್ದಾರಿ ಯರಿತು ಕಾರ್ಯನಿರ್ವಹಿಸು ವಂತೆ ಸಲಹೆ ನೀಡಿದರು.
ಮುಂಗಾರು ಮಳೆಯಲ್ಲಿ ಕೊರತೆ ಕಂಡುಬಂದಿದೆ. ಪ್ರಸ್ತುತ ಹಿಂಗಾರು ಹಂಗಾಮಿನಲ್ಲಿ ಮಳೆ ಆಶಾದಾಯಕವಾಗಿದೆ. ಕೃಷಿ ಅಧಿಕಾರಿಗಳು ಕಾಲಕಾಲಕ್ಕೆ ಕೃಷಿ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲಿಸಬೇಕು. ಅಲ್ಲದೇ ಗ್ರಾಮೀಣ ಕ್ಷೇತ್ರ ಭೇಟಿಗೆ ತೆರಳಿ ದಾಗ ಅಲ್ಲಿನ ಕೃಷಿಕರ ಸಮಸ್ಯೆಗಳಿಗೆ ಕಿವಿಯಾಗಬೇಕು. ಅದಕ್ಕೆ ಪೂರಕ ವಾಗಿ ಸೂಕ್ತ ಹಾಗೂ ಸಕಾಲಿಕ ಮಾರ್ಗದರ್ಶನ ನೀಡಿ, ಸಮಸ್ಯೆ ಗಳ ಪರಿಹಾರಕ್ಕೆ ಕ್ರಮವಹಿಸ ಬೇಕೆಂದವರು ನುಡಿದರು.
ಗ್ರಾಮೀಣ ರೈತರಿಗೆ ಕೃಷಿ ಉಪಕರಣಗಳ ಲಭ್ಯತೆಯಲ್ಲಿ ಯಾವುದೇ ಕೊರತೆಯಾಗದಂತೆ ಗಮನಿಸಬೇಕು. ಈ ಬಗ್ಗೆ ಸಾರ್ವ ಜನಿಕ ವಲಯದಲ್ಲಿ ದೂರುಗಳು ಕೇಳಿ ಬರುತ್ತಿವೆ. ದೂರುಗಳು ಬಾರದಂತೆ ಹಾಗೂ ಸರಿಯಾಗಿ ಕೃಷಿ ಉಪಕರಣಗಳ ನಿರ್ವಹಣೆ ಮಾಡುವವರನ್ನು ನಿಯೋಜಿಸಲು ಕ್ರಮ ವಹಿಸುವಂತೆ ಸಚಿವರು ಸಲಹೆ ನೀಡಿದರು.
ಕಳೆದ ಸಾಲಿನಲ್ಲಿ ಅಡಿಕೆ ಬೆಳೆಗೆ ಕಂಡುಬಂದಿದ್ದ ಎಲೆಚುಕ್ಕೆ ರೋಗದ ನಿಯಂತ್ರಿಸುವ ಸಲುವಾಗಿ ಇತ್ತೀ ಚೆಗೆ ಬೆಂಗಳೂರಿನಲ್ಲಿ ಸಂಬಂಧಿತ ಇಲಾಖೆಯ ಅಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ಸುದೀರ್ಘ ವಾಗಿ ಸಮಾಲೋಚನೆ ನಡೆಸಿದ್ದು, ಅದರ ನಿಯಂತ್ರಣ ಕ್ರಮ ಕೈಗೊ ಳ್ಳಲು ಕೃಷಿ ವಿವಿ ವಿeನಿಗಳಿಗೆ ಸೂಚನೆ ನೀಡಲಾಗಿದೆ ಎಂದ ಅವರು ರಾಜ್ಯದಲ್ಲಿ ಪ್ರಸ್ತುತ ಮುಂಗಾರು ಸಂದರ್ಭದಲ್ಲಿ ೫ಕೋಟಿ ಸಸಿಗಳನ್ನು ನೆಟ್ಟು ಪರಿಸರ ಸಮತೋಲನ ಕಾಯ್ದುಕೊಳ್ಳಲು ಉದ್ದೇಶಿಸಲಾಗಿದೆ. ಇಲಾಖೆಯ ಅಧಿಕಾರಿಗಳು ರೈತರ ಹೊಲಗಳ ಬದುಗಳಲ್ಲಿ, ಲಭ್ಯವಿರುವ ಜಮೀ ನುಗಳಲ್ಲಿ ಹಾಗೂ ಶಾಲಾ, ಕಾಲೇ ಜು, ಗ್ರಾಪಂ. ಮತ್ತಿತರ ಸ್ಥಳಗಳಲ್ಲಿ ಸಸಿ ನೆಟ್ಟು ಪೋಷಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ರಾಜ್ಯದ ಯಾವುದೇ ಜಿಯಲ್ಲಿ ಕಳಪೆ ರಸಗೊಬ್ಬರ, ಬೀಜ ಹಾಗೂ ಔಷಧಗಳು ಮಾರಾಟವಾಗದಂತೆ ಎಚ್ಚರವಹಿ ಸಬೇಕು. ಅಂತಹ ಪ್ರಕರಣಗಳು ಪತ್ತೆಯಾದಲ್ಲಿ ಸಂಬಂಧಿತ ಅಧಿಕಾರಿಗಳನ್ನೇ ನೇರ ಹೊಣೆಗಾರ ರನ್ನಾಗಿ ಮಾಡಲಾಗುವುದು ಎಂದ ಅವರು, ಕೃಷಿ ಇಲಾಖೆಯ ಅಧಿಕಾರಿಗಳು ತಮ್ಮ ದೈನಂದಿನ ಕೆಲಸ-ಕಾರ್ಯಗಳ ಜೊತೆಗೆ ಇತರೆ ಕೃಷಿ ಸಂಬಂಧಿತ ಇಲಾಖಾ ಕಾರ್ಯ ಕ್ರಮಗಳ ಪ್ರಾಥಮಿಕ ಅರಿವು ಹೊಂದಿದ್ದು, ತಮ್ಮ ಕಾರ್ಯ ಕ್ಷೇತ್ರದಲ್ಲಿನ ಕೃಷಿಕರಿಗೆ ಸಕಾಲದಲ್ಲಿ ಮಾಹಿತಿ ನೀಡಲು ಸಿದ್ಧರಾಗಿರು ವಂತೆ ಅವರು ಸಲಹೆ ನೀಡಿದರು.
ಸಭೆಯಲ್ಲಿ ಕೃಷಿ ಇಲಾಖೆಯ ಆಯುಕ್ತ ವೈ.ಎಸ್.ಪಾಟೀಲ್, ಜಲಾನಯನ ಯೋಜನೆಯ ನಿರ್ದೇಶಕ ಬಿ.ವೈ.ಶ್ರೀನಿವಾಸ್, ಕೃಷಿ ಇಲಾಖೆಯ ನಿರ್ದೇಶಕ ಜಿ.ಟಿ.ಪುತ್ರ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ , ಸುಧಾಕರ್ ಲೋಖಂಡೆ ಸೇರಿದಂತೆ ೬ಜಿಗಳ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು, ಕೃಷಿ ಅಧಿಕಾರಿ-ಸಿಬ್ಬಂಧಿಗಳು ಮೊದಲಾದವರು ಉಪಸ್ಥಿತರಿ ದ್ದರು.