ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಗಿಡಗಳನ್ನು ನೆಡುವುದರ ಜೊತೆಯಲ್ಲಿ ಅವುಗಳ ಪೋಷಣೆ ಮುಖ್ಯವಾಗಿದೆ..

Share Below Link

ಹೊನ್ನಾಳಿ : ನಿಸರ್ಗದತ್ತವಾದ ಪರಿಸರ ಸಂರಕ್ಷಣೆ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ತರಗನಹಳ್ಳಿ ಗ್ರಾಪಂ ಅಧ್ಯಕ್ಷ ರಮೇಶ್ ಗೌಡ ಹೇಳಿದರು.
ತಾಲೂಕಿನ ತರಗನಹಳ್ಳಿ ಸಮೀಪದ ಕಿತ್ತೂರ್ ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ಗಿಡಗಳನ್ನು ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಗಿಡಗಳನ್ನು ನೆಡುವುದರ ಜೊತೆಯಲ್ಲಿ ಅವುಗಳನ್ನು ಪೋಷಣೆ ಮಾಡು ವುದು ಸಹ ಮುಖ್ಯವಾಗಿದೆ. ನಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೈಸರ್ಗಿಕ ಪರಿಸರದ ವಾತಾವರಣ ವಿದ್ದಲ್ಲಿ ಮನುಷ್ಯ ಆರೋಗ್ಯಕರ ವಾಗಿರಲು ಸಾಧ್ಯ ಎಂದರು.
ಪೋಷಕರು ಮತ್ತು ಶಿಕ್ಷಕರು ಮಕ್ಕಳಿಗೆ ಬಾಲ್ಯದಲ್ಲಿಯೇ ಪರಿಸರದ ಬಗ್ಗೆ ಕಾಳಜಿ ಮೂಡಿಸಬೇಕು. ಈ ನಿಟ್ಟಿನಲ್ಲಿ ಪ್ರತಿ ವರ್ಷವೂ ಸಹ ಶಾಲಾ ಆವರಣದಲ್ಲಿ ಅರ್ಥ ಪೂರ್ಣವಾಗಿ ಸಸಿ ನೆಡುವ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.
ಸಸಿಗಳನ್ನು ನೆಟ್ಟರೆ ಸಾಲದು ಅವುಗಳ ಪೋಷಣೆ ಅಗತ್ಯವಾ ಗಿದ್ದು, ಈ ನಿಟ್ಟಿನಲ್ಲಿ ಕಳೆದ ವರ್ಷ ನೆಟ್ಟ ಗಿಡಗಳನ್ನು ಸಂರಕ್ಷಣೆ ಮಾಡುವಲ್ಲಿ ಶಾಲಾ ಶಿಕ್ಷಕ ವರ್ಗ ಹಾಗೂ ವಿದ್ಯಾರ್ಥಿಗಳ ಶ್ರಮ ಶ್ಲಾಘನೀಯ ಎಂದು ತಿಳಿಸಿದರು.
ಶಾಲಾ ಶಿಕ್ಷಕ ವರ್ಗದವರು ಹಾಗೂ ವಿದ್ಯಾರ್ಥಿಗಳಿಂದ ಹಲವು ಜತಿಯ ಗಿಡಗಳನ್ನು ಶಾಲಾ ಆವರಣದಲ್ಲಿ ನೆಡಲಾಯಿತು.
ಮುಖ್ಯ ಶಿಕ್ಷಕ ಶಿವಕುಮಾರ್ ಹಾಗೂ ವಸತಿ ಶಾಲೆಯ ಶಿಕ್ಷಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *