ಜಿಲ್ಲಾ ಸುದ್ದಿತಾಜಾ ಸುದ್ದಿ

ಶಿಕ್ಷಣ ವ್ಯವಸ್ಥೆಯಲ್ಲಿ ಕೆಲ ಬದಲಾವಣೆಗಳ ಜೊತೆಗೆ ಜೊತೆಗೆ ಕ್ರೀಡೆಗೂ ಸಹ ಒತ್ತು ನೀಡಲಾಗುತ್ತಿದೆ: ಮಧು ಬಂಗಾರಪ್ಪ

Share Below Link

ಶಿವಮೊಗ್ಗ : ವಿದ್ಯಾರ್ಥಿಗಳ ಭವಿಷ್ಯದ ದೃಷ್ಠಿಯಿಂದ ಶಿಕ್ಷಣ ವ್ಯವಸ್ಥೆಯಲ್ಲಿ ಕೆಲ ಬದಲಾವಣೆ ಗಳನ್ನು ತರಲಾಗುತ್ತಿದ್ದು, ಜೊತೆಗೆ ಕ್ರೀಡೆಗೂ ಸಹ ಒತ್ತು ನೀಡಲಾಗು ತ್ತಿದೆ ಎಂದು ಶಿಕ್ಷಣ ಹಾಗೂ ಜಿ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು.
ತಾಲೂಕಿನ ಜಡೆ ಗ್ರಾಮದ ಶ್ರೀ ಸಿದ್ಧವೃಷಬೇಂದ್ರ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ, ತಾಪಂ, ಗ್ರಾಪಂ, ಶಾಲಾ ಶಿಕ್ಷಣ ಇಲಾಖೆ ಇಲಾಖೆ ಹಾಗೂ ಶ್ರೀ ವರದಾ ವಿದ್ಯಾಭಿವೃದ್ಧಿ ಸಮಿತಿಯ ಆಶ್ರಯದಲ್ಲಿ ಹಮ್ಮಿಕೊಂಡ ತಾಲೂಕು ಮಟ್ಟದ ೧೪ ವರ್ಷ ವಯೋಮಿತಿಯೊಳಗಿನ ಬಾಲಕ- ಬಾಲಕಿಯರ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬಡ ವಿದ್ಯಾರ್ಥಿಗಳು ಸಹ ಉತ್ತಮ ಶಿಕ್ಷಣ ಪಡೆಯಬೇಕು ಎಂಬುದು ಶಿಕ್ಷಣ ಇಲಾಖೆಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಮೊದಲ ಹಂತದಲ್ಲಿ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಒತ್ತು ನೀಡಲಾಗುತ್ತಿದೆ. ಗ್ರಾಮೀಣ ಭಾಗದ ಕ್ರೀಡಾಕೂಡ ಗಳು ಹೆಚ್ಚು ಮಹತ್ವವನ್ನು ಪಡೆಯುತ್ತಿವೆ. ಇದರಿಂದ ಗ್ರಾಮೀಣ ಭಾಗದ ಕ್ರೀಡಾಪಟು ಗಳನ್ನು ಗುರುತಿಸಲು ಸಹಕಾರಿಯಾಗಿದೆ. ಈ ನಿಟ್ಟಿನಲ್ಲಿ ಮಕ್ಕಳಿಗೆ ಶಿಕ್ಷಕರು ಹಾಗೂ ಪೋಷಕರು ಪ್ರೋತ್ಸಾಹ ನೀಡಬೇಕು. ಸರ್ಕಾರವು ಸಹ ಸಹಕಾರ ನೀಡಲಿದೆ ಎಂದರು.
ಶ್ರೀ ವರದಾ ವಿದ್ಯಾಭಿವೃದ್ಧಿ ಸಮಿತಿ ಅಧ್ಯಕ್ಷ ಹೊಳಿಯಪ್ಪ ಗೌಡ ಕಚವಿ ಕ್ರೀಡಾ ಧ್ವಜರೋಹಣ ನೆರವೇರಿಸಿದರು. ಡಿಡಿಪಿಐ ಪರಮೇಶ್ವರಪ್ಪ ಕ್ರೀಡಾಜ್ಯೋತಿ ಸ್ಥಾಪಿಸಿದರು. ಜಡೆ ಸಂಸ್ಥಾನ ಮಠದ ಶ್ರೀ ಡಾ. ಮಹಾಂತ ಸ್ವಾಮೀಜಿ ಹಾಗೂ ಶಾಂತಾಪುರ ಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಜಡೆ ಗ್ರಾಪಂ ಅಧ್ಯಕ್ಷ ಅಮಿತ್ ಗೌಡ ಅಧ್ಯಕ್ಷತೆ ವಹಿಸಿದ್ದರು. ತಹಶೀಲ್ದಾರ್ ಹುಸೇನ್ ಸರಕಾವಸ್, ತಾಪಂ ಇಒ ಡಾ. ಎನ್.ಆರ್. ಪ್ರದೀಪ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಂ. ಸತ್ಯನಾರಾಯಣ, ಕ್ಷೇತ್ರ ಸಮನ್ವಯಾಧಿಕಾರಿ ದಯಾನಂದ ಕರ್, ದೈಹಿಕ ಶಿಕ್ಷಣ ಪರಿವೀಕ್ಷಕ ಲಿಂಗರಾಜ ಒಡೆಯರ್, ಜಿಪಂ ಮಾಜಿ ಸದಸ್ಯ ಶಿವಲಿಂಗೇಗೌಡ, ಗ್ರಾಪಂ ಅಧ್ಯಕ್ಷ ಅಮಿತ್ ಗೌಡ, ಶ್ರೀವರದಾ ವಿದ್ಯಾಭಿವೃದ್ಧಿ ಸಮಿತಿ ಕಾರ್ಯದರ್ಶಿ ಕೆ. ನಾಗರಾಜ ಗೌಡ, ಜಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಪ್ರಕಾಶ್ ಮಡ್ಲೂರು, ಶಾಲೆಯ ಮುಖ್ಯಶಿಕ್ಷಕ ರೇವಣಸಿದ್ದಪ್ಪ, ಎಲ್.ಕೆ ಉರಣಕರ್ ವಿಜಯಕುಮಾರ ಇದ್ದರು.