ಜಿಲ್ಲಾ ಸುದ್ದಿತಾಜಾ ಸುದ್ದಿದೇಶರಾಜಕೀಯ

ಈಶ್ವರಪ್ಪರನ್ನು ಮನೆ ಬಾಗಿಲಿಗೆ ಕರೆಸಿಕೊಂಡು ಮುಖ ತೋರಿಸದ ಅಮಿತ್ ಶಾ…

Share Below Link

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲು ದೆಹಲಿಗೆ ತೆರಳಿದ್ದ ಬಿಜೆಪಿ ಬಂಡಾಯ ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ ನಿರಾಸೆಯಾಗಿದೆ. ಈ ಹಿಂದೆ ಬಿಎಸ್‌ವೈ ಅವರನ್ನು ಕರೆಸಿಕೊಂಡು ಮುಖ ತೋರಿಸದೇ ಅವಮಾನಿಸಿದ್ದ ರೀತಿಯಲ್ಲೇ ಈ ಬಾರಿ ಈಶ್ವರಪ್ಪನವರಿಗೆ ಮಾಡ ಲಾಗಿದೆ. ಭೇಟಿಗೆ ಗೃಹ ಸಚಿವರು ಸಿಗದೇ ಹೋದದ್ದು, ಬಂದ ದಾರಿಗೆ ಸುಂಕ ಇಲ್ಲ ಎಂಬಂತಾಗಿದೆ.


ನಿನ್ನೆ ಈಶ್ವರಪ್ಪ ದೆಹಲಿಗೆ ಬಂದಾಗ, ಅಮಿತ್ ಶಾ ಕಚೇರಿಯಿಂದ ದೂರವಾಣಿ ಕರೆ ಬಂದಿತು. ಗೃಹ ಸಚಿವರು ಭೇಟಿಯಾಗುವುದಿಲ್ಲ ಎಂಬ ಸಂದೇಶ ನೀಡಲಾಯಿತು. ಈ ಹಿನ್ನೆಲೆ ಈಶ್ವರಪ್ಪ ಅವರು ದಿಲ್ಲಿಗೆ ಹೋದಷ್ಟೇ ವೇಗವಾಗಿ ರಾಜ್ಯಕ್ಕೆ ಹಿಂತಿರುಗಿದ್ದಾರೆ.
ಈ ಕುರಿತು ದೆಹಲಿಯಲ್ಲಿ ಮಾತನಾಡಿದ ಈಶ್ವರಪ್ಪ, ಅಮಿತ್ ಶಾ ಭೇಟಿಯಾದರೂ, ಭೇಟಿಯಾಗದಿದ್ದರೂ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ. ಈಗ ಅಮಿತ್ ಶಾ ಭೇಟಿಯಾದಿರುವುದು ಚುನಾವಣೆಗೆ ಸ್ಪರ್ಧಿಸಲು ಸಂದೇಶ ನೀಡದಂತೆ ಎಂದು ತಿಳಿಸಿzರೆ.
ಅಮಿತ್ ಶಾ ಹೇಳಿದರು ಅಂತಾ ದೆಹಲಿಗೆ ಬಂದೆ. ಅವರು ಸಿಗಲ್ಲ ಅಂತಾ ಹೇಳಿದರು. ಈಶ್ವರಪ್ಪ ನಿಲ್ಲಲಿ, ರಾಘವೇಂದ್ರ ಸೋಲಿಸಬೇಕು ಎನ್ನುವುದು ಅಮಿತ್ ಶಾ ಆಪೇಕ್ಷೆ. ನಾನು ಮೋದಿ, ಅಮಿತ್ ಶಾ ಆಶೀರ್ವಾದದಿಂದ ಗೆಲ್ಲುತ್ತೇನೆ. ಎಲ್ಲರ ಸಹಕಾರದಲ್ಲಿ ನಾನು ಚುನಾವಣೆ ಗೆದ್ದು, ಮೋದಿ ಕೈ ಬಲಪಡಿಸುತ್ತೇನೆ ಎಂದು ಹೇಳಿzರೆ.
ಹಿಂದೆ ರಾಯಣ್ಣ ಬ್ರಿಗೇಡ್ ಮಾಡಿದೆವು. ಬಿಎಸ್‌ವೈ ಬೆನ್ನು ತಟ್ಟುವ ಬದಲು ಅಮಿತ್ ಶಾ ದೂರು ನೀಡಿದರು. ಅಮಿತ್ ಶಾ ಮಾತು ಕೇಳಿ ಸಂಘಟನೆ ನಿಲ್ಲಿಸಿದೆ. ಬಿಎಸ್‌ವೈ ಕುಟುಂಬಕ್ಕೆ ಒಂದು ನೀತಿ, ನಮಗೆ ಒಂದು ನೀತಿನಾ? ಅವರ ಮನೆಯಲ್ಲಿ ಸಂಸದ, ಶಾಸಕ, ರಾಜಧ್ಯಕ್ಷ ಆಗಿzರೆ. ನಮ್ಮ ಮನೆಯಲ್ಲಿ ಶಾಸಕನೂ ಇಲ್ಲ ಸಂಸದನೂ ಇಲ್ಲ. ನಾನು ಶಾಸಕರಾಗಿ ನನ್ನ ಮಗನಿಗೆ ಟಿಕೆಟ್ ಕೇಳ್ತಿಲ್ಲ. ಬಿಜೆಪಿಯಲ್ಲಿ ನೀತಿ ನಿಯಮದ ಪ್ರಕಾರ ನಡೆದುಕೊಂಡು ಬಂದಿದ್ದೇನೆ ಎಂದು ಪಕ್ಷದ ವಿರುದ್ಧ ಬೇಸರ ಹೊರಹಾಕಿzರೆ.
ಪಕ್ಷದ ವಿರುದ್ಧ ಸೆಡ್ಡು ಹೊಡೆದಿರುವ ಈಶ್ವರಪ್ಪನವರನ್ನು ಕಮಲ ಕಮಾಂಡ್ ಸಂಪೂರ್ಣವಾಗಿ ನಿರ್ಲಕ್ಷಿಸಿತಾ ಎಂಬ ಅನುಮಾನಗಳು ಕಾಡತೊಡಗಿದೆ.