ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಅಂಬೇಡ್ಕರ್ ಪ್ರತಿಮೆಗೆ ಹಾಲಿನ ಅಭಿಷೇಕ…

Share Below Link

ಭದ್ರಾವತಿ : ನಗರದ ಅಂಡರ್ ಬ್ರಿಡ್ಜ್ ಬಳಿಯ ಅಂಬೇಡ್ಕರ್ ವತ್ತದಲ್ಲಿ ನೂತನವಾಗಿ ಉದ್ಘಾಟನೆಗೊಂಡಿರು. ಬಿ.ಆರ್ ಅಂಬೇಡ್ಕರ್‌ರವರ ೧೨ ಅಡಿ ಎತ್ತರ ದ ಪುತ್ಥಳಿಗೆ ಕರ್ನಾಟಕ ರಾಜ್ಯ ಚಾಣುಕ್ಯ ಸೇನೆ ವತಿಯಿಂದ ಹಾಲಿನ ಅಭಿಷೇಕದೊಂದಿಗೆ ಬಹತ್ ಹೂವಿನ ಮಾಲಾರ್ಪಣೆ ಮಾಡಲಾಯಿತು. ಜೊತೆಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಿಎಂ ಸಿದ್ದರಾಮಯ್ಯರವರಿಗೆ ಮನವಿ ಮಾಡಲಾಯಿತು.


ಡಾ. ಬಿ.ಆರ್ ಅಂಬೇಡ್ಕರ್ ರವರ ಜನ್ಮದಿನಾಚರಣೆ ಅಂಗವಾಗಿ ರಾಜ್ಯದ ವಿವಿಧ ಸಂಘ ಸಂಸ್ಥೆಗಳಲ್ಲಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ವ್ಯಕ್ತಿಗಳಿಗೆ ಡಾ. ಬಿ.ಆರ್ ಅಂಬೇಡ್ಕರ್‌ರವರ ಪ್ರಶಸ್ತಿ ನೀಡಿ ಗೌರವಿಸುವುದರ ಜೊತೆಗೆ ಪ್ರಶಸ್ತಿ ಪುರಸ್ಕೃತರಿಗೆ ೫ ಲಕ್ಷ ರೂ ಸಹಾಯ ಧನ ನೀಡುವುದು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾ ರ್ಥಿಗಳಿಗೆ ಉತ್ತಮ ಗುಣಮಟ್ಟದ (ಸೋನಾ ಮಸೂರಿ) ಅಕ್ಕಿ ನೀಡು ವುದು. ರಾಜ್ಯದಲ್ಲಿ ವಿಧವೆಯರ ಅಭಿವೃದ್ದಿ ನಿಗಮ ಸ್ಥಾಪಿಸಿ, ಆ ನಿಗಮಕ್ಕೆ ವಿಧವೆ ಮಹಿಳೆಯರನ್ನು ಮಾತ್ರ ಅಧ್ಯಕ್ಷರನ್ನಾಗಿ ಮಾಡುವಂತೆ ಒತ್ತಾಯಿಸಿದರು.
ರಾಜ್ಯದ ಎ ಇಲಾಖೆಯಲ್ಲಿ ಹೊರ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರನ್ನು ಸರಕಾರ `ಡಿ’ ಗ್ರೂಪ್ ನೌಕರರೆಂದು ಪರಿಗಣಿಸಿ ಅವರಿಗೆ ಪ್ರತಿ ತಿಂಗಳು ಏಜೆನ್ಸಿ ಮೂಲಕ ವೇತನ ನೀಡುವ ಬದಲಿಗೆ ಜಿಧಿಕಾರಿಗಳ ಮೂಲಕ ವೇತನ ನೀಡಬೇಕು, ಅವರ ಪ್ರತಿ ತಿಂಗಳ ವೇತನ ಸುಮಾರು ೩೫ ಸಾವಿರ ರೂಗಳಿಗೆ ಹೆಚ್ಚಿಸುವುದು. ರಾಜ್ಯದ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾ ರ್ಥಿನಿಯರಿಗೆ ಮತ್ತು ಉದ್ಯೋಗಸ್ಥ ಮಹಿಳೆಯರಿಗೆ ಋತು ಚಕ್ರದ ರಜೆ ಘೋಷಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸು ವಂತೆ ಮನವಿ ಮಾಡಲಾಗಿದ್ದು, ಒಂದು ವೇಳೆ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ರಾಜ್ಯ ವ್ಯಾಪ್ತಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಲಾಗಿದೆ.
ಸೇನೆ ರಾಜಧ್ಯಕ್ಷ ನಾರಾಯಣ ಐಹೊಳೆ, ಆದಿ ಜಂಬವ ಸಮಾಜದ ರಾಜಧ್ಯಕ್ಷ ಪ್ರಕಾಶ್, ಕರ್ನಾಟಕ ಅಂಬೇಡ್ಕರ್ ವೈಚಾರಿಕೆ ವೇದಿಕೆ ಸಂಚಾಲಕ ಪಿ. ಮೂರ್ತಿ ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.