ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಅರಣ್ಯ ಇಲಾಖೆ ಅಧಿಕಾರಿ ಹುzಗಳಿಗೆ ಅರಣ್ಯಶಾಸ್ತ್ರ ಪದವಿ ಪರಿಗಣಿಸಲು ಆಗ್ರಹಿಸಿ ಮನವಿ

Share Below Link

ಶಿವಮೊಗ್ಗ : ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿ ಹುzಯ ನೇರ ನೇಮಕಾತಿ ಯಲ್ಲಿ ಬಿ.ಎಸ್ಸಿ. ಅರಣ್ಯ ಶಾಸ್ತ್ರ ಪದವಿ ಯನ್ನೇ ಕನಿಷ್ಠ ವಿದ್ಯಾರ್ಹತೆ ಯನ್ನಾಗಿ ಮಾಡುವ ಕುರಿತು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಕರ್ನಾಟಕ ಅರಣ್ಯ ವಿದ್ಯಾರ್ಥಿಗಳ ಪದವೀಧರರ ಸಂಘದಿಂದ ಮನವಿ ಸಲ್ಲಿಸಲಾಯಿತು.
ವೃತ್ತಿಪರ (ಅರಣ್ಯಶಾಸ್ತ್ರ) ಪದವೀಧರರ ಸಾಮರ್ಥ್ಯ ಮತ್ತು ಅಗತ್ಯವನ್ನು ಅರಿತುಕೊಂಡ ಕರ್ನಾಟಕ ಸರ್ಕಾರವು ೨೦೦೩ರಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ವಲಯ ಅರಣ್ಯಾಧಿಕಾರಿ ಹುzಗೆ ಶೇ.೫೦ರಷ್ಟು ಮೀಸಲಾತಿ ಒದಗಿಸಿದ ನಂತರ ೨೦೧೨ರಲ್ಲಿ ವಲಯ ಅರಣ್ಯಾಧಿಕಾರಿ ಹುzಗೆ ಶೇ.೭೫ರಷ್ಟು ಹೆಚ್ಚಿಸಲಾಯಿತೆಂದು ತಿಳಿಸಿzರೆ.
ಅರಣ್ಯ ಇಲಾಖೆಯಲ್ಲಿ ವಿವಿಧ ಹುzಗಳಾದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿ ಹುzಗಳಿಗೆ ಬಿ.ಎಸ್ಸಿ ಅರಣ್ಯಶಾಸ್ತ್ರ ಪದವೀಧರರನ್ನೇ ನೇರ ನೇಮಕಾತಿ ಮಾಡುವುದರ ಮೂಲಕ ಅರಣ್ಯ ಶಾಸ್ತ್ರದಲ್ಲಿ ವಿಷೇಶ ಪರಿಣಿತಿ ಹೊಂದಿರುವ ಪದವೀಧರರ eನ ಮತ್ತು ಅನುಭವವನ್ನು ರಚನಾತ್ಮಕ ವಾಗಿ ಬಳಸಿಕೊಳ್ಳಲು ಆಗ್ರಹಿಸಿದರು.
ಅರಣ್ಯಶಾಸ್ತ್ರ ಸೇರುವವರು ಪಿಯುಸಿಯಲ್ಲಿ ವಿeನ ವಿಷಯ ವನ್ನು ಆಯ್ಕೆ ಮಾಡಿಕೊಂಡು, ಕರ್ನಾಟಕ ಪರೀಕ್ಷಾ ಪ್ರಾಧೀಕಾರ ನಡೆಸುವ ಸಿ.ಇ.ಟಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳಿಸಿ ಬಂದಿರುತ್ತಾರೆ. ವರ್ಷದಿಂದ ವರ್ಷಕ್ಕೆ ಈ ಪರೀಕ್ಷೆ ಯಲ್ಲಿ ಅತ್ಯುತ್ತಮ ಶ್ರೇಣಿ ಪಡೆದ ವಿದ್ಯಾರ್ಥಿಗಳು ಬಿ.ಎಸ್ಸಿ (ಅರಣ್ಯಶಾಸ್ತ್ರ) ಪದವಿಯನ್ನೇ ಬೇರೆ ವಿಷಯಗಳಿಗಿಂತ ಹೆಚ್ಚು ಆಸಕ್ತಿ ಯಿಂದ ಆಯ್ಕೆ ಮಾಡಿಕೊಳ್ಳುತ್ತಿ ರುವುದು, ಪ್ರತಿಭಾವಂತ ವಿದ್ಯಾರ್ಥಿಗಳೇ ಈ ಕ್ಷೇತ್ರಕ್ಕೆ ಬರುತ್ತಿರುವುದು ಈ ಪದವಿಯ ವ್ಯಾಸಂಗದ ಮಹತ್ವವನ್ನು ಸೂಚಿಸುತ್ತದೆ. ಅರಣ್ಯಾಧಿಕಾರಿ ಹುzಯ ನೇರ ನೇಮಕಾತಿಯಲ್ಲಿ ಸದರಿ ಬಿ.ಎಸ್ಸಿ (ಅರಣ್ಯಶಾಸ್ತ್ರ) ಪದವೀಧರರಿಗೆ ಮೊದಲು ನೀಡಿದ್ದ ಶೇ.೭೫ರಷ್ಟು ಮೀಸಲಾತಿಯನ್ನು ಶೇ.೫೦ಕ್ಕೆ ಕಡಿತಗೊಳಿಸಿರುವುದು ಅನ್ಯಾಯವಾಗಿದ್ದು, ಇದರಿಂದ ಅರಣ್ಯ ನಿರ್ವಹಣೆಗೆ ಬೇಕಾದ ತಾಂತ್ರಿಕ ಪರಿಣಿತಿ ಕ್ಷೀಣಗೊಳ್ಳಲಿದೆ ಎಂದರು.
ಅರಣ್ಯಶಾಸ್ತ್ರವು ಒಂದು ವಿಶೇಷ ಕ್ಷೇತ್ರವಾಗಿದ್ದು, ಅರಣ್ಯ ಪರಿಸರ ಶಾಸ್ತ್ರ, ಜೀವವೈವಿಧ್ಯ ಸಂರಕ್ಷಣೆ, ವೃಕ್ಷಶಾಸ್ತ್ರ ವಿಧಾನಗಳು, ವನ್ಯಜೀವಿ ನಿರ್ವಹಣೆ, ಹವಾಮಾನ ಬದಲಾವಣೆ ತಡೆಗೆ ಅರಣ್ಯ ನಿರ್ವಹಣೆ, ಅರಣ್ಯ ಸಂಪತ್ತು ಬಳಕೆ ಹಾಗೂ ಸಾಮಾಜಿಕ ಅರಣ್ಯ ನಿರ್ವಹಣೆ ಮುಂತಾದ ವಿವಿಧ ಕರ್ತವ್ಯಗಳನ್ನು ಒಳಗೊಂಡಿರುತ್ತದೆ. ಈ ವಿಭಾಗದ ಜಟಿಲತೆಯನ್ನು ಸಮರ್ಥವಾಗಿ ನಿರ್ವಹಿಸಲು ನಿರ್ದಿಷ್ಟ ಅರಣ್ಯ ಶಿಕ್ಷಣ ಮತ್ತು ತರಬೇತಿ ಹೊಂದಿರುವ ಅಭ್ಯರ್ಥಿ ಗಳೇ ಅಗತ್ಯ ಹಾಗೂ ರಾಷ್ಟ್ರೀಯ ಅರಣ್ಯ ನೀತಿ (೧೯೮೮) ಕೂಡ ಇದನ್ನು ಶಿಫಾರಸ್ಸು ಮಾಡುತ್ತದೆ ಎಂದರು.
ಕರ್ನಾಟಕ ಸರ್ಕಾರ ಕೃಷಿ ವಿಶ್ವವಿದ್ಯಾಲಯಗಳ ಕೃಷಿ ಮತ್ತು ಸಂಬಂಧಿತ ವಿeನಗಳಿಂದ ಪದವಿ ಪಡೆದವರಿಗೆ ಅವರ ಶೈಕ್ಷಣಿಕ ಅರ್ಹತೆಗೆ ನೇರವಾಗಿ ಸಂಬಂಧಿಸಿದ ಇಲಾಖೆಗಳಲ್ಲಿ ನೇರ ನೇಮಕಾತಿ ಯಲ್ಲಿ ಶೇ. ೧೦೦ರಷ್ಟು ಮೀಸಲಾತಿ ಯನ್ನು ಆಯಾ ಇಲಾಖೆಗಳಲ್ಲಿ ವೃತ್ತಿಪರತೆಯನ್ನು ಹೆಚ್ಚಿಸಲು ಒದಗಿಸಿದೆ. ಉದಾಹರಣೆಗೆ ಸಹಾಯ ಕೃಷಿ ಅಧಿಕಾರಿ (ಬಿ.ಎಸ್ಸ್ಸಿ. ಕೃಷಿ), ಸಹಾಯಕ ತೋಟಗಾರಿಕಾ ಅಧಿಕಾರಿ (ಬಿ.ಎಸ್ಸ್ಸಿ. ತೋಟಗಾರಿಕೆ), ಪಶುವೈದ್ಯ ಅಧಿಕಾರಿ (ಬಿ.ವಿ.ಎಸ್ಸಿ) ಹಾಗೂ ಸಹಾಯ ರೇಷ್ಮೆ ಅಧಿಕಾರಿ (ಬಿ.ಎಸ್ಸಿ. ರೇಷ್ಮೆ) ಇದೇ ನಿಟ್ಟಿನಲ್ಲಿ ಅರಣ್ಯ ಪದವೀಧರರ ಅವಶ್ಯಕತೆ ಮತ್ತು ಉಪಯುಕ್ತತೆಯನ್ನು ಗುರುತಿಸಿ ತಮಿಳುನಾಡು, ತೆಲಂಗಾಣ, ಕೇರಳ, ಒರಿಸ್ಸಾ, ಜಮ್ಮು ಮತ್ತು ಕಾಶ್ಮೀರ ಹಾಗೂ ಜಾರ್ಕಂಡ್ ನಂತಹ ಇತರೆ ರಾಜ್ಯಗಳು ಸಹ ತಮ್ಮ ಅರಣ್ಯ ಇಲಾಖೆಗಳಲ್ಲಿ ಮೀಸಲಾತಿ ಒದಗಿಸಿದೆ ಎಂದರು.
ಈ ಎ ಕಾರಣಗಳ ಹಿನ್ನೆಲೆ ಯಲ್ಲಿ, ಸದರಿ ಅರಣ್ಯ ಪದವೀಧರ ವಿದ್ಯಾರ್ಥಿಗಳ ವೃತ್ತಿ ಜೀವನದ ಹಿತದೃಷ್ಟಿಯಿಂದ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿ ಹುzಗಳಲ್ಲಿ ಬಿ.ಎಸ್ಸಿ (ಅರಣ್ಯಶಾಸ್ತ್ರ)ವನ್ನು ಕನಿಷ್ಟ ವಿದ್ಯಾರ್ಹತೆಯನ್ನಾಗಿ ಮಾಡಿ ಬಿ.ಎಸ್ಸಿ (ಅರಣ್ಯಶಾಸ್ತ್ರ) ಪದವೀಧರ ರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆಯಲ್ಲಿ ಆನಂದಪುರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಪ್ರವೀಣ್, ನಾಡಕಛೇರಿ ಉಪತಹಶೀಲ್ದಾರ್, ಮನವಿಯನ್ನು ಸ್ವೀಕರಿಸಿದರು.
ಕರ್ನಾಟಕ ಅರಣ್ಯ ವಿದ್ಯಾರ್ಥಿ ಗಳ ಪದವೀಧರರ ಸಂಘದ ಪ್ರಮುಖರಾದ ಇಂಚರ, ಮಂಜುನಾಥ್, ಸನ್ನಿಭಾ, ಸಂತೋಷ್, ಮಾರುತಿ ಸಿ.ಎನ್., ಅಮರನಾಥ್, ಲಕ್ಷ್ಮೀ, ಹರ್ಷಿತಾ, ಅನು, ಚೌವ್ಹಾಣ್, ಸಂತೋಷ್ ವಿ. ಸೇರಿದಂತೆ ಸುಮಾರು ೧೪೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.