ಜಿಲ್ಲಾ ಸುದ್ದಿತಾಜಾ ಸುದ್ದಿ

ಏ.೧:ಕಾಲಭೈರವೇಶ್ವರ ಸ್ವಾಮಿ ದೇವಾಲಯದ ವಾರ್ಷಿಕೋತ್ಸವ

Share Below Link

ಶಿವಮೊಗ್ಗ: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾ ಸ್ವಾಮೀಜಿ ಗಳವರ ಕೃಪಾಶೀರ್ವಾದ ಗಳೊಂದಿಗೆ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯ ದಲ್ಲಿ ಮತ್ತು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಗಳವರ ದಿವ್ಯ ಉಪಸ್ಥಿತಿಯಲ್ಲಿ, ವಿಶೇಷ ಕಾರ್‍ಯಕ್ರಮಗಳನ್ನು ಏರ್ಪಡಿಸಲಾ ಗಿದೆ.
ಇಲ್ಲಿನ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಸ್ಥಾನದ ೨೭ ನೇ ವಾರ್ಷಿಕೋತ್ಸವ, ಶ್ರೀ ಆದಿ ಚುಂಚನಗಿರಿ ಮಹಾಸಂಸ್ಥಾನ ಮಠ ಶಿವಮೊಗ್ಗ ಶಾಖೆ, ಶರಾವತಿ ನಗರ, ಶಿವಮೊಗ್ಗ ಇಲ್ಲಿ ಕಾರ್ಯಕ್ರಮ ನಡೆಯಲಿದ್ದು, ಆದರ್ಶ ಹಿರಿಯ ದಂಪತಿಗಳಿಗೆ ಸನ್ಮಾನ ಕೂಡ ನಡೆಯುವುದು.೧೯೯೮ ರಂದು ನಿರ್ಮಿಸಿದ ಶ್ರೀ ಆದಿಚುಂಚನಗಿರಿ ಸಮುದಾಯಭವನ ಉದ್ಘಾಟನೆ ದಿನದಿಂದ ಆರಂಭಗೊಂಡ ಸಾಮೂಹಿಕ ವಿವಾಹ ಮಹೋತ್ಸವಕ್ಕೆ ಇಂದು ೨೭ರ ಸಂಭ್ರಮ. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ, ಶಿವಮೊಗ್ಗ ಶಾಖೆಯಲ್ಲಿ ನಡೆಯುವ ಈ ಶುಭ ವಿವಾಹ ಅಂದಿನಿಂದ ಇಂದಿನವರೆಗೆ ಸರಿಸುಮಾರು ೭೫೦ ಕ್ಕಿಂತ ಹೆಚ್ಚು ದಾಂಪತ್ಯ ಜೀವನಗಳನ್ನು ಕಟ್ಟಿಕೊಟ್ಟಿದೆ.
ಇಂದಿನ ಪ್ರತಿ ವಿವಾಹ ಮಹೋತ್ಸವದ ವಿಶೇಷತೆ ಎಂದರೆ ಮದುವೆಯಾಗುವ ವಧು ವರರಿಗೆ ವಿವಾಹಕ್ಕೆ ಬೇಕಾದ ಅಗತ್ಯ ಸಾಮ ಗ್ರಿಗಳನ್ನು ಮಠವೇ ನೀಡುತ್ತದೆ. ಹೆಣ್ಣಿಗೆ ತಾಳಿ, ಕಾಲುಂಗುರ, ಬಟ್ಟೆ ನೀಡಿದರೆ, ಗಂಡಿಗೆ ಅಂಗಿ, ಪಂಚೆ, ಕಲ್ಪವೃಕ್ಷ ನೀಡುತ್ತಾರೆ.
ಪೂಜ್ಯಸದ್ಗುರು ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ನೇತೃತ್ವದಲ್ಲಿ ಇಂತಹ ಉಚಿತ ಸಾಮೂಹಿಕ ವಿವಾಹ ಸಮಾರಂಭಗಳನ್ನು ಎಂತಹುದೇ ಸಂದರ್ಭದಲ್ಲಿ ನಿಲ್ಲಿಸದೇ ಕಳೆದ ೨೬ ವರ್ಷಗಳಿಂದ ನಿರಂತರವಾಗಿ, ವೈಭವಯುತವಾಗಿ ನಡೆಸಿಕೊಂಡು ಬರುತ್ತಿರುವ ಶಿವಮೊಗ್ಗದ ಶ್ರೀ ಆದಿಚುಂಚನಗಿರಿ ಶಾಖಾಮಠದ ಪ್ರಯತ್ನ ಶ್ಲಾಘನೀಯ ಹಾಗೂ ಗೌರವಾನ್ವಿತವಾದುದೇ ಹೌದು.
ಈ ಬಾರಿಯ ೨೭ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ಏಪ್ರಿಲ್೦೧ ರಂದು ಬೆಳಿಗ್ಗೆ ೫:೩೦ ರಿಂದ ಶ್ರೀ ಕಾಲಭೈರವೇಶ್ವರ ದೇವಾಲಯದ ವಾರ್ಷಿಕೋತ್ಸವ ಸಮಾರಂಭದ ನಿಮಿತ್ತ ಸ್ವಾಮಿಗೆ ಹೋಮ ಹವನಾ ದಿಗಳೊಂದಿಗೆ ಕುಂಭಾಭಿಷೇಕ, ಮಹಾಮಂಗಳಾರತಿ ವಿಶೇಷ ಪೂಜ ಕೈಂಕರ್ಯಗಳೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ನಂತರ ಬೆಳಿಗ್ಗೆ ೮ ಗಂಟೆಗೆ ಆದರ್ಶ ಹಿರಿಯ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮ ಸಹ ಇದೇ ಸ್ಥಳದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸಾನ ಶಾಖಾ ಮಠದ ಪೂಜ್ಯರು ಉಪಸ್ಥಿತರಿರುವರು .ಈ ಎ ಕಾರ್ಯಕ್ರಮದಲ್ಲಿ.ನಗರದ ನಾಗರಿಕರು ಹಾಗೂ ಪೋಷಕ ಬಂಧುಗಳು ಹಾಗೂ ಶ್ರೀ ಮಠದ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಶುಭ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಕೊಡಬೇಕಾಗಿ ಕಾರ್ಯಕ್ರಮದ ಆಯೋಜಕರು ಕೋರಿzರೆ.