ಚರ್ಚ್ ಮೇಲಿನ ದಾಳಿ ಖಂಡನೀಯ; ಕಿಡಿಗೇಡಿಗಳ ವಿರುದ್ಧ ಪ್ರಧಾನಿ ಮೋದಿ ಕಠಿಣ ಕ್ರಮ ಕೈಗೊಳ್ಳಲಿದ್ದಾರೆ…
ಬೆಂಗಳೂರು : ದೇಶದ ಕೆಲವು ರಾಜ್ಯಗಳಲ್ಲಿ ಕ್ರಿಸ್‌ಮಸ್ ಆಚರಣೆ ಸಂದರ್ಭ ದಲ್ಲಿ ಚರ್ಚ್‌ಗಳ ಮೇಲೆ ಕೆಲ ಕಿಡಿಗೇಡಿಗಳು ದಾಳಿ ನಡೆಸಿದ್ದಾರೆ. ಇದು ಹೇಗೆ ಕೃತ್ಯವಾ ಗಿದ್ದು, ಇದನ್ನು ನಾವೆಲ್ಲರೂ ಖಂಡಿಸಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡರು ಕರೆನೀಡಿದರು.
ಭಾರತ ದೇಶದಲ್ಲಿ ಎಲ್ಲ ಧರ್ಮದವರು ನೆಲೆಸಿzರೆ. ಶಾಂತಿಪ್ರಿಯರಾದ ಕ್ರೈಸ್ತರ ಪೂಜಾಮಂದಿರವಾದ ಚರ್ಚ್‌ಗಳ ಮೇಲೆ ದಾಳಿ ನಡೆಯಬಾರದಿತ್ತು. ಪೂರ್ವಾಗ್ರಹ ಪೀಡಿತರಾಗಿರುವ ಕೆಲ ಕಿಡಿಗೇಡಿಗಳು ಇಂತಹ ಕೃತ್ಯ ಎಸಗಿದ್ದಾರೆ. ದಾಳಿ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಪ್ರಧಾನಿ ನರೇಂದ್ರ ಮೋದಿ ಅವರು ಸರ್ವ ಧರ್ಮೀಯರ ಒಳಿತಿಗಾಗಿ ರಾಜಧಾನಿ ದೆಹಲಿಯಲ್ಲಿ ಕ್ರಿಸ್‌ಮಸ್ ಹಬ್ಬದ ಸಂದರ್ಭದಲ್ಲಿ ಚರ್ಚ್‌ಗೆ ತೆರಳಿ ಪ್ರಾರ್ಥನೆ ಸಲ್ಲಿಸಿzರೆ. ದಾಳಿಕೋರರ ಮೇಲೆ ಅವರು ಖಂಡಿತ ಕ್ರಮ ತೆಗೆದು ಕೊಳ್ಳುತ್ತಾರೆ ಎಂಬ ವಿಶ್ವಾಸ ತಮಗಿದೆ ಎಂದು ನುಡಿದರು.

ಸುದ್ದಿಗಾರರ ಜೊತೆ ಮಾತನಾಡಿದ ಗೌಡರು, ಜಿಪಂ, ತಾಪಂ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬಿಜೆಪಿ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳುವುದು ಕಷ್ಟ ಸಾಧ್ಯವಾಗಲಿದೆ. ಎಲ್ಲೆಲ್ಲಿ ಜೆಡಿಎಸ್ ಬಲಿಷ್ಠವಾಗಿದೆಯೋ ಅಂತಹ ಕ್ಷೇತ್ರಗಳಲ್ಲಿ ಸ್ವಂತ ಬಲದಲ್ಲಿ ಸ್ಪರ್ಧಿ ಸಲಿದೆ ಎಂದು ಪಕ್ಷದ ವರಿಷ್ಠರೂ ಆದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಹೇಳಿದರು.
ಈ ಹಿಂದೆ ನಿರ್ಧರಿಸಿರುವಂತೆ ಲೋಕಸಭೆ, ರಾಜ್ಯಸಭೆ, ವಿಧಾನಸಭೆ ಮತ್ತು ವಿಧಾನ ಪರಿಷತ್ತುಗಳಿಗೆ ನಡೆಯುವ ಚುನಾವಣೆಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಹೊಂದಾಣಿಕೆಯಲ್ಲಿ ಸ್ಪರ್ಧಿ ಸಿತ್ತು, ಅದರಲ್ಲಿ ಮುಂದೆಯೂ ಕೂಡ ಯಾವುದೇ ಬದಲಾವಣೆಗಳು ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಆದರೆ ಸ್ಥಳೀಯ ಸಂಸ್ಥೆ ಚುನಾವಣೆಗಳ ಪರಿಸ್ಥಿತಿ ಭಿನ್ನವಾಗಿದ್ದು, ಕೆಲವು ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷದ ಸಂಘಟನೆ ಬಲವಾಗಿದೆ. ಅಂತಹ ಕ್ಷೇತ್ರಗಳಲ್ಲಿ ಪಕ್ಷದ ಕಾರ್ಯಕರ್ತರ ಹಿತದೃಷ್ಟಿಯಿಂದ ಸ್ವತಂತ್ರವಾಗಿಯೇ ಸ್ಪರ್ಧಿಸಬೇಕಾಗುತ್ತದೆ. ಹೀಗಾಗಿ ಆ ಹಂತದ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದು ಕಷ್ಟ ಎಂದು ಅವರು ಪ್ರಶ್ನೆ ಒಂದಕ್ಕೆ ಉತ್ತರಿಸಿದರು.
ಈ ವಿಚಾರದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರು ತಮ್ಮ ನಿಲುವನ್ನು ಈಗಲೇ ಸ್ಪಷ್ಟಪಡಿಸಿzರೆ. ಹೀಗಾಗಿ ನಾವು ಕೂಡ ನಮ್ಮ ಸ್ವಂತ ಬಲದಲ್ಲಿಯೇ ಚುನಾವಣೆ ಎದುರಿಸುತ್ತೇವೆ ಎಂದ ಗೌಡರು, ಕೇರಳದಲ್ಲಿ ಎಡಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳುತ್ತೇವೆ ಎಂದು ಅವರು ವಿವರಿಸಿದರು.
ಅಹಿಂದ ನಾಯಕ ಎಂದು ಫೋಸ್ ಕೊಟ್ಟು ಓಡಾಡುತ್ತಿರುವ ಮಹಾನ್ ವ್ಯಕ್ತಿ ಅದ್ಯಾವಾಗ ಅಹಿಂದ ನಾಯಕರಾಗಿದ್ದರು? ಅಹಿಂದದ ವ್ಯಾಖ್ಯಾನ ಏನು ಎಂದು ಪ್ರಶ್ನಿಸಿದ ಗೌಡರು, ಮುಸ್ಲಿಮರಿಗೆ ಮೀಸಲಾತಿ ನೀಡಿದವರು ಯಾರು? ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಿದವರು ಯಾರು? ನಿಜಕ್ಕೂ ಅಹಿಂದ ನಾಯಕರು ಆಗಿದ್ದಿದ್ದರೆ ಸಿದ್ದರಾಮಯ್ಯ ಅವರು ಚುನಾವಣೆಗೆ ಸ್ಪರ್ಧಿಸಲು ಕೋಲಾರ ಬಾದಾಮಿ ಎಂದು ವರ್ಷಗಳ ಕಾಲ ಕ್ಷೇತ್ರ ಹುಡುಕ ಬೇಕಿತ್ತು ಎಂದು ಕುಟುಕಿದರು.

