ಕ್ರಿಸ್ಮಸ್ ಸಂದರ್ಭದಲ್ಲಿ ಕ್ರೈಸ್ತರ ಮೇಲಿನ ದಾಳಿ ಅಮಾನವೀಯ….
ಶಿವಮೊಗ್ಗ : ಕ್ರಿಸ್ಮಸ್ ಹಬ್ಬದ ಪವಿತ್ರ ಸಂದರ್ಭದಲ್ಲಿ ದೇಶದ ವಿವಿಧೆಡೆ ಕ್ರೈಸ್ತ ಸಮುದಾಯದ ಮೇಲೆ ನಡೆದಿರುವ ದಾಳಿಗಳು ನಾಗರಿಕ ಸಮಾಜ ತಲೆತಗ್ಗಿಸು ವಂತಹ ಅಮಾನವೀಯ ಕೃತ್ಯಗಳಾಗಿವೆ ಎಂದು ಜೆಡಿಎಸ್ ರಾಜ್ಯ ಕಾರ್ಯದರ್ಶಿ ರಾಕೇಶ್ ಡಿಸೋಜಾ ಅವರು ತೀವ್ರವಾಗಿ ಖಂಡಿಸಿzರೆ.
ಕ್ರಿಸ್ಹಬ್ಬವು ಶಾಂತಿ, ಪ್ರೀತಿ, ಸಹಬಾಳ್ವೆ ಮತ್ತು ಮಾನವೀಯ ಮಲ್ಯಗಳ ಪ್ರತೀಕವಾಗಿದ್ದು, ಇಂತಹ ಹಬ್ಬದ ದಿನದ ಅಲ್ಪಸಂಖ್ಯಾತ ಕ್ರೈಸ್ತ ಸಮುದಾಯದ ಮೇಲೆ ದಾಳಿ ನಡೆಸಿರುವ ಕಿಡಿಗೇಡಿಗಳ ಕೃತ್ಯಗಳು ಸಂವಿಧಾನಾತ್ಮಕ ಮಲ್ಯಗಳಿಗೆ ವಿರುದ್ಧವಾಗಿವೆ ಎಂದು ಅವರು ಹೇಳಿದರು.
ದೇಶದ ವಿವಿಧ ರಾಜ್ಯಗಳಲ್ಲಿ ಚರ್ಚ್ಗಳು, ಪ್ರಾರ್ಥನಾ ಸಭೆಗಳು ಹಾಗೂ ಕ್ರೈಸ್ತರ ಮನೆಗಳ ಮೇಲೆ ನಡೆದಿರುವ ದಾಳಿಗಳು ಕಾನೂನು ಸುವ್ಯವಸ್ಥೆಗೆ ದೊಡ್ಡ ಸವಾಲಾಗಿದ್ದು, ಈ ಕೃತ್ಯದಲ್ಲಿ ನೇರವಾಗಿ ಪಾಲ್ಗೊಂಡ ಮತ್ತು ಇವುಗಳ ಹಿಂದೆ ಇರುವ ಕಿಡಿಗೇಡಿಗಳನ್ನು ತಕ್ಷಣ ಗುರುತಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳ ಬೇಕಾಗಿದೆ ಎಂದು ರಾಕೇಶ್ ಡಿಸೋಜಾ ಅವರು ಆಗ್ರಹಿಸಿದರು.
ವಿಶ್ವಕ್ಕೇ ಮಾದರಿಯಾಗಿರುವ ಭಾರತ ಧರ್ಮನಿರಪೇಕ್ಷ ರಾಷ್ಟ್ರ ವಾಗಿದ್ದು, ಇಲ್ಲಿ ಎಲ್ಲ ಧರ್ಮದವರಿಗೂ ಸಮಾನವಾಗಿ ಜೀವಿಸುವ ಹಕ್ಕುಗಳು ಮತ್ತು ಸುರಕ್ಷತೆ ಒದಗಿಸುವ ಜವಾಬ್ದಾರಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮೇಲಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಶಾಂತಿಪ್ರಿಯರಾದ ಅಲ್ಪಸಂಖ್ಯಾತ ಕ್ರೈಸ್ತರ ಮೇಲೆ ನಡೆಯುತ್ತಿರುವ ದಾಳಿಗಳ ಬಗ್ಗೆ ಸರ್ಕಾರದ ಮನವೇ ಇಂತಹ ಕೃತ್ಯಗಳಿಗೆ ಉತ್ತೇಜನ ನೀಡುತ್ತಿರುವಂತೆ ಕಾಣುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಶಾಂತಿ ಮತ್ತು ಸೌಹಾರ್ದದ ಸಂದೇಶ ಸಾರುವ ಹಬ್ಬದ ದಿನಗಳಲ್ಲಿ ಸಮಾಜವನ್ನು ವಿಭಜಿಸುವ ಶಕ್ತಿಗಳನ್ನು ತಡೆಯಲು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಜೊತೆಗೆ, ಭಯದ ವಾತಾವರಣ ಸೃಷ್ಟಿಸುವ ಕಿಡಿಗೇಡಿಗಳ ವಿರುದ್ಧ ಯಾವುದೇ ರಾಜಕೀಯ ಒತ್ತಡವಿಲ್ಲದೆ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ದೇಶದ ಸಮಸ್ತ ನಾಗರಿಕರು ಧರ್ಮಾತೀತವಾಗಿ ಒಗ್ಗಟ್ಟಿನಿಂದ ಬದುಕಬೇಕೆಂಬ ಸಂವಿಧಾನದ ಆಶಯವನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ ವಾಗಿದ್ದು, ಶಾಂತಿ, ಸಹಬಾಳ್ವೆ ಮತ್ತು ಸೌಹಾರ್ದವೇ ಭಾರತದ ಶಕ್ತಿ ಎಂದು ರಾಕೇಶ್ ಡಿಸೋಜಾ ಅವರು ಹೇಳಿದ್ದಾರೆ.


