ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಿ: ರೈತ ಸಂಘ ಆಗ್ರಹ…
ಶಿವಮೊಗ್ಗ : ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿ ತಪ್ಪಿಸಬೇಕು ಮತ್ತು ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಸಾಮೂಹಿಕ ನಾಯಕತ್ವ) ಕಾರ್ಯಕರ್ತರು ಇಂದು ಜಿಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿದರು.
ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಂಪನಿಗಳು ಕಾನೂನು ಬಾಹಿರ ವಾಗಿ ಸಾಲ ವಸೂಲಾತಿ ಮಾಡು ತ್ತಿವೆ. ಕಂಪನಿಯ ಸಿಬ್ಬಂದಿಗಳು ಗೂ ಂಡಾಗಿರಿ ನಡೆಸುತ್ತಿzರೆ. ಸಾಲದ ಕಿರುಕುಳಕ್ಕೆ ಸಿಕ್ಕ ರೈತರು, ಬಡವರು ಆತ್ಮಹತ್ಯೆಯ ದಾರಿ ತುಳಿಯು ತ್ತಿzರೆ. ಕೂಡಲೇ ಇದರ ವಿರುದ್ಧ ಕ್ರಮತೆಗೆದುಕೊಳ್ಳಬೇಕು ಎಂದು ಧರಣಿನಿರತರು ಆಗ್ರಹಿಸಿದರು.
ಬಗರ್‌ಹುಕುಂ ಸಾಗುವಳಿ ದಾರರಿಗೆ ಹಕ್ಕುಪತ್ರ ನೀಡಬೇಕು. ರೈತ ವಿರೋಧಿ ಹೊಸ ಕೃಷಿ ಕಾಯ್ದೆ ಗಳನ್ನು ವಾಪಸ್ ಪಡೆಯಬೇಕು. ಕನಿಷ್ಠ ಉತ್ತೇಜನ ಹಾಗೂ ಬೆಂಬಲ ಬೆಲೆ ನಿಗದಿಗೊಳಿಸಬೇಕು. ಬೆಲೆ ಭರವಸೆ ನೀಡಬೇಕು. ಕರ್ನಾಟಕ ಭೂಸುಧಾರಣೆ ಕಾಯ್ದೆ ತಿದ್ದುಪಡಿ ಆಗಬೇಕು. ಭಾರತ ಸರ್ಕಾರ ನಿಗದಿಪಡಿಸುವ ಎಂ.ಎಸ್.ಪಿ. ಬೆಲೆಯನ್ನು ಕಾನೂನು ವ್ಯಾಪ್ತಿಗೆ ತರಬೇಕು, ಅದನ್ನು ಖಾತರಿಪಡಿಸ ಬೇಕು ಮತ್ತು ಖರೀದಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ರೈತರ ಕೃಷಿ ಪಂಪ್‌ಸೆಟ್ ಗಳಿಗೆ ತಂತಿ ಇನ್ನಿತರೆ ವಸ್ತುಗಳನ್ನು ರೈತರೇ ಭರಿಸಬೇಕು ಎನ್ನುವ ಆದೇಶ ವಾಪಸ್ ಪಡೆದು ಈ ಹಿಂದೆ ಇದ್ದಂತೆ ಆದೇಶ ಜರಿಗೊಳಿಸ ಬೇಕು. ಭದ್ರಾ ಜಲಾಶಯಕ್ಕೆ ತುಂಗಾ ಜಲಾಶಯದಿಂದ ನೀರು ತುಂಬಿ ಸುವ ಯೋಜನೆಯನ್ನು ಶೀಘ್ರವೇ ಮುಗಿಸಬೇಕು. ರೈತರ ಆರ್ಥಿಕ ಸ್ಥಿತಿ ಸುಧಾರಿಸಲು ನಬಾರ್ಡ್ ಮೂಲಕ ಕೋಆಪರೇಟಿವ್ ಸೊಸೈಟಿಗಳಿಗೆ ನೀಡುವಂತಹ ಸಾಲದ ಮೊತ್ತವನ್ನು ಕಡಿತಗೊಳಿಸಬಾರದು ಎಂಬುದು ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.
ಧರಣಿಯಲ್ಲಿ ರಾಜ್ಯರೈತ ಸಂಘದ ಅಧ್ಯಕ್ಷೀಯ ಮಂಡಳಿ ಸದಸ್ಯ ಕೆ.ಟಿ. ಗಂಗಾಧರ್, ಜಿ ಗೌರವಾಧ್ಯಕ್ಷ ಈರಣ್ಣ ಪ್ಯಾಟಿ, ಜಿಧ್ಯಕ್ಷ ಹಾಲೇಶಪ್ಪ ಗೌಡ್ರು, ಪ್ರಮುಖರಾದ ಯಶವಂತರಾವ್ ಘೋರ್ಪಡೆ, ವೀರೇಶ್, ಮಂಜುನಾಥೇಶ್ವರ ಹೆಚ್.ಎಸ್., ಮೋಹನ್ ಕುಮಾರ್, ಜಗದೀಶ್ ನಾಯಕ್, ಹಿರಣ್ಣಯ್ಯ, ಎಂ. ಗಿರೀಶ್ ಮಾಳೇನಹಳ್ಳಿ ಸೇರಿದಂತೆ ಹಲವರಿದ್ದರು.