ನೈರುತ್ಯ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ನೂರ್: ಡಿಕೆಶಿ
(ಹೊಸ ನಾವಿಕ)
ಶಿವಮೊಗ್ಗ: ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಾಂಗ್ರೆಸ್‌ನ ಹಿರಿಯ ಮುಖಂಡ ಆಯನೂರು ಮಂಜುನಾಥ್ ಅವರ ಹೆಸರನ್ನು ಅಂತಿಮ ಗೊಳಿಸ ಲಾಗಿದೆ ಎಂದು ಕೆಪಿಸಿಸಿ ರಾಜಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸುದ್ದಿಗೋಷ್ಟಿಯಲ್ಲಿ ಸ್ಪಷ್ಟ ಪಡಿಸಿzರೆ.
ನೈರುತ್ಯ ಪದವೀಧರ ಕ್ಷೇತ್ರದ ಅಧಿಕೃತ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಆಯನೂರು ಮಂಜುನಾಥ್ ಅವರ ಹೆಸರನ್ನು ಎಐಸಿಸಿಗೆ ಶಿಫಾರಸ್ಸು ಮಾಡಿದ್ದು ಅದರಂತೆ ತೀರ್ಮಾನ ಆಗಿದ್ದು, ಯಾವುದೇ ಕಾರಣಕ್ಕೂ ಅಭ್ಯರ್ಥಿ ಬದಲಾವಣೆ ಇಲ್ಲ ಎಂದು ಶಿವಕುಮಾರ್ ಸ್ಪಷ್ಟಪಡಿಸಿದರು.
ಕೆಪಿಸಿಸಿ ಅಧ್ಯಕ್ಷರ ಈ ಘೋಷಣೆ ಮೂಲಕ ನೈರುತ್ಯಪದವೀಧರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಕಳೆದ ಬಾರಿಯ ಪರಾಜಿತ ಅಭ್ಯರ್ಥಿ ಎಸ್.ಪಿ. ದಿನೇಶ್ ಅವರ ಕೊನೆಯ ಆಸೆಯೂ ಕರಗಿದಂತಾಗಿದೆ.
ಎಸ್.ಪಿ. ದಿನೇಶ್ ಅವರು ಕೆಪಿಸಿಸಿ ಅಧ್ಯಕ್ಷರಿಗೆ ಪತ್ರ ಬರೆದು ಅಭ್ಯರ್ಥಿ ಬದಲಾವಣೆಗೆ ಕೋರಿದ್ದರಲ್ಲದೆ. ಆಯನೂರು ಆಯ್ಕೆ ಸ್ವತಃ ಕೆಪಿಸಿಸಿ ಅಧ್ಯಕ್ಷರಿಗೆ ಗೊತ್ತಿಲ್ಲ ಎಂದು ಮಾಧ್ಯಮಗಳಿಗೆ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದರು. ಆದರೆ ಡಿ ಕೆ ಶಿವಕುಮಾರ್ ಇದನ್ನು ಅಲ್ಲಗೆಳೆದು ಹಾಗೇನೂ ಇಲ್ಲ ಅವರು ಕೇಳುವುದರಲ್ಲಿ ತಪ್ಪಿಲ್ಲ. ದಿನೇಶ್ ಅವರಿಗೆ ಈಗಾಗಲೇ ಎರಡು ಬಾರಿ ಅವಕಾಶ ನೀಡಿದ್ದು, ಮುಂದಿನ ದಿನಗಳಲ್ಲಿ ಅವರಿಗೆ ಉನ್ನತ ಜವಾಬ್ದಾರಿಗಳನ್ನು ನೀಡಲಾಗುವುದು. ಆದರೆ ಇದು ಎಐಸಿಸಿ ತೀರ್ಮಾನವಾಗಿದ್ದು, ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ದರಾಗಿರಬೇಕೆಂದು ಹೇಳಿದರು.