ಜಿಲ್ಲಾ ಸುದ್ದಿತಾಜಾ ಸುದ್ದಿ

ಜಗೃತರಾಗಿ ಪ್ರತಿಯೊಬ್ಬರೂ ಗಿಡಮರ ಬೆಳೆಸಿ…

Share Below Link

ಸೊರಬ: ಪರಿಸರ ನಾಶ ಭವಿಷ್ಯದಲ್ಲಿ ಮನುಕುಲಕ್ಕೆ ಹಾನಿಕಾರವಾಗಿದ್ದು, ಈಗಿನಿಂದಲೇ ಜಗೃತರಾಗಿ ಪ್ರತಿಯೊಬ್ಬರೂ ಗಿಡಮರಗಳನ್ನು ಬೆಳೆಸಲು ಮುಂದಾಗುವಂತೆ ಶಾಲಾ ಮುಖ್ಯಶಿಕ್ಷಕಿ ಗಾಯತ್ರಿ ಹೇಳಿದರು.
ತಾಲೂಕಿನ ಭಾರಂಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧೀ ಯೋಜನೆ ಬಿಸಿ ಟ್ರಸ್ಟ್ ಸೊರಬ ತಾಲ್ಲೂಕು ವತಿ ಯಿಂದ ಹಮ್ಮಿಕೊಂಡಿದ್ದ ಪರಿಸರ ಜಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬರೂ ಪರಿಸರದ ಬಗ್ಗೆ ಕಾಳಜಿ ಹೊಂದಬೇಕು. ನಮ್ಮ ಸುತ್ತಮುತ್ತಲಿನ ಪರಿಸರ ಹಸಿರಾಗಿ ದ್ದರೆ ನಮ್ಮ ಬಾಳು ಚೆನ್ನಾಗಿರಲು ಸಾಧ್ಯ ಎಂಬುದನ್ನು ಅರಿತು ಕೊಳ್ಳಬೇಕು ಎಂದರು.
ಒಕ್ಕೂಟದ ಅಧ್ಯಕ್ಷೆ ನೇತ್ರಾವತಿ ಅಧ್ಯಕ್ಷತೆ ವಹಿಸಿದ್ದರು. ಎಸ್‌ಡಿಎಂಸಿ ಸದಸ್ಯ ಜಗದೀಶ್, ವಲಯ ಮೇಲ್ವಿಚಾರಕ ಸುರೇಶ್, ಕೃಷಿ ಮೇಲ್ವಿಚಾರಕ ಜಟ್ಟಾ. ಎಂ, ಸೇವಾ ಪ್ರತಿನಿಧಿ ಶಿಲ್ಪ ಸೇರಿದಂತೆ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.