ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿ

ಭದ್ರಾವತಿ: ೨೫ ಕೋಟಿ ರೂ. ವೆಚ್ಚದ ಹೈಟೆಕ್ ಮೀನು ಮಾರುಕಟ್ಟೆಗೆ ಪ್ರಸ್ತಾವನೆ

Share Below Link

ಭದ್ರಾವತಿ : ನಗರದ ಕವಲಗುಂದಿ ಗ್ರಾಮದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಸಹಭಾಗಿತ್ವದಲ್ಲಿ ಸುಮಾರು ೨೫ ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಮೀನು ಮಾರುಕಟ್ಟೆ ನಿರ್ಮಿಸಲು ರೂಪುರೇಷೆ ಸಿದ್ಧಪಡಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮೀನುಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಷಡಾಕ್ಷರಿ ತಿಳಿಸಿzರೆ.
ಶಾಸಕರ ಕಚೇರಿಯಲ್ಲಿ ೩೩ ಬಡ ಮೀನುಗಾರರಿಗೆ ಸುಮಾರು ೩.೩೦ ಲಕ್ಷ ರೂ. ಮಲ್ಯದ ಮೀನುಗಾರಿಕಾ ಕಿಟ್‌ಗಳನ್ನು ವಿತರಿಸಲಾಯಿತು. ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ಪ್ರಯತ್ನದಿಂದ ಈ ಯೋಜನೆಗಳು ಜನರಿಗೆ ತಲುಪುತ್ತಿವೆ ಎಂದು ತಿಳಿಸಿದರು.
ಹೈಟೆಕ್ ಮಾರುಕಟ್ಟೆಯಲ್ಲಿ ಸಗಟು ಮತ್ತು ಚಿಲ್ಲರೆ ವ್ಯಾಪಾರಿ ಗಳಿಗೆ ಆಧುನಿಕ ಸೌಲಭ್ಯಗಳು, ಐಸ್ ಪ್ಲಾಂಟ್ ಸೇರಿದಂತೆ ಮೀನು ಸಂಗ್ರಹಣೆಗೆ ಉತ್ತಮ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *