ಭದ್ರಾವತಿ: ಶಿಕ್ಷಕರ ದಿನಾಚರಣೆ – ಅಭಿನಂದನೆ
ಭದ್ರಾವತಿ: ಶ್ರೀ ದೈವಜ್ಞ ಸಭಾ ಭವನದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯನ್ನು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದ ಪೂರ್ಯಾನಾಯ್ಕ ಉದ್ಘಾಟಿಸಿದರು.
ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಹಾಗು ದೇಶದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಪುಲೆ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು. ತಾಲೂಕು ಮಟ್ಟದ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ನಡೆಯಿತು. ೨೦೨೨-೨೩ನೇ ಸಾಲಿ ನಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆಯಲ್ಲಿ ಶೇ.೧೦೦ರಷ್ಟು ಫಲಿತಾಂಶ ಪಡೆದ ಶಾಲೆಗಳನ್ನು ಅಭಿನಂದಿಸಿ ಸನ್ಮಾನಿಸಲಾಯಿತು.
ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್, ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್ ಕುಮಾರ್, Poತಿಜeಡಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಬಿ.ಕೆ ಮೋಹನ್, ಲಯನ್ಸ್ ಕ್ಲಬ್ ಅಧ್ಯಕ್ಷ ಬಿ.ಎಸ್ ರಾಜೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಟಿ. ಪೃಥ್ವಿರಾಜ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಕೆ. ಬಸವರಾಜಪ್ಪ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ, ಶಿಕ್ಷಣ ಸಂಯೋಜಕರು, ಬಿ.ಆರ್.ಪಿ, ಸಿ.ಆರ್.ಪಿ ಮತ್ತು ಬಿ.ಐ.ಇ.ಆರ್.ಟಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸುಮತಿ ಕಾರಂತ್, ಕೋಕಿಲ, ತ್ರಿವೇಣಿ, ಮಾಯಮ್ಮ ಸಂಗಡಿಗರು ಪ್ರಾರ್ಥಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸ್ವಾಗತಿಸಿ ದರು. ಎಂ.ಆರ್ ರೇವಣಪ್ಪ ಸಂಗಡಿಗರು ರೈತ ಗೀತೆ ಹಾಡಿದರು. ಶಿಕ್ಷಕರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.