ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯಶಿಕ್ಷಣ

ಬಿಜೆಪಿ ಸರ್ಕಾರ ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿದೆ…

Share Below Link

ಶಿವಮೊಗ್ಗ : ಬಿಜೆಪಿ ಸರ್ಕಾರ ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಿದೆ ಎಂದು ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.


ಇಂದು ನಗರದ ನೆಹರೂ ಕ್ರೀಡಾಂಗಣ, ಅಲ್ಲಮಪ್ರಭು ಮೈದಾನ ಹಾಗೂ ಕುಂಬಾರಗುಂಡಿ ಸಿನಿಮಾ ರಸ್ತೆ, ಬಟ್ಟೆ ಮಾರುಕಟ್ಟೆಗೆ ತೆರಳಿ ಅಲ್ಲಿರುವವರನ್ನು ಸಂಪರ್ಕಿಸಿ ಮತಯಾಚಿಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ನಗರದ ನೆಹರೂ ಕ್ರೀಡಾಂ ಗಣ ಸಾಕಷ್ಟು ಅಭಿವೃದ್ದಿಯಾಗಿದೆ ಆ ಮೂಲಕ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಿದೆ ಎಂದರು.
ಗೋಪಾಳ ಬಡಾವಣೆಯಲ್ಲಿ ಒಳಾಂಗಣ ಕ್ರೀಡಾಂಗಣ ಟೆನ್ನಿಸ್ ಕೋರ್ಟ್, ಈಜುಕೊಳ ಮುಂತಾದವುದನ್ನು ನಿರ್ಮಿಸುವ ಮೂಲಕ ಆ ಭಾಗದ ಜನತೆಗೆ ಅನುಕೂಲ ಮಾಡಿಕೊಡಲಾಗಿದೆ. ವಾಜಪೇಯಿ ಬಡಾವಣೆಯಲ್ಲಿ ಹಾಕಿ ಸ್ಟೇಡಿಯಂ ಸೇರಿದಂತೆ ಕ್ರೀಡಾ ಚಟುವಟಿಕೆಗಳಿಗೆ ಅನುಕೂಲವಾ ಗುವಂತಹ ಎ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ನೆಹರೂ ಒಳಾಂಗಣ ಕ್ರೀಡಾಂಗಣವನ್ನು ಕೂಡ ಸಾಕಷ್ಟು ಅಭಿವದ್ದಿ ಪಡಿಸಲಾಗಿಯಿತು. ಇದು ಈ ಹಿಂದೆ ಇದ್ದ ಬಿಜೆಪಿ ಸರ್ಕಾರಕ್ಕೆ ಕ್ರೀಡೆಯ ಬಗ್ಗೆ ಇರುವ ಆಸಕ್ತಿಯನ್ನು ತೋರಿಸುತ್ತದೆ ಎಂದು ಹೇಳಿದರು.
ಕೇವಲ ಜಿ ಕೇಂದ್ರಕ್ಕೆ ಮಾತ್ರ ನಮ್ಮ ಸರ್ಕಾರ ಕ್ರೀಡಾಂಗಣ ಅಭಿವೃದ್ದಿ ಕಾರ್ಯವನ್ನು ಕೈಗೊಳ್ಳ ಲಿಲ್ಲ, ಶಿಕಾರಿಪುರ, ಶಿರಾಳಕೊಪ್ಪ ಸೇರಿದಂತೆ ತಾಲ್ಲೂಕು ಕೇಂದ್ರಗಳ ಲ್ಲಿಯೂ ಕೂಡ ಕ್ರೀಡಾಪಟುಗಳಿಗೆ ಉತ್ತೇಜನ ಕೊಡುವಂತಹ ಅಭಿವೃದ್ದಿ ಯೋಜನೆಗಳನ್ನು ರೂಪಿಸಿದೆ ಎಂದ ಅವರು, ನೆಹರೂ ಕ್ರೀಡಾಂಗಣವನ್ನು ಮತ್ತಷ್ಟು ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ಎಲ್ಲರೊಂದಿಗೆ ಚರ್ಚಿಸಿ ಯೋಜನೆ ಗಳನ್ನು ರೂಪಿಸಲಾಗುವುದು ಎಂದು ಹೇಳಿದರು.
ಈ ಬಾರಿಯ ಲೋಕಸಭಾ ಚುನಾವಣೆ ರಾಷ್ಟ್ರೀಯ ವಿಚಾರ ವನ್ನು ಮುಂದಿಟ್ಟುಕೊಂಡು ನq ಯುತ್ತಿರುವ ಚುನಾವಣೆಯಾಗಿದೆ. ಪ್ರತಿಯೊಬ್ಬ ಕೂಲಿ ಕಾರ್ಮಿಕ, ಆಟೋಚಾಲಕ, ಪಾನಿಪೂರಿ ಅಂಗಡಿಯವರು ಹೀಗೆ ಎ ಸಮುದಾಯದವರು ಈ ರಾಷ್ಟ್ರಕ್ಕೆ ಮೋದಿ ಬೇಕು ಎಂದು ಪಣ ತೊಟ್ಟಿzರೆ. ಈ ಹಿನ್ನೆಲೆಯಲ್ಲಿ ಶಿವಮೆಗ್ಗ ಲೋಕಸಬಾ ಕ್ಷೇತ್ರ ಮೋದಿಯವರಿಗೆ ದೊಡ್ಡ ಮಟ್ಟದ ಬೆಂಬಲವನ್ನು ಈ ಚುನಾವಣೆ ಯಲ್ಲಿ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಮೋಹನ್ ರೆಡ್ಡಿ, ಎಸ್.ಎಸ್, ಜ್ಯೋತಿ ಪ್ರಕಾಶ್, ದಿವಾಕರ್‌ಶೆಟ್ಟಿ, ರಾಜೇಶ್ ಕಾಮತ್, ಬಾಳೆಕಾಯಿ ಮೋಹನ್, ಮಹೇಶ್‌ಮೂರ್ತಿ, ವಿನೋದ್ ಕುಮಾರ್, ದೀನ್ ದಯಾಳ್, ಮಾಲತೇಶ್, ಸೋಮೇಶ್, ಭಾನುಮತಿ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *