ಬಿಜೆಪಿ-ಜೆಡಿಎಸ್ ಸಂಭ್ರಮಾಚರಣೆ…
ಶಿವಮೊಗ್ಗ : ನರೇಂದ್ರ ಮೋದಿ ಅವರು ೩ನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಶಿವಮೊಗ್ಗ ನಗರದಲ್ಲಿ ಎನ್‌ಡಿಎ ಮೈತ್ರಿ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.
ಮೋದಿ ಅವರು ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಬಿಜೆಪಿ ಕಚೇರಿಯಲ್ಲಿ ಕಣ್ತುಂಬಿಕೊಂಡ ಪಕ್ಷದ ಮುಖಂಡರು, ಕಾರ್ಯಕರ್ತರು, ಜಯಘೋಷ ಹಾಕಿದರು.
ಶಾಸಕ ಎಸ್.ಎನ್. ಚನ್ನಬಸಪ್ಪ, ಪ್ರಮುಖರಾದ ರುದ್ರೇಗೌಡ, ಆರ್.ಕೆ. ಸಿದ್ದರಾಮಣ್ಣ, ಗಿರೀಶ್ ಪಟೇಲ್, ಎನ್.ಜೆ. ರಾಜಶೇಖರ್, ಎನ್.ಜೆ. ನಾಗರಾಜ್, ಮೋಹನ್‌ರೆಡ್ಡಿ ಮತ್ತಿತರರಿದ್ದರು.
ಮತ್ತೊಂದೆಡೆ ಎನ್‌ಡಿಎ ಬೆಂಬಲದೊಂದಿಗೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷರೂ ಆದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ನೆಹರು ರಸ್ತೆಯ ಜೆಡಿಎಸ್ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರು ಸಂಭ್ರಮಿಸಿದರು. ಪಟಾಕಿ ಸಿಡಿಸಿ ಸಾರ್ವಜನಿಕರಿಗೆ ಸಿಹಿ ವಿತರಿಸಿದರು.
ಜೆಡಿಎಸ್ ಜಿಲ್ಲಾ ಕಾರ್‍ಯಾಧ್ಯಕ್ಷ ದಾದಾಪೀರ್, ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್, ಜೆಡಿಎಸ್ ಪ್ರಮುಖರಾದ ಎಸ್.ಎಲ್. ನಿಖಿಲ್, ನಾಗೇಶ್ ನಾಯ್ಕ, ದೀಪಕ್‌ಸಿಂಗ್, ಕರಿಬಸಪ್ಪ ಸೇರಿದಂತೆ ಇನ್ನಿತರರಿದ್ದರು.