ಚುನಾವಣಾ ಅಕ್ರಮ ತಡೆಗೆ ಸಿ-ವಿಜಿಲ್ ಆಪ್…
ಶಿವಮೊಗ್ಗ : ಚುನಾವಣಾ ಅಕ್ರಮಗಳನ್ನು ತಡೆದು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಯನ್ನು ನಡೆಸುವ ಉದ್ದೇಶದಿಂದ ಚುನಾವಣಾ ಆಯೋಗವು ಸಿ- ವಿಜಿಲ್ ಆಪ್ ಬಿಡುಗಡೆ ಮಾಡಿ ದ್ದು ಸಾರ್ವಜನಿಕರು ಇದನ್ನು ಬಳಕೆ ಮಾಡಿಕೊಂಡು ಪಾರದರ್ಶಕ ಚುನಾವಣೆ ನಡೆಸುವಲ್ಲಿ ಕೈಜೋ ಡಿಸಬಹುದು ಎಂದು ಜಿಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿzರೆ.
ಚುನಾವಣಾ ಸಂದರ್ಭದಲ್ಲಿ ವಿವಿಧ ಪಕ್ಷಗಳು ಮತಗಳನ್ನು ಸೆಳೆಯಲು ಮತದಾರರಿಗೆ ಹಣ, ಹೆಂಡ ಹಾಗೂ ಇತರೆ ಆಸೆ, ಆಮಿಷ ತೋರಿಸುವುದು ಸಹಜ. ಇಂತಹ ಚುನಾವಣಾ ಅಕ್ರಮಗಳ ತಡೆಗೆ ಸಿವಿಜಿಲ್ ಆಪ್ ಬಿಡುಗಡೆ ಗೊಳಿಸಲಾಗಿದ್ದು, ಸಿವಿಜಿಲ್ ಮೊಬೈಲ್ ಅಪ್ಲಿಕೇಷನ್ ಮೂಲಕ ಸಾರ್ವಜನಿಕರು ರೆಡ್ ಹ್ಯಾಂಡ್ ಆಗಿ ಅಕ್ರಮವನ್ನು ತಮ್ಮ ಮೊಬೈ ಲ್ಗಳ ಮೂಲಕ ನೇರವಾಗಿ ಆಯೋಗಕ್ಕೆ ಮಾಹಿತಿ ನೀಡಬ ಹುದು. ದೂರುದಾರರ ಹೆಸರು, ವಿಳಾಸವನ್ನು ಆಯೋಗ ಗೌಪ್ಯ ವಾಗಿ ಇಡುವ ಭರವಸೆಯನ್ನು ಕೂಡ ಆಯೋಗ ನೀಡಿದೆ.
ಚುನಾವಣಾ ಸಮಯದಲ್ಲಿ ಮತದಾರರು ನಿರ್ಧಿಷ್ಟ ವ್ಯಕ್ತಿ ಅಥವಾ ಪಕ್ಷಕ್ಕೆ ಮತ ಹಾಕುವಂತೆ ವಿವಿಧ ರೀತಿಯಲ್ಲಿ ಆಮಿಷ ನೀಡಬ ಹುದಾದ ಹಣ ವಿತರಣೆ, ಉಡು ಗೊರೆಗಳು, ಕೂಪನ್ ವಿತರಣೆ, ಮದ್ಯ ವಿತರಣೆ, ಅನುಮತಿ ಇಲ್ಲದ ಪೋಸ್ಟರ್ ಮತ್ತು ಬ್ಯಾನರ್ಗಳು, ಬಂದೂಕುಗಳ ಪ್ರದರ್ಶನ ಹಾಗೂ ಬೆದರಿಕೆ, ಆಸ್ತಿ ವಿರೂಪ, ಧಾ ರ್ಮಿಕ ಅಥವಾ ಕೋಮು ಭಾಷಣ ಗಳು/ಸಂದೇಶಗಳು, ಮತಗ ಟ್ಟೆಯ ೨೦೦ ಮೀ.ಪ್ರದೇಶದಲ್ಲಿ ಪ್ರಚಾರ, ನಿಷೇಧದ ಅವಧಿಯಲ್ಲಿ ಪ್ರಚಾರ, ಮತದಾನದ ದಿನದಂದು ವಾಹನಗಳಲ್ಲಿ ಮತದಾರರ ಸಾಗಣೆ ಮುಂತಾದ ಯಾವುದೇ ರೀತಿಯ ಪ್ರಲೋಭನೆ, ಬೆದರಿಕೆ ಹಾಗೂ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡು ಬಂದಲ್ಲಿ ಸಾರ್ವಜನಿಕರೇ ನೇರವಾಗಿ ಸಿವಿಜಿಲ್ ಆಪ್ನಲ್ಲಿ ದೂರು ದಾಖಲಿಸಬಹುದು.
ಸ್ಮಾರ್ಟ್ ಫೋನ್ ನ ಗೂಗಲ್ ಪ್ಲೇ ನಲ್ಲಿ ಸಿ- ವಿಜಿಲ್ ಆಪ್ ಡೌನ್ಲೋಡ್ ಮಾಡ್ಕೊಂಡು ಅತ್ಯಂತ ಸುಲಭವಾಗಿ ಇದನ್ನು ಬಳಸಬಹುದಾಗಿದೆ. ಅಕ್ರಮದ ಕುರಿತಾದ ಫೋಟೋ ಅಥವಾ ವಿಡಿಯೋ ಗಳನ್ನು ಅಪ್ಲೋಡ್ ಮಾಡಿ ದೂರು ನೀಡಬಹುದು. ಆಪ್ ತಮ್ಮ ಸ್ವವಿವರ ನೀಡಿಯಾ ದರೂ, ಅಥವಾ ನೀಡದೆಯೂ ದೂರು ನೀಡಬಹುದು. ಆಪ್ ನಲ್ಲಿ ತಿಳಿಸಿದ ೧೬ ರೀತಿಯ ದೂರು ಗಳ ಪೈಕಿ ಒಂದನ್ನು ಸೆಲೆಕ್ಟ್ ಮಾಡಿ ಸೆಂಡ್ ಮಾಡಬಹುದು. ದೂರು ನೀಡುವ ಸಾರ್ವಜನಿಕರ ಹೆಸರನ್ನು ಗೌಪ್ಯವಾಗಿಡಲಾ ಗುವುದು.
ಸಿವಿಜಿಲ್ನಲ್ಲಿ ದಾಖಲಾಗುವ ದೂರುಗಳನ್ನು ನಿರ್ವಹಿಸಲು ಜಿಧಿಕಾರಿ ಕಚೇರಿ ಸೇರಿದಂತೆ ಎ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳ ಕಚೇರಿ ಯಲ್ಲಿ ಪ್ರತ್ಯೇಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇವರು ಮತದಾನ ಮುಕ್ತಾಯವಾಗುವ ವರೆಗೂ ೩ ಪಾಳಿಯಲ್ಲಿ ದಿನದ ೨೪ ಗಂಟೆ ಕಾರ್ಯ ನಿರ್ವಹಿಸುವರು. ದೂರು ಬಂದ ಕೂಡಲೇ ಅವುಗ ಳನ್ನು ಪರಿಶೀಲಿಸಿ, ಸದರಿ ಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವ್ಯಾಪ್ತಿಯ ಫ್ಲೈಯಿಂಗ್ ಸ್ಕ್ವಾಡ್ ತಂಡಕ್ಕೆ ಪ್ರಕರಣದ ಸಂಪೂರ್ಣ ವಿವರ ಹಾಗೂ ಮಾಹಿತಿಯನ್ನು ರವಾನಿಸಲಾಗುತ್ತದೆ. ಈ ಮಾಹಿತಿ ಆಧಾರದಲ್ಲಿ ತಕ್ಷಣ ಸ್ಥಳಕ್ಕೆ ಭೇಟಿ ನೀಡುವ ಫ್ಲೈಯಿಂಗ್ ಸ್ಕ್ವಾಡ್ ಸಿಬ್ಬಂದಿ ದೂರು ಕುರಿತಂತೆ ಅಗತ್ಯ ಕ್ರಮ ಕೈಗೊಂಡು ಗರಿಷ್ಟ ೧೦೦ ನಿಮಿಷದ ಒಳಗೆ ದೂರನ್ನು ಇತ್ಯರ್ಥಪಡಿಸುವರು.
ಸಾರ್ವಜನಿಕರು ಸಿವಿಜಿಲ್ ಮಾತ್ರವಲ್ಲದೇ ಉಚಿತ ಸಹಾಯ ವಾಣಿ ೧೯೫೦ ಕ್ಕೆ ಸಹ ಚುನಾವಣಾ ಅಕ್ರಮಗಳ ಕುರಿತು ದೂರು ನೀಡ ಬಹುದಾಗಿದೆ ಎಂದು ತಿಳಿಸಿzರೆ.