ಕ್ರೈಸ್ತ ಮುಖಂಡ ಮರಿಯಪ್ಪನವರಿಗೆ ಸೂಡಾ ಅಧ್ಯಕ್ಷ ಸ್ಥಾನ ನೀಡಿ…
ಶಿವಮೊಗ್ಗ: ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರ (ಸೂಡಾ) ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಕ್ರೈಸ್ತ ಸಮುದಾಯದ ನಾಯಕ ಮರಿಯಪ್ಪ ಅವರನ್ನು ಪರಿಗಣಿಸಬೇಕೆಂದು ಕಾಂಗ್ರೆಸ್ ಮುಖಂಡರು ಪಕ್ಷದ ವರಿಷ್ಠರಿಗೆ ಮನವಿ ಮಾಡಿzರೆ.
ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಜ್ಯೋತಿ ಅರುಳಪ್ಪ, ಸ್ಟೆ ಮಾರ್ಟಿನ್, ಕಿರಣ್ ಫರ್ನಾಂಡಿಸ್, ಜಾನ್ ಡಿಸೋಜ, ಭಾಸ್ಕರ್ ಬಾಬು, ಸನ್ನಿ ಮಾಸಿಲಾಮಣಿ, ಸುಮತಿ, ಸಂಧ್ಯಾರಾಣಿ, ಗ್ಲಾಡಿಸ್, ರಾಬರ್ಟ್, ಫ್ರಾನ್ಸಿಸ್, ಮೇರಿ ಸೇರಿದಂತೆ ಇನ್ನಿತರ ಕ್ರೈಸ್ತ ಸಮಾಜದ ಹಿರಿಯರು ಈ ಕುರಿತು ಪಕ್ಷದ ಹಿರಿಯ ನಾಯಕರ ಗಮನ ಸೆಳೆದಿzರೆ.
ಮರಿಯಪ್ಪ ಅವರು ಕಳೆದ ಸುಮಾರು ಮೂರು ದಶಕಗಳಿಂದ ಜಿ ಕಾಂಗ್ರೆಸ್ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿ ಕೊಂಡಿದ್ದು, ಪಕ್ಷದ ಸಂಘಟನಾ ಚಟುವಟಿಕೆಗಳು ಹಾಗೂ ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿzರೆ. ಪಕ್ಷದ ಸಂಘಟನೆ ಬಲಪಡಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿzರೆ ಎಂದು ಮುಖಂಡರು ತಿಳಿಸಿzರೆ.
ಯಾವುದೇ ಚುನಾವಣೆ ಇರಲಿ ಪಕ್ಷದ ಅಭ್ಯರ್ಥಿ ಪರವಾಗಿ ಮರಿಯಪ್ಪ ಅವರು, ಹಗಲಿರುಳೂ ಕೆಲಸ ಮಾಡುವ ಮೂಲಕ ಪಕ್ಷಕ್ಕೆ ಮತ್ತು ಸಂಘಟನೆಗೆ ತಮ್ಮ ನಿಷ್ಠೆಯನ್ನು ತೋರುತ್ತಾ ಬಂದಿದ್ದಾರೆ. ಈ ಎಲ್ಲಾ ಕಾರಣಗಳಿಂದ ಮರಿಯಪ್ಪ ಅವರನ್ನು ಸೂಡಾ ಅಧ್ಯಕ್ಷ ಸ್ಥಾನಕ್ಕೆ ಪ್ರಥಮ ಆದ್ಯತೆಯಾಗಿ ಪರಿಗಣಿಸುವ ಮೂಲಕ ಕ್ರೈಸ್ತ ಸಮುದಾಯಕ್ಕೆ ನ್ಯಾಯ ಒದಗಿಸಬೇಕೆಂದು ಮನವಿ ಮಾಡಿದ್ದಾರೆ.
ಶಿವಮೊಗ್ಗ ಜಿ ಸೇರಿದಂತೆ ರಾಜ್ಯದಾದ್ಯಂತ ಕ್ರೈಸ್ತ ಸಮುದಾಯವು ದಶಕಗಳಿಂದ ಕಾಂಗ್ರೆಸ್ ಪಕ್ಷದ ಬೆಂಬಲಿಗ ಸಮುದಾಯವಾಗಿ ಗುರುತಿಸಿ ಕೊಂಡಿದೆ. ಆದರೆ ಇತ್ತೀಚಿನ ನಿಗಮ- ಮಂಡಳಿಗಳ ನೇಮಕಾತಿ ಯಲ್ಲಿ ಕ್ರೈಸ್ತ ಸಮುದಾಯಕ್ಕೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ದೊರೆತಿಲ್ಲ ಎಂಬ ಅಸಮಾಧಾನ ಸಮುದಾಯದ ಮುಖಂಡರಲ್ಲಿ ವ್ಯಕ್ತವಾಗಿದೆ.
ಕಾಂಗ್ರೆಸ್ ಪಕ್ಷವು ಕ್ರೈಸ್ತ ಸಮುದಾಯವನ್ನು ಕೇವಲ ಮತಬ್ಯಾಂಕ್ ದೃಷ್ಟಿಯಿಂದ ನೋಡದೆ, ಪಕ್ಷಕ್ಕಾಗಿ ದೀರ್ಘಕಾಲ ಸೇವೆ ಸಲ್ಲಿಸಿರುವ ಅರ್ಹ ಹಾಗೂ ಸಮರ್ಥ ನಾಯಕರನ್ನು ಗುರುತಿಸಿ ಸೂಕ್ತ ಸ್ಥಾನಮಾನ ನೀಡಬೇಕು. ಈ ಹಿನ್ನೆಲೆಯಲ್ಲಿ ಮರಿಯಪ್ಪ ಅವರನ್ನು ಸೂಡಾ ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸುವ ಮೂಲಕ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಕಾಂಗ್ರೆಸ್ ಮುಖಂಡರು ಒಕ್ಕೊರಲಿನಿಂದ ಒತ್ತಾಯಿಸಿzರೆ.
ಸೇವೆಯಿಂದ ಜನಮೆಚ್ಚುಗೆ ಗಳಿಸಿದ ಮರಿಯಪ್ಪ…
ಪ್ರಥಮ ದರ್ಜೆ ಗುತ್ತಿಗೆದಾರರಾಗಿ ಮಹಾನಗರ ಪಾಲಿಕೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಿಷ್ಠೆ ಹಾಗೂ ಪಾರದರ್ಶಕತೆಯಿಂದ ಪೂರ್ಣಗೊಳಿಸಿರುವ ಮರಿಯಪ್ಪ ಅವರು, ಸಾರ್ವಜನಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿಯೂ ತಮ್ಮದೇ ಆದ ಸೇವಾ ಛಾಪು ಮೂಡಿಸಿzರೆ.
ಮಹಾನಗರ ಪಾಲಿಕೆಯ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿರುವ ಅವರು, ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡುವ ಮೂಲಕ ಉತ್ತಮ ಅನುಭವ ಹೊಂದಿzರೆ. ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶ ನೀಡದೆ ಕಾರ್ಯನಿರ್ವಹಿಸಿರುವುದು ಅವರ ವೃತ್ತಿಜೀವನದ ಪ್ರಮುಖ ಹೆಗ್ಗಳಿಕೆಯಾಗಿದೆ.
ಜಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವಲ್ಲಿಯೂ ಮರಿಯಪ್ಪ ಅವರು ಪ್ರಮುಖ ಪಾತ್ರ ವಹಿಸಿzರೆ. ಕಾರ್ಯಕರ್ತರನ್ನು ಸಂಘಟಿಸಿ, ಪಕ್ಷದ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಮುನ್ನಡೆಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿzರೆ.
ಇದರೊಂದಿಗೆ ಲಾರಿ ಮಾಲೀಕರ ಸಂಘದ ಸದಸ್ಯರಾಗಿಯೂ ಸೇವೆ ಸಲ್ಲಿಸುತ್ತಿರುವ ಅವರು, ನಗರದ ವಿವಿಧ ಸಾಮಾಜಿಕ ಹಾಗೂ ಧಾರ್ಮಿಕ ಸಂಸ್ಥೆಗಳ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿzರೆ.
ಶಿವಮೊಗ್ಗದ ಐತಿಹಾಸಿಕ ಸೇಕ್ರೆಡ್ ಹಾರ್ಟ್ ಚರ್ಚ್‌ನ ವಿವಿಧ ಸಮಿತಿಗಳಲ್ಲಿ ಮುಂಚೂಣಿ ಜವಾಬ್ದಾರಿ ವಹಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿರುವ ಮರಿಯಪ್ಪ ಅವರು, ಸಮುದಾಯದೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡಿzರೆ. ಸಾಮಾಜಿಕ ಕಾಳಜಿ, ಸಂಘಟನಾ ಸಾಮರ್ಥ್ಯ ಹಾಗೂ ಸಾರ್ವಜನಿಕ ಸೇವೆಯ ಮೂಲಕ ವಿವಿಧ ವರ್ಗಗಳ ವಿಶ್ವಾಸ ಗಳಿಸಿರುವುದು ಅವರ ವಿಶೇಷತೆಯಾಗಿದೆ.
