ಕ್ರೀಡೆಜಿಲ್ಲಾ ಸುದ್ದಿತಾಜಾ ಸುದ್ದಿ

ಪೌರ ಕಾರ್ಮಿಕರ ದಿನಾಚರಣೆ: ಇಂದು ಮತ್ತು ನಾಳೆ ಕ್ರಿಕೆಟ್ ಟೂರ್ನಿ…

Share Below Link

ಶಿವಮೊಗ್ಗ : ನಗರದ ಕೃಷಿ ಕಾಲೇಜು ಕ್ರೀಡಾಂಗಣದಲ್ಲಿ ಮಹಾನಗರ ಪಾಲಿಕೆ ನೌಕರರ ಸಂಘದಿಂದ ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಇಂದು ಮತ್ತು ನಾಳೆ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಿದ್ದು ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಪಂದ್ಯಾವಳಿ ಉದ್ಘಾಟಿಸಿದರು.
ಈ ಪಂದ್ಯಾವಳಿಯಲ್ಲಿ ನಗರ ನೀರು ಸರಬರಾಜು ಮಂಡಳಿಯ ಕಾರ್ಮಿಕರು, ಲೋಡರ್ಸ್, ಅನ್ ಲೋಡರ್ಸ್, ಸ್ವಚ್ಛತಾ ಕಾರ್ಮಿಕರು ಮತ್ತು ಆಡಳಿತ ಸಿಬ್ಬಂದಿ ಸೇರಿದಂತೆ ಒಟ್ಟೂ ೮ ತಂಡಗಳು ಭಾಗವಹಿಸಿ ದ್ದವು. ಪ್ರತಿ ತಂಡವು ತಲಾ ಆರು ಓವರಿನ್ ಮ್ಯಾಚ್ ಇದಾಗಿದ್ದು ಕ್ರೀಡಾ ಪಟುಗಳು ಸಂಭ್ರಮದಿಂದ ಭಾಗವಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಚನ್ನಬಸಪ್ಪ, ಪೌರ ಕಾರ್ಮಿಕರು ಸಂಭ್ರಮದಿಂದ ಈ ಕ್ರೀಡಾಕೂಟದಲ್ಲಿ ಭಾಗವಹಿಸಿ zರೆ. ಪ್ರತಿನಿತ್ಯ ಒತ್ತಡದ ನಡುವೆಯೂ ಕೆಲಸ ನಿರ್ವಹಿಸುವ ಪೌರ ಕಾರ್ಮಿಕರಿಗೆ ಪೌರ ಕಾರ್ಮಿಕ ದಿನಾಚರಣೆಯ ಶುಭಾಶಯವನ್ನು ಕೋರಿದರು.
ಕಾರ್ಯಕ್ರಮದಲ್ಲಿ ಕೃಷಿ ಮಹಾ ವಿದ್ಯಾಲಯದ ಡೀನ್ ಡಾ.ತಿಪ್ಪೇಶ್, ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಎನ್. ಗೋವಿಂದ, ಪಾಲಿಕೆ ಅಧಿಕಾರಿ ಅನುಪಮಾ ಸೇರಿದಂತೆ ಸಂಘದ ಪದಾಧಿಕಾರಿಗಳು, ನಿರ್ದೇಶಕರು ಉಪಸ್ಥಿತರಿದ್ದರು.