ಕುಂಸಿ ಉರ್ದು ಹಿರಿಯ ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿ…
ಶಿವಮೊಗ್ಗ : ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾ ಧಿಕಾರಿಗಳ ಕಚೇರಿ, ಶಿವಮೊಗ್ಗ ಹಾಗೂ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ, ಕುಂಸಿ, ಇವರ ಸಂಯುಕ್ತ ಆಶ್ರಯದಲ್ಲಿ ಶಿವಮೊಗ್ಗ ದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ, ಸರ್ಕಾ ರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ, ಕುಂಸಿ ಬಾಲಕ, ಬಾಲಕಿ ಯರು ಭಾಗವಹಿಸಿ ಉತ್ತಮ ಆಟದ ಪ್ರದರ್ಶನ ನೀಡಿ, ಬಾಲಕರ ವಿಭಾಗದಲ್ಲಿ ಖೋ-ಖೋ ಮತ್ತು ಕಬ್ಬಡಿ ಯಲ್ಲಿ ಪ್ರಥಮ ಸ್ಥಾನ ಪಡೆದರೆ, ಬಾಲಕಿಯರ ವಿಭಾಗದ ಲ್ಲಿಯೂ ಸಹ ಖೋ-ಖೋ ಮತ್ತು ಕಬಡ್ಡಿಯಲ್ಲಿ ಉತ್ತಮ ದಾಳಿ ಅಷ್ಟೇ ರಕ್ಷಣಾತ್ಮಕ ಆಟದ ಪ್ರದರ್ಶನ ನೀಡಿ, ಶಾಲೆಗೆ ಸಮಗ್ರ ಪ್ರಶಸ್ತಿ ಯನ್ನು ತಂದು ಕೊಟ್ಟಿರುತ್ತಾರೆ.
ದೈಹಿಕ ಶಿಕ್ಷಣ ಶಿಕ್ಷಕ ರವಿ ಕುಮಾರ್ ಅವರಲ್ಲಿ ತರಬೇತಿ ಯ ನ್ನು ಪಡೆಯುತ್ತಿರುವುದು ಮತ್ತೊಂ ದು ವಿಶೇಷ. ಮಕ್ಕಳ ಮುಂದಿನ ಕ್ರೀಡಾ ಜೀವನ ಯಶಸ್ವಿ ಯಾಗಲೆಂ ದು ಎಸ್‌ಡಿಎಂಸಿ ಅಧ್ಯಕ್ಷರು, ಮತ್ತು ಸದಸ್ಯರುಗಳು, ಮುಖ್ಯ ಶಿಕ್ಷಕರು, ಶಿಕ್ಷಕ ವೃಂದದವರು,ಊರಿನ ಗ್ರಾಮಸ್ಥರು ಶುಭ ಹಾರಿಸಿzರೆ.

