ಬಿಜೆಪಿ ಕಛೇರಿಗೆ ಕಾಂಗ್ರೆಸ್ ಮುತ್ತಿಗೆ ಯತ್ನ; ಪ್ರತಿಭಟನಾಕಾರರ ಬಂಧನ…
ಶಿವಮೊಗ್ಗ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪಕ್ಷದ ರಾಷ್ಟ್ರೀಯ ನಾಯಕರ ಮೇಲೆ ಇಡಿ ಮೇಲೆ ಪ್ರಭಾವ ಬೀರಿ ಅನಗತ್ಯ ಆರೋಪ ಸೃಷ್ಟಿಸಿರುವುದು ಹಾಗೂ ಮನ್ರೇಗಾ ಹೆಸರು ಬದಲಾವಣೆ ಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಇಂದು ಬೆಳಗ್ಗೆ ಬಿಜೆಪಿ ಕಛೇರಿಗೆ ಮುತ್ತಿಗೆ ಹಾಕಲು ಯತ್ನಿಸಿ ಬಂಧನಕ್ಕೆ ಒಳಗಾದರು.
ಪತ್ರಿಭಟನಾಕಾರರು ಜೈಲ್ ಸರ್ಕಲ್ನಲ್ಲಿ ಪ್ರತಿಭಟನೆ ನಡೆಸಿ ಬಳಿಕ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ಬೃಹತ್ ಸಂಖ್ಯೆ ಯಲ್ಲಿ ಪ್ರತಿಭಟನಾ ಮೆರವಣಿಗೆ ಯಲ್ಲಿ ತೆರಳಿ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣ ದಲ್ಲಿ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಇಡಿ ದಾಖಲಿಸಿದ್ದ ಅಕ್ರಮ ಹಣ ವರ್ಗಾವಣೆಯ ದೂರು ಸ್ವೀಕರಿಸಲು ದೆಹಲಿಯ ನ್ಯಾಯಾಲಯವೇ ನಿರಾಕರಿಸಿದೆ. ಇದನ್ನು ಕಾಂಗ್ರೆಸ್ ಸ್ವಾಗತಿಸುತ್ತದೆ. ಆದರೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ರಾಜಕೀಯ ಕಾರಣಕ್ಕಾಗಿ ನಮ್ಮ ನಾಯಕರ ಮೇಲೆ ಪ್ರಕರಣ ದಾಖಲಿಸಿರುವುದು ಖಂಡನೀಯ. ಬಿಜೆಪಿ ಉzಶಪೂರ್ವಕವಾಗಿ ಗಾಂಧಿ ಕುಟುಂಬಕ್ಕೆ ಕಿರುಕುಳ ನೀಡುವುದು ಮತ್ತು ವಿಪಕ್ಷಗಳನ್ನು ಗುರಿಯಾಗಿಸುವುದು ಇದು ಸೇಡಿನ ಪ್ರಕರಣವಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ಕೇಂದ್ರ ಸರ್ಕಾರ ತನಿಖಾ ಸಂಸ್ಥೆ ಗಳನ್ನು ರಾಜಕೀಯ ದುರುzಶ ಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ. ವಿರೋಧ ಪಕ್ಷಗಳನ್ನು ನಿರಂತರವಾಗಿ ಗುರಿಯನ್ನಾಗಿಸಿಕೊಳ್ಳುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ನಮ್ಮ ಆಕ್ರೋಶವಿದ್ದು ಇದನ್ನು ನಾವು ಬಯಲು ಮಾಡುತ್ತೇವೆ ಎಂದು ಪ್ರತಿಭಟನಾಕಾರರು ತಿಳಿಸಿದರು. ಅಲ್ಲದೆ ನರೇಗಾ ಯೋಜನೆಯ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಲು ಹೊರಟಿರು ವುದು ಸರಿಯಲ್ಲ, ಇದು ಮಹಾತ್ಮಾ ಗಾಂಧೀಜಿಯವರ ಬಗೆಗಿನ ತಮ್ಮ ದ್ವೇಷವನ್ನು ತಾವೇ ಬಯಲು ಮಾಡಿಕೊಂಡಂತೆ ಆಗುತ್ತದೆ. ಯಾವುದೇ ಕಾರಣಕ್ಕೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆಯ ಹೆಸರನ್ನು ಮತ್ತು ಸ್ವರೂಪ ಬದಲಾಯಿಸಬಾರದು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಎಂಎಡಿಬಿ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ, ಜಿ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ಉಪಾಧ್ಯಕ್ಷ ಎಸ್.ಟಿ. ಚಂದ್ರಶೇಖರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲೀಂಪಾಷಾ, ಶಿವಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್. ರಮೇಶ್, ಹಿಂದುಳಿದ ವರ್ಗಗಳ ಜಿಧ್ಯಕ್ಷ ರಮೇಶ್ ಶಂಕರಘಟ್ಟ, ರಾಜ್ಯ ಸಂಚಾಲಕ ಜಿ.ಡಿ. ಮಂಜುನಾಥ್, ಜವಳಿ ನಿಗಮದ ಅಧ್ಯಕ್ಷ ಚೇತನ್, ಆಪ್ಕಾಪ್ಸ್ ಅಧ್ಯಕ್ಷ ವಿಜಯಕುಮಾರ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್.ಕೆ. ಮರಿಯಪ್ಪ, ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಸೇರಿದಂತೆ ಹಲವರಿದ್ದರು.



