ಚಾಲಕರು-ಪ್ರಯಾಣಿಕರ ಅನುಕೂಲಕ್ಕಾಗಿ ಸೂಡಾದಿಂದ ಆಟೋ ನಿಲ್ದಾಣಗಳ ನಿರ್ಮಾಣ…
ಶಿವಮೊಗ್ಗ: ಆಟೋ ಚಾಲಕರು ಮತ್ತು ಪ್ರಯಾಣಿಕರ ಹಿತದೃಷ್ಟಿಯಿಂದ ನಗರದ ಹಲವೆಡೆ ಸೂಡಾದಿಂದ ಆಟೋ ನಿಲ್ದಾಣ ನಿರ್ಮಿಸಲಾಗುತ್ತಿದೆ ಎಂದು ಸೂಡಾ ಅಧ್ಯಕ್ಷ ಹೆಚ್ ಎಸ್ ಸುಂದರೇಶ್ ತಿಳಿಸಿದರು.
ನಗರದ ತುಂಗಾನಗರ ಪ್ರಾ.ಆ. ಕೇಂದ್ರ, ಎನ್‌ಹೆಚ್ ಆಸ್ಪತ್ರೆ ಮತ್ತು ಶಂಕರ ಕಣ್ಣಿನ ಆಸ್ಪತ್ರೆ ಎದುರಿನಲ್ಲಿ ನೂತನವಾಗಿ ಆಟೋ ನಿಲ್ದಾಣ ಹಾಗೂ ಗಾಡಿಕೊಪ್ಪದ ಸಿದ್ದಪ್ಪ ಬಡಾವಣೆಯಲ್ಲಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ತುಂಗಾನಗರದ ಪ್ರಾ.ಆರೋಗ್ಯ ಕೇಂದ್ರದ ಬಳಿ, ಹರಕೆರೆಯ ಶಂಕರ ಕಣ್ಣಿನ ಆಸ್ಪತ್ರೆ ಮತ್ತು ಎನ್ ಹೆಚ್ ಆಸ್ಪತ್ರೆ ಎದುರು ಆಟೋ ನಿಲ್ದಾಣ ಅತ್ಯವಶ್ಯಕವಾಗಿ ಬೇಕಾಗಿತ್ತು. ಬಿಸಿಲಿನ ಬೇಗೆಗೆ ಚಾಲಕರಿಗೆ ಹಾಗೂ ಪ್ರಯಾಣಿಕರಿಗೆ ತುಂಬಾ ತೊಂದರೆ ಯಾಗುತ್ತಿದ್ದು, ಆಟೋ ನಿಲ್ದಾಣ ದಿಂದ ಅನುಕೂಲವಾಗಲಿದ್ದು ಈ ಮೂರು ಸ್ಥಳಗಳಲ್ಲಿ ತಲಾ ರೂ.೨೫ ಲಕ್ಷ ವೆಚ್ಚದಲ್ಲಿ ಆಟೋ ನಿಲ್ದಾಣ ನಿರ್ಮಿಸಲಾಗುವುದು ಎಂದರು.
ಗಾಡಿಕೊಪ್ಪದಲ್ಲಿರುವ ಸಿದ್ದಪ್ಪ ಬಡಾವಣೆಯಲ್ಲಿ ರೂ.೨೫ ಲಕ್ಷ ವೆಚ್ಚದಲ್ಲಿ ನಿವಾಸಿಗಳ ಮನೆ ಬಳಿ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಲಾಗಿದ್ದು, ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ ನಗರದಲ್ಲಿ ಮೂಲಭೂತ ಸೌಕರ್ಯ ಅಭಿವೃದ್ದಿಪಡಿಸ ಲಾಗುತ್ತಿದೆ ಎಂದರು.

ನಗರನ್ನು ಹಸಿರಾಗಿಡಲು ಮತ್ತು ಜನರ ಆರೋಗ್ಯ ದೃಷ್ಟಿ ಯಿಂದ ಈಗಾಗಲೇ ೫೦ ಪಾರ್ಕ್ ನಿರ್ಮಾಣ ಮಾಡಲಾಗಿದೆ. ಪ್ರಸ್ತುತ ೫೦ ಪಾರ್ಕ್‌ಗಳನ್ನು ಅಭಿವೃದ್ದಿ ಪಡಿಸಿ, ಉದ್ಘಾಟನೆ ಮಾಡಲಾ ಗುತ್ತಿದೆ. ನಮ್ಮ ನಗರವನ್ನು ನಾವು ಸುಂದರವಾಗಿ ಮತ್ತು ಹಸಿರಾಗಿ ಇಟ್ಟುಕೊಳ್ಳಬೇಕು. ನಿವಾಸಿಗಳು ತಮ್ಮ ಮನೆ ಸುತ್ತಮುತ್ತ ಗಿಡಗಳನ್ನು ನೆಡಬೇಕು ಎಂದರು.
ಶಿವಮೊಗ್ಗ-ಭದ್ರಾವತಿ ವ್ಯಾಪ್ತಿ ಯಲ್ಲಿ ರೂ.೫೦ ಕೋಟಿ ವೆಚ್ಚದಲ್ಲಿ ೨೨ ಕೆರೆಗಳನ್ನು ಹೈಟೆಕ್ ಆಗಿ ಅಭಿವೃದ್ದಿಪಡಿಸಲಾಗುವುದು. ೧೨ ಕೆರೆ ಅಭಿವೃದ್ದಿಗೆ ಈಗಾಗಲೇ ಟೆಂಡರ್ ಆಗಿದೆ. ವಾಕಿಂಗ್ ಪಾಥ್, ಮಕ್ಕಳ ಆಟಿಕೆಗಳು, ಫೆನ್ಸ್, ಲೈಟ್, ಐಲ್ಯಾಂಡ್ ನಿರ್ಮಾಣ ಸೇರಿದಂತೆ ಅತ್ಯಂತ ಸುಂದರವಾಗಿ ಕೆರೆಗಳನ್ನು ಅಭಿವೃದ್ದಿಸಲು ಯೋಜನೆ ರೂಪಿಸಲಾಗಿದೆ. ನಗರ ವ್ಯಾಪ್ತಿಯಲ್ಲಿ ಸುಮಾರು ೧೦೦೦ ಅಪಾರ್ಟ್‌ಮೆಂಟ್ ನಿರ್ಮಾಣ ಮಾಡಿ ಜನರಿಗೆ ನೀಡಲು ಈಗಾಗಲೇ ಅಂದಾಜು ಪಟ್ಟಿ ತಯಾರಿಸಿ ಸರ್ಕಾರಕ್ಕೆ ಕಳುಹಿಸ ಲಾಗಿದೆ. ಹಾಗೂ ಗೋಪಿಶೆಟ್ಟಿ ಕೊಪ್ಪದಲ್ಲಿ ನಿವೇಶನ ಮಾಡಲು ಕ್ರಮ ವಹಿಸಲಾಗುತ್ತಿದೆ ಎಂದರು.
ಸೂಡಾ ಆಯುಕ್ತ ವಿಶ್ವನಾಥ ಮುದಜ್ಜಿ, ಎಇಇ ಬಸವರಾಪ್ಪ, ಎಇಇ ಗಂಗಾಧರಸ್ವಾಮಿ, ಬಡಾವಣೆ ನಿವಾಸಿಗಳು, ಆಟೋಚಾಲಕರು ಸೇರಿದಂತೆ ಇನ್ನಿತರರು ಹಾಜರಿದ್ದರು.

