ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿದೇಶ

ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ತಿಮಿಂಗಿಲಗಳು..

Share Below Link

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಮುಂದು ವರಿದಿದೆ. ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಎನ್‌ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಇತ್ತ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿಮಾಡಿದ್ದಾರೆ.
ಇಂದು ಬೆಳಗ್ಗೆ ಶಿವಮೊಗ್ಗ, ಬೆಂಗಳೂರು, ತುಮಕೂರು ಹಾಗೂ ಹಾವೇರಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗ ಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಸರ್ಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಮಾಡಿ ದ್ದಾರೆ. ಸರ್ಕಾರಿ ಅಧಿಕಾರಿಗಳು ಆದಾಯ ಮೀರಿ ಅಧಿಕ ಆಸ್ತಿ ಗಳಿಸಿದ ಆರೋಪದ ಮೇಲೆ ದಾಳಿ ನಡೆದಿದ್ದು, ಆದಾಯದ ಮೂಲ, ಆಸ್ತಿ ಪತ್ರಗಳು, ಬ್ಯಾಂಕ್ ವಿವರಗಳ ಬಗ್ಗೆ ಲೋಕಾಯುಕ್ತರ ಅಧಿಕಾರಿ ಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಶಿವಮೊಗ್ಗದಲ್ಲಿ ಶರಾವತಿ ನಗರದ ಚರ್ಚ್ ಹತ್ತಿರುವಿರುವ ಅಪ್ಪರ್ ತುಂಗ ಇಲಾಖೆಯ ಪ್ರಶಾ ಂತ್ ಮನೆ ಮತ್ತು ಭದ್ರಾವತಿ ಯಲ್ಲಿರುವ ಇವರ ತಂದೆಯ ಮನೆಯ ಮೇಲೆ ಹಾಗೂ ಶಿಕಾರಿಪು ರದ ಪಂಚಾಯತ್ ರಾಜ್ ಇಂಜಿ ಯರ್ ಶಂಕರ್ ನಾಯ್ಕ್ ಮನೆಯ ಮೇಲೆ ದಾಳಿ ನಡೆಸಲಾಗಿದೆ.


ಅಧಿಕ ಹಣ ಗಳಿಕೆ ಆರೋಪದ ಅಡಿಯಲ್ಲಿ ಈ ದಾಳಿ ನಡೆದಿದೆ. ಪ್ರಶಾಂತ್ ಅವರ ಕಚೇರಿ, ಅಪಾ ರ್ಟ್ ಮೆಂಟ್ ಮತ್ತು ಸಂಬಂಧಿಕರ ಮನೆಗಳ ಮೇಲೂ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ. ಶಿವ ಮೊಗ್ಗದಲ್ಲಿ ಲೋಕಾಯುಕ್ತ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯ್ಕ್ ನೇತೃತ್ವದಲ್ಲಿ ದಾಳಿ ನಡೆದಿದೆ.
ಶಿವಮೊಗ್ಗ ಮತ್ತು ಭದ್ರಾವತಿ ಯಲ್ಲಿರುವ ಪ್ರಶಾಂತ್ ಅವರ ಮನೆ, ಸಂಬಂಧಿಕರು ಫಾರಂ ಹೌಸ್, ತಂದೆಯವರ ಮನೆ ಸೇರಿದಂತೆ ಐದು ಕಡೆ ಮತ್ತು ಶಂಕರ್ ನಾಯ್ಕ್ ಅವರ ಮನೆ, ಫಾರಂ ಹೌಸ್ ಮತ್ತು ಕಚೇರಿ ಸೇರಿದಂತೆ ಮೂರು ಕಡೆಯಲ್ಲಿ ದಾಳಿ ನಡೆಯುತ್ತಿದೆ.
ಶಿವಮೊಗ್ಗದಲ್ಲಿ ಬೆಳ್ಳಂಬೆಳಿಗ್ಗೆ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಬಗೆದಷ್ಟು ಸಂಪತ್ತುಗಳು ದೊರೆ ಯುತ್ತಿವೆ. ಅಪ್ಪರ್‌ತುಂಗಾ ಎಕ್ಸಿ ಕ್ಯೂಟಿವ್ ಇಂಜಿನಿಯರ್ ಪ್ರಶಾಂ ತ್ ಅವರ ಮನೆ ಮೇಲೆ ನಡೆದ ದಾಳಿಯಲ್ಲಿ ೨೫ ಲಕ್ಷ ರೂ. ನಗದು, ೩.೫ ಕೆ.ಜಿ. ಚಿನ್ನ, ೨೪ ಕೆ.ಜಿ. ಬೆಳ್ಳಿ, ೫೦ ವಿದೇಶಿ ಮದ್ಯದ ಬಾಟಲ್, ೩೦೦ ಶೂಶ್ ಪತ್ತೆಯಾಗಿದೆ. ಇಷ್ಟು ಮಾತ್ರವೇ ಅಲ್ಲ, ಬೆಂಗಳೂರಿನಲ್ಲಿ ೨ ಸೈಟ್, ೬ ಎಕರೆ ಕೃಷಿ ಜಮೀನು ಹೊಂದಿದ್ದು ಲೋಕಾಯುಕ್ತ ಪೊಲೀಸರು ಇವುಗಳನ್ನು ಸೀಜ್ ಮಾಡಿದ್ದಾರೆ. ಅದೇ ರೀತಿ ಶಿಕಾರಿ ಪುರದಲ್ಲಿ ಪಂಚಾಯತ್‌ರಾಜ್ ಇಂಜಿನಿಯರ್ ಆಗಿರುವ ಶಂಕರ್ ನಾಯ್ಕ ಅವರ ಮನೆ ಮೇಲೆ ನಡೆದ ದಾಳಿಯಲ್ಲಿ ೩೫೦ ಗ್ರಾಂ ಚಿನ್ನಾ ಭರಣ, ೩ ಕೆ.ಜಿ. ಬೆಳ್ಳಿ ದೊರೆ ತಿದ್ದು, ಇದರೊಂದಿಗೆ ೧೦ ಎಕರೆ ಕೃಷಿ ಜಮೀನು ಹೊಂದಿರುವುದು ಬೆಳಕಿಗೆ ಬಂದಿದೆ.
ತುಮಕೂರಿನ ಕೆಐಎಡಿಬಿ ಅಧಿಕಾರಿ ನರಸಿಂಹಮೂರ್ತಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿ ಗಳು ದಾಳಿ ಮಾಡಿದ್ದಾರೆ. ನಗರದ ಆರ್.ಟಿ. ನಗರದಲ್ಲಿ ಇರುವ ಮನೆ ಮೇಲೆ ಲೋಕಾ ಯುಕ್ತ ಡಿಎಸ್‌ಪಿ ಗಳಾದ ಮಂಜುನಾಥ್ ಹಾಗೂ ಹರೀಶ್ ತಂಡ ದಾಳಿ ಮಾಡಿದ್ದು, ದಾಖಲೆ ಗಳನ್ನು ವಶಪಡಿಸಿಕೊ ಂಡು ಪರಿಶೀಲನೆ ನಡೆಸುತ್ತಿದೆ.


ಹಾವೇರಿಯ ನಿರ್ಮಿತಿ ಕೇಂದ್ರದ ಇಂಜಿನಿಯರ್ ವಾಗೀಶ್ ಶೆಟ್ಟರ್ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ರಾಣೆಬೆನ್ನೂರು ನಗರದ ನಿವಾಸ ಹಾಗೂ ಹಾವೇರಿಯ ದೇವಗರಿ ಯ ಡಿಸಿ ಕಚೇರಿ ಬಳಿ ಇರುವ ನಿರ್ಮಿತಿ ಕೇಂದ್ರ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನ ಎರಡು ಕಡೆ ಇಂದು ಬೆಳ್ಳಂಬೆಳಗ್ಗೆ ಲೋಕಾ ಯುಕ್ತ ಅಧಿಕಾರಿಗಳು ಮಾಡಿ ದ್ದಾರೆ. ನಗರದ ಬಸವೇಶ್ವರನಗರ ದಲ್ಲಿರುವ ಬೆಸ್ಕಾ ಟೆಕ್ನಿಕಲ್ ಡೈರೆಕ್ಟರ್ ರಮೇಶ್ ಮನೆ ಮೇಲೆ ದಾಳಿಯಾಗಿದೆ. ಇನ್ನು ಇಂಡಸ್ಟ್ರೀಸ್ ಆಂಡ್ ಬಾಯ್ಲರ್ ಇಲಾಖೆ ಅಧಿಕಾರಿಯೊಬ್ಬರ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದ, ಕಡತಗಳ ಪರಿಶೀಲನೆ ನಡೆಸಿದ್ದಾರೆ.
ಮೈಸೂರಿನ ನಿವೇದಿತಾ ನಗರ ಸಂಕ್ರಾಂತಿ ವೃತ್ತದ ಬಳಿ ಇರುವ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿ ಮಹೇಶ್ ಕುಮಾರ್ ನಿವಾಸದ ಮೇಲೆ ದಾಳಿಯಾಗಿದೆ. ತೋಟದ ಮನೆ ಸೇರಿ ಹಲವು ಕಡೆ ಒಟ್ಟು ೧೩ ಅಧಿಕಾರಿಗಳ ತಂಡ ಏಕಕಾಲಕ್ಕೆ ದಾಳಿ ಮಾಡಿ ಕಾರ್ಯಾಚರಣೆ ನಡೆಸಿದೆ.
ಬೀದರ್ ಭೂಸೇನಾ ನಿಗಮದ ಅಧಿಕಾರಿ ಮನೆ ಮೇಲೂ ಲೋಕಾ ಯುಕ್ತ ಅಧಿಕಾರಿಗಳು ದಾಳಿ ಮಾಡಿ ದ್ದಾರೆ. ಬೀದರ್ ಹಾಗೂ ಚಿಟಗು ಪ್ಪಾ ತಾಲೂಕಿನ ಮುತ್ತಂಗಿ ಗ್ರಾಮದ ಫಾರ್ಮ್ ಹೌಸ್ ಮೇ ಲೂ ಲೋಕಾಯುಕ್ತ ಡಿವೈಎಸ್ಪಿ ಓಲೆಕಾರ ನೇತೃತ್ವದಲ್ಲಿ ದಾಳಿ ದಾಳಿಯಾಗಿದೆ. ಬೀದರ್ ಹಾಗೂ ಚಿಟಗುಪ್ಪಾ ತಾಲೂಕಿನ ಮುತ್ತಂಗಿ ಗ್ರಾಮದ ಫಾರ್ಮ್ ಹೌಸ್ ನಲ್ಲೂ ಪರಿಶೀಲನೆ ನಡೆಸಿದ್ದಾರೆ.