ಫಲಾನುಭವಿಗಳಿಗೆ ಯೋಜನೆಗಳ ಸೌಲಭ್ಯ ತಲುಪಿಸಿ : ಎಂ.ರಾಮಪ್ಪ
ಶಿವಮೊಗ್ಗ: ಭೋವಿ ಅಭಿವೃದ್ಧಿ ನಿಗಮ, ಜಿಪಂ ವ್ಯಾಪ್ತಿಗೊಳಪಡುವ ವಿವಿಧ ಇಲಾಖೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳಲ್ಲಿ ರೂಪಿಸಿ ಅನುಷ್ಠಾನಗೊಳಿಸಲಾಗಿರುವ ವಿವಿಧ ಯೋಜನೆಗಳ ಸೌಲಭ್ಯ ಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ವಿಶೇಷ ಕ್ರಮ ಕೈಗೊಳ್ಳುವಂತೆ ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ ಎಂ. ಅವರು ಹೇಳಿದರು.
ಜಿಪಂ ಸಭಾಂಗಣದಲ್ಲಿಂದು ಏರ್ಪಡಿಸಿದ್ದ ಬೋವಿ ಅಭಿವೃದ್ಧಿ ನಿಗಮದ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮುದಾಯದ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸುವಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವರ್ತನೆಯನ್ನು ಸಹಿಸಿಕೊಳ್ಳಲಾಗುವುದಿಲ್ಲ ಎಂದವರು ನುಡಿದರು.

ರಾಜ್ಯದಲ್ಲಿನ ಬೋವಿ ಜನಾಂಗದ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ೩೦೦ಕೋಟಿ ರೂ.ಗಳನ್ನು ಪ್ರಸಕ್ತ ಬಜೆಟ್‌ನಲ್ಲಿ ಕಾಯ್ದಿರಿಸುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಳ್ಳಲಾಗಿದೆ, ಕಳೆದ ಬಜೆಟ್‌ನಲ್ಲಿ ಕಾಯ್ದಿರಿಸಲಾಗಿದ್ದ ೯೦ ಕೋಟಿ ರೂ.ಗಳನ್ನು ಸಮರ್ಪಕ ವಾಗಿ ನಿಯೋಜಿತ ಉzಶಕ್ಕೆ ಬಳಸಿಕೊಳ್ಳಲಾಗಿದೆ ಎಂದರು.
ನಿಗಮದ ಸಾಲ-ಸೌಲಭ್ಯ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಬ್ಯಾಂಕುಗಳ ವ್ಯವಸ್ಥಾಪಕರು ಅನಗತ್ಯ ವಿಳಂಬ, ಕಿರಿಕಿರಿ, ಅಲೆದಾಟ ಮಾಡಿಸುತ್ತಿ ರುವುದು ಗಮನಕ್ಕೆ ಬಂದಿದೆ. ಈ ರೀತಿಯ ಧೋರಣೆಯನ್ನು ತಿದ್ದಿಕೊಂಡು ಅರ್ಹರಿಗೆ ಸಕಾಲದಲ್ಲಿ ಸೌಲಭ್ಯವನ್ನು ನೀಡುವಂತೆ ಅವರು ಸೂಚಿಸಿದ ಅವರು, ಅರ್ಹರಿಗೆ ಸೌಲಭ್ಯಗಳನ್ನು ವಿತರಿಸುವಲ್ಲಿ ನಿಯಮದಲ್ಲಿ ಅಲ್ಪಮಟ್ಟಿನ ಸಡಿಲಿಕೆ ಮಾಡಿಕೊಂಡು ಮಾನವೀಯ ನೆಲೆಯಲ್ಲಿ ಸೌಲಭ್ಯ ನೀಡಿ ಎಂದರು.
ಜಿಪಂ ಸಿಇಒ ಹೇಮಂತ್ ಅವರು ಮಾತನಾಡಿ, ಸರ್ಕಾರದ ಯಾವುದೇ ಯೋಜನೆಯಡಿಯಲ್ಲಿ ಸೌಲಭ್ಯ ವಿತರಿಸಲು ಅನಗತ್ಯ ವಿಳಂಬ ಮಾಡದಂತೆ ಎ ಬ್ಯಾಂಕುಗಳ ಶಾಖಾ ವ್ಯವಸ್ಥಾಪಕರಿಗೆ ಸೂಚನೆ ನೀಡುವಂತೆ ಜಿ ಮಾರ್ಗದರ್ಶಿ ಬ್ಯಾಂಕಿನ ವ್ಯವಸ್ಥಾಪಕರಿಗೆ ಸೂಚಿಸಿದರು.
ನಿಗಮದ ವ್ಯವಸ್ಥಾಪಕ ನಿರ್ದೇಶಕರ ಚಂದ್ರಾನಾಯ್ಕ್ ಅವರು ಮಾತನಾಡಿ, ಭೋವಿ ಅಭಿವೃದ್ಧಿ ನಿಗಮ ಸ್ಥಾಪನೆಯಾಗಿ ಹತ್ತು ವರ್ಷಗಳು ಪೂರೈಸುತ್ತಿರುವ ಈ ಶುಭ ಸಂದರ್ಭದಲ್ಲಿ ಭೋವಿ ಜನಾಂಗದವರನ್ನು ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಾಮಾಜಿಕವಾಗಿ ಮೇಲುತ್ತುವುದು ಮುಖ್ಯ ಉzಶವಾಗಿದೆ. ಅದಕ್ಕಾಗಿ ನಿಗಮದಿಂದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಕುರಿ-ಮೇಕೆ ಸಾಕಾಣಿಕೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಹೈನುಗಾರಿಕೆ, ಸ್ವಾವಲಂಬಿ ಸಾರಥಿ ಯೋಜನೆ ಮೈಕ್ರೋಕ್ರೆಡಿಟ್ಯೋಜನೆ, ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಮುಂತಾದ ಹಲವು ಜನಪ್ರಿಯ ಯೋಜನೆಗಳನ್ನು ಜರಿಗೊಳಿಸಲಾಗಿದ್ದು, ಅರ್ಹರು ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಂತೆ ಅವರು ಮನವಿ ಮಾಡಿದರು.
ಸಮಾಜ ಕಲ್ಯಾಣ ಇಲಾಖೆಯ ಜಿ ಅಧಿಕಾರಿ ಮಶಪ್ಪ, ಹೆಚ್ಚುವರಿ ಜಿ ಪೊಲೀಸ್‌ಅಧೀಕ್ಷಕ ಕಾರಿಯಪ್ಪ ಇನ್ನಿತರರಿದ್ದರು.


