ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ನಿವೇಶನಗಳ ಅತಿಕ್ರಮಣ ತೆರವಿಗೆ ಆಗ್ರಹ…

Share Below Link

ಶಿವಮೊಗ್ಗ: ಗೋಪಾಲಗೌಡ ಬಡಾವಣೆಯಲ್ಲಿರುವ ಮಹಾನಗರ ಪಾಲಿಕೆ ಹಾಗೂ ಖಾಸಗಿ ನಿವೇಶನಗಳ ಅತಿಕ್ರಮಣ ತೆರವುಗೊಳಿಸಲು ಒತ್ತಾಯಿಸಿ ಗೋಪಾಲಗೌಡ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ಇಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಪಾಲಿಕೆ ೧೭ನೇ ವಾರ್ಡ್‌ನ ಗೋಪಾಲಗೌಡ ಬಡಾವಣೆಯ ಭಾರ್ಗವಿ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ಪಾಲಿಕೆಗೆ ಸೇರಿದ ಖಾಲಿ ನಿವೇಶನಗಳಿವೆ. ಇದಕ್ಕೆ ಹೊಂದಿ ಕೊಂಡಂತೆ ಪಾಲಿಕೆ ಕಸ ವಿಲೇವಾರಿ ಘಟಕ ತೆರೆದಿದೆ. ಇಲ್ಲಿ ಉಳಿದ ಜಗಕ್ಕೆ ಯಾವುದೇ ತಡೆಗೋಡೆ ನಿರ್ಮಿಸಿಲ್ಲ. ಇದನ್ನು ಗಮನಿಸಿದ ಕೆಲವು ಮಾಜಿ ಜನಪ್ರತಿನಿಧಿಗಳು, ಪ್ರಭಾವಿಗಳು, ಹಾಲಿ ಜನಪ್ರತಿನಿಧಿಗಳ ಕುಮ್ಮಕ್ಕಿನಿಂದ ಆಸ್ತಿ ಕಬಳಿಸಲು ಹೊರಟಿದ್ದಾರೆ ಎಂದು ಮನವಿಯಲ್ಲಿ ದೂರಲಾಗಿದೆ.
ಆದ್ದರಿಂದ ಪಾಲಿಕೆಗೆ ಸೇರಿದ ಈ ಜಗವನ್ನು ಉಳಿಸಿಕೊಳ್ಳಬೇಕು. ಒತ್ತುವರಿ ಮಾಡಿದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳ ಬೇಕು. ಪಾಲಿಕೆಯ ಆಸ್ತಿಗೆ ಸಂಬಂಧಿಸಿದಂತೆ ನಕಲಿ ದಾಖಲೆಗಳನ್ನು ಸೃಷ್ಠಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಮತ್ತು ಈ ಜಗದಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ಪಾರ್ಕ್ ಅಥವಾ ಕ್ರೀಡಾಂಗಣ ನಿರ್ಮಿಸಬೇಕು ಎಂದು ಆಗ್ರಹಿಸಲಾಗಿದೆ.
ಪ್ರಮುಖರಾದ ಜಿ.ಡಿ. ಮಂಜುನಾಥ್, ಟಿ.ಡಿ. ಗೀತೇಂದ್ರ ಗೌಡ, ಜಯಣ್ಣ ಇನ್ನಿತರರಿದ್ದರು.