ಜಿಲ್ಲಾ ಸುದ್ದಿತಾಜಾ ಸುದ್ದಿ

ಟ್ರಕ್ ಟರ್ಮಿನಲ್ ನಿರ್ಮಿಸಲು ಆಗ್ರಹ…

Share Below Link

ಶಿವಮೊಗ್ಗ : ಶಿವಮೊಗ್ಗದಲ್ಲಿ ಟ್ರಕ್ ಟರ್ಮಿನಲ್ ನಿರ್ಮಿಸಬೇಕೆಂದು ಆಗ್ರಹಿಸಿ ಜಿಲ್ಲಾ ಲಾರಿ ಮಾಲೀಕರ ಒಕ್ಕೂಟದ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಶಿವಮೊಗ್ಗ ನಗರವನ್ನು ಸ್ಮಾರ್ಟ್‌ಸಿಟಿ ಎಂದು ಘೋಷಿಸಲಾಗಿದೆ. ಆದರೆ, ನಗರದ ಯಾವುದೇ ಸ್ಥಳದಲ್ಲಿ ಸರಕು ಸಾಗಣಿಕೆ ವಾಹನಗಳ ನಿಲುಗಡೆಗೆ ಜಗವೇ ಇಲ್ಲದಂತಾಗಿದೆ. ಮತ್ತು ಹಲವು ಕಡೆ ಸಾಗಣಿಕೆ ವಾಹನಗಳ ನಿಲುಗಡೆಯನ್ನೇ ನಿಷೇಧಿಸಲಾಗಿದೆ. ಇದರಿಂದ ಲಾರಿ ಮಾಲೀಕರಿಗೆ ತುಂಬಾ ತೊಂದರೆಯಾಗಿದೆ ಎಂದು ದೂರಿದರು.
ಸರಕು ಸಾಗಣಿಕೆ ವಾಹನಗಳ ನಿಲುಗಡೆಗೆ ಅನುಕೂಲವಾಗುವಂತೆ ನಗರದಲ್ಲಿ ಟ್ರಕ್ ಟರ್ಮಿನಲ್ ಅನ್ನು ಕೂಡಲೇ ನಿರ್ಮಿಸಿಕೊಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಈಗಾಗಲೇ ಲಾರಿ ಮಾಲೀಕರ ಸಂಕಷ್ಟ ಹೆಚ್ಚಿದೆ. ಡೀಸೆಲ್ ಬೆಲೆ ಹೆಚ್ಚಿಸಲಾಗಿದೆ. ರಸ್ತೆ ತೆರಿಗೆಯೂ ಹೆಚ್ಚಿದೆ. ಈ ಎಲ್ಲಾ ಹೆಚ್ಚುವರಿಗಳನ್ನು ಬಾಡಿಗೆ ರೂಪದಲ್ಲಿ ವಾಪಸ್ ಪಡೆಯಲು ಸಾಧ್ಯವಾಗುತ್ತಿಲ್ಲ. ಸಾರಿಗೆ ಉದ್ಯಮ ಉಳಿಯಲು ಸರ್ಕಾರ ಸಹಕರಿಸಬೇಕು ಎಂದು ಕೋರಿದೆ.
ಈ ಸಂದರ್ಭದಲ್ಲಿ ಲಾರಿ ಮಾಲೀಕರ ಸಂಘದ ಜಿಲ್ಲಾಧ್ಯಕ್ಷ ತಲ್ಕಿನ್ ಅಹಮ್ಮದ್, ಪದಾಧಿಕಾರಿಗಳಾದ ವೈ.ಹೆಚ್. ನಾಗರಾಜ್, ಭೋಜರಾಜ್, ಜಗನ್ನಾಥ್, ಏಜಜ್ ಅಹಮ್ಮದ್, ಅಜ್ಗರ್ ಪಾಶಾ, ಬಾಬು ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *